ಧಾರವಾಡ | ಜ್ಞಾನ ಹೆಚ್ಚಾದಂತೆ ಜಾತೀಯತೆ ಹೆಚ್ಚಾಗುತ್ತಿದೆ: ಎಸ್.ಎಸ್.ಪಾಟೀಲ

Date:

ಆಧುನಿಕ ಕಾಲದ ಇಂದಿನ ದಿನಮಾನದಲ್ಲಿ ಜ್ಞಾನ-ವಿಜ್ಞಾನ-ತಂತ್ರಜ್ಞಾನ ಹೆಚ್ಚಾದಂತೆ ಸಾಮಾಜಿಕ ಅನಿಷ್ಟ ಆಚರಣೆಗಳಾದ ಜಾತೀಯತೆ, ಅತಿಯಾದ ಧಾರ್ಮಿಕತೆ, ಸ್ವಾರ್ಥ ಹೆಚ್ಚಾಗುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದು ಮಾಜಿ ಸಹಕಾರ ಸಚಿವ ಎಸ್.ಎಸ್.ಪಾಟೀಲ ವಿಷಾದ ವ್ಯಕ್ತಪಡಿಸಿದರು.

ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಗಣಕರಂಗ ಮತ್ತು ವಚನಮಂದಾರ ಸಾಹಿತ್ಯ ಪೌಂಡೇಶನ್ ಸಂಯುಕ್ತವಾಗಿ ಆಯೋಜಿಸಿದ್ದ ಬುದ್ಧ-ಬಸವ-ಬಾಬಾಸಾಹೇಬರು ತ್ರಿಬಿ ಲೇಖನಗಳ ಸಂಕಲನ ಲೋಕಾರ್ಪಣೆ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿ, ಎಲ್ಲಾ ರಂಗಗಳಲ್ಲಿಯೂ ಮುಂದುವರೆಯುತ್ತಿರುವ ನಮ್ಮ ದೇಶವು ಜ್ಞಾನ-ವಿಜ್ಞಾನದೊಂದಿಗೆ ಸಾಮಾಜಿಕವಾಗಿಯೂ ಮುಂದುವರೆಯಬೇಕಾಗಿತ್ತು. ಆದರೆ ಸಮಾಜಕ್ಕೆ ಬೇಡವಾದ ಅಮಾನವೀಯ ಸಂಗತಿಗಳನ್ನು ತನ್ನೊಳಗಿಟ್ಟುಕೊಂಡು ಪೋಷಿಸುತ್ತಿರುವುದು ಬೇಸರದ ಸಂಗತಿಯಾಗಿದೆ. ಇಂಥಹ ಸಾಮಾಜಿಕ ಅನಿಷ್ಟಗಳ ವಿರುದ್ಧ ಬುದ್ಧ-ಬಸವ-ಬಾಬಾಸಾಹೇಬರು ಆಯಾ ಕಾಲಘಟ್ಟದಲ್ಲಿ ಜಾಗೃತಿ ಮೂಡಿಸಿರುವುದನ್ನು ಇಂಥಹ ಕೃತಿಗಳ ಮೂಲಕ ಮರುನೆನಪಿಸಿಕೊಳ್ಳಬೇಕಾಗಿದೆ ಎಂದರು.

ಕೃತಿಯನ್ನು ಲೋಕಾರ್ಪಣೆಗೊಳಿಸಿದ ವಚನಮಂದಾರ ಸಾಹಿತ್ಯ ಪೌಂಡೇಶನ್ ಅಧ್ಯಕ್ಷ ಡಾ.ವಿಜಯಕುಮಾರ ಕಮ್ಮಾರ ಮಾತನಾಡಿ, ಕೆಲವು ಹಿತಾಸಕ್ತಿಗಳು ಇಂದಿನ ಸಮಾಜವನ್ನು ವ್ಯವಸ್ಥಿತವಾಗಿ ಎಲ್ಲಾ ರೀತಿಯಿಂದ ಕಲುಷಿತಗೊಳಿಸುತ್ತಿವೆ. ಅದಕ್ಕೆ ಪ್ರತಿರೋಧಕ ಶಕ್ತಿಯ ಚುಚ್ಚುಮದ್ದುಗಳಂತೆ ಬುದ್ಧ-ಬಸವ-ಬಾಬಾಸಾಹೇಬರ ಚಿಂತನೆಗಳನ್ನು ಬಳಸಿಕೊಂಡು ಸಮಾಜದಲ್ಲಿ ಸಾಮರಸ್ಯ ಮೂಡಿಸುವುದು ಅವಶ್ಯಕವಾಗಿದೆ. ಅದಕ್ಕೆ ಪೂರಕವಾಗಿ ಗಣಕರಂಗ ಪ್ರಕಾಶನದ ಈ ಕೃತಿಯು ಸ್ಪಂಧಿಸುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃತಿಯನ್ನು ಪರಿಚಯಿಸುತ್ತಾ ಸಾಹಿತಿ ಸುನೀತಾ ಮೂರಶಿಳ್ಳಿ ಮಾತನಾಡಿ, ಸ್ಪರ್ಧೆಯನ್ನು ಆಯೋಜಿಸುವ ಮೂಲಕ, ಹೊಸಬರಿಂದ ಲೇಖನಗಳನ್ನು ಬರೆಸಿ, ಅವುಗಳನ್ನು ಸಂಪಾದಿಸಿ, ಪುಸ್ತಕ ರೂಪದಲ್ಲಿ ಪ್ರಕಟಿಸುತ್ತಿರುವುದು ಗಣಕರಂಗ ಸಂಸ್ಥೆಯ ಮಾತೃಹೃದಯದ ಪ್ರೋತ್ಸಾಹಕ ಗುಣವನ್ನು ಗಮನಿಸಬಹುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೃತಿಯ ಸಂಪಾದಕ ಸಿದ್ಧರಾಮ ಹಿಪ್ಪರಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರೊ.ಶಶಿಧರ ತೋಡಕರ್ ಮತ್ತು ಸ್ಪರ್ಧೆಯ ತೀರ್ಪುಗಾರ ಡಾ.ಸದಾಶಿವ ಮರ್ಜಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಡಾ.ಮೃತ್ಯುಂಜಯ ಶೆಟ್ಟರ್ ಹಾಗೂ ಸಂಗಡಿಗರು ವಚನಗಾಯನ ಪ್ರಸ್ತುತಪಡಿಸಿದರು. ಡಾ.ಪ್ರಕಾಶ ಮಲ್ಲಿಗವಾಡ ಪ್ರಾರ್ಥಿಸಿದರು. ಶರಣಸಾಹಿತಿ ಡಾ.ಪುಷ್ಪಾವತಿ ಶಲವಡಿಮಠ ನಿರೂಪಿಸಿದರು. ನಂತರ ಸ್ಪರ್ಧಾವಿಜೇತರಿಗೆ ಬಹುಮಾನ, ಪ್ರಮಾಣಪತ್ರ ವಿತರಿಸಲಾಯಿತು. ಪ್ರೊ.ಎನ್.ಬಿ.ಹವಳಪ್ಪನವರ, ವೈ.ಬಿ.ಚಲವಾದಿ, ಶ್ರೀಮಂತ ಹೊಸಮನಿ, ಸದಾಶಿವ ಅವಧಿ, ನಟರಾಜ ಮೂರಶಿಳ್ಳಿ, ಭೀಮನಗೌಡ ಕಠಾವಿ, ಅನುಪಮಾ ಪಾಟೀಲ, ಡಾ.ಉಮಾ ಅಕ್ಕಿ, ಶಂಕ್ರಮ್ಮ ಗಾಡದ, ಪಾರ್ವತಿದೇವಿ ತುಪ್ಪದ, ಸಂಜೀವ ಪೂಜಾರ, ಬಸವರಾಜ ತೋಟಗೇರ, ಪದ್ಮಾ ಉಮರ್ಜಿ, ಶ್ರೀಮತಿ ಮಲ್ಲಮ್ಮ ಕಮ್ಮಾರ, ಗಂಗಾದೇವಿ ಚಕ್ರಸಾಲಿ ಮೊದಲಾದವರು ಕಾರ್ಯಕ್ರಮದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...