ಧಾರವಾಡ | ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಕಾರ್ಯಾಗಾರ

Date:

ಧಾರವಾಡ ಅಂಜುಮನ್ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಅಂಜುಮನ ಅಲುಮ್ನಿ ಅಸೋಸಿಷೇನ್ ಸಂಯುಕ್ತ ಆಶ್ರಯದಲ್ಲಿ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ. ಐ ಎ ಮುಲ್ಲಾ ವಹಿಸಿಕೊಂಡಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಹುಬ್ಬಳ್ಳಿಯ ಚೇತನ್ ಬಿಸಿನೆಸ್ ಸ್ಕೂಲ್ ಡೀನ್ ಕಿರಣ್ ಕುಮಾರ್ ಗಲಗಲಿ ಮಾತನಾಡಿ, ವಿದ್ಯಾರ್ಥಿಗಳು ಪದವಿಯ ನಂತರದ ಜೀವನದಲ್ಲಿ ತಮ್ಮ ಕೌಶಲ್ಯದ ಪ್ರದರ್ಶನ ಹಾಗೂ ಸಂವಹನವನ್ನು ನಿರ್ವಹಿಸುವ ಕುರಿತು ವಿವರಿಸುತ್ತಾ, ವಿದ್ಯಾರ್ಥಿಗಳು ತಮ್ಮ ಜಾಲಬಂಧವನ್ನು ವೃದ್ಧಿಪಡಿಸಿಕೊಳ್ಳುವ ಬಗ್ಗೆ ತಿಳಿಸಿದರು. ಉದ್ಯೋಗಕ್ಕಾಗಿ ಸಲ್ಲಿಸುವ ರೆಸ್ಯುಮ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಯಾವ ರೀತಿಯಲ್ಲಿ ಸೇರಿಸಬೇಕು ಎಂಬುದನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಐಕ್ಯುಎಸಿ ಸಂಯೋಜಕ ಡಾ. ಏನ್ ಬಿ ನಾಲತವಾಡ, ಹುಬ್ಬಳ್ಳಿಯ ಚೇತನ್ ಬಿಸಿನೆಸ್ ಸ್ಕೂಲ್‌ನ ಮಲ್ಲಿಕಾರ್ಜುನ ಅರ್ಕಸಾಲಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ. ಉಲ್ಲಾಸ ದೊಡ್ಡಮನಿ, ಪ್ರೊ. ಜ್ಯೋತಿ ಪಾಟೀಲ್, ಪ್ರೊ. ಶಬಿನಾ ಬೀಡಿ, ಪ್ರೊ. ಮುತ್ತುಬಾಯಿ ದರಗದ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಸರ್.ಸಿದ್ದಪ್ಪ ಕಂಬಳಿ, ಉತ್ತರ ಕರ್ನಾಟಕದಲ್ಲಿ ಅಕ್ಷರಜ್ಯೋತಿ ಪ್ರಜ್ವಲಿಸಲು ಹೋರಾಡಿದವರು: ರಾಮಪ್ಪ ಬಡಿಗೇರ

ಕಾರ್ಯಕ್ರಮದಲ್ಲಿ ಪ್ರಾರ್ಥನಾ ಗೀತೆಯನ್ನು ಸವಿತಾ ವಾಲೀಕರ, ಕುರಾನ್ ಪಠಣವನ್ನು ಆಲಿಜನಾಬ ಸೌದಾಗರ ಹಾಗೂ ವಿಭಾಗದ ಮುಖ್ಯಸ್ಥ ಪ್ರೊ. ಉಲ್ಲಾಸ್ ದೊಡ್ಡಮನಿ ಸ್ವಾಗತ ಭಾಷಣವನ್ನು ಮಾಡಿದರು. ಕು. ನಯಾಗಾಕ ಡೆಬ್ರಾ ವಂದನಾರ್ಪಣೆ, ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕು. ಸಾದಿಯ ಮೊರಬ ನಿರೂಪಿಸಿದರು. ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...