ಧಾರವಾಡ | ಓದುವ ಮಕ್ಕಳು ಆಯುಧಗಳ ಹಿಡಿದು ಬೀದಿಗೆ ಇಳಿದಿದ್ದಾರೆ: ರಂಜಾನ್ ದರ್ಗಾ ಕಳವಳ

Date:

ಓದುವ ಮಕ್ಕಳ ಕೈಯಲ್ಲಿ ಆಯುಧಗಳನ್ನು ಕೊಟ್ಟು ಬೀದಿಯಲ್ಲಿ ಬಿಡುವ ವಾತಾವರಣ ಸೃಷ್ಟಿಯಾಗಿದೆ ಎಂದು ಅಕ್ಟೊಬರ್ 18ರಂದು ಧಾರವಾಡದ ಅಂಬೇಡ್ಕರ್ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ವತಿಯಿಂದ ಸಾರ್ವಜನಿಕ ಶಿಕ್ಷಣ ಮತ್ತು ಹಾಸ್ಟೆಲ್ ಗಳ ಬಲವರ್ಧನೆಗಾಗಿ ಏರ್ಪಡಿದ್ದ ಶೈಕ್ಷಣಿಕ ಜಾಥಾದಲ್ಲಿ ಸಾಹಿತಿ ರಂಜಾನ್ ದರ್ಗಾ ಮಾತನಾಡಿ ಕಳವಳಪಟ್ಟರು.

ಈ ವೇಳೆ ಸಾಹಿತಿ ಅವರು ಮಾತನಾಡುತ್ತಾ, ಯೋಗ್ಯ ಶಿಕ್ಷಣ, ಉದ್ಯೋಗ, ಆರೋಗ್ಯ ಸಿಗುತ್ತಿಲ್ಲವಾದ ಕಾರಣ ಖಾಸಗಿಕಾರಣ. ಸರ್ವರಿಗೂ ಸಮಾನ ಶಿಕ್ಷಣ ಮತ್ತು ಉದ್ಯೋಗ ಮೂಲಭೂತ ಹಕ್ಕಾಗಬೇಕು. ಹಿರಿಯರು ಮುಂದಿನ ಪೀಳಿಗೆಗೆ ಹೀನಾಯ, ಕೋಮುವಾದ, ಒಣ ಸಂಘರ್ಷ ಮತ್ತು ಅಸ್ಪೃಶ್ಯತೆಯನ್ನು ಆಚರಿಸುವ, ಹಿಂಸೆಯನ್ನು ಪ್ರಚೋದಿಸುವ ಸಮಾಜವನ್ನು ಬಿಟ್ಟು ಹೋಗುತ್ತಿದ್ದಾರೆ.

ಸಮುದಾಯದ ಅಧ್ಯಕ್ಷ ಬಿ ಐ ಈಳಗೇರಿ ಮಾತನಾಡಿ, ಪ್ರಜಾಪ್ರಭುತ್ವ, ಸಮಾಜವಾದವು ಸ್ವಾತಂತ್ರ್ಯದ ನಂತರ ಕಳೆದುಹೋಗಿವೆ. ಪ್ರಜಾಪ್ರಭುತ್ವ ಸತ್ಯನಾಶವಾಗಿದ್ದು, ಎಲ್ಲರು ಕೂಡಿ ಬಾಳುವ ಸಂಸ್ಕೃತಿ ಹರಿದುಹಂಚಿ ಹೋಗಿದೆ. ಎಲ್ಲ ರೀತಿಯ ಅನುಕೂಲಗಳು ಉಳ್ಳವರ ಪಾಲಾಗಿವೆ. ಹಾಗೆಯೇ ಸರ್ಕಾರವು ಹಾಸ್ಟೆಲ್ ಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ರವಿಕುಮಾರ ಮಾಳಗಿ ಮಾತನಾಡಿ, ರಾಜ್ಯದ ವಿಶ್ವವಿದ್ಯಾಲಯಗಳಿಗೆ ಅನುಧಾನ ನೀಡಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದ್ದು, ಬಿಜೆಪಿಯಿಂದ ಉನ್ನತ ಶಿಕ್ಷಣ ಹಾಳಾಗುತ್ತಿದೆ. ವರ್ಷಕ್ಕೆ 2000 ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಹೇಳಿದ್ದ ಪ್ರಧಾನಿ ಮೋದಿಯವರೇ ಯುವಕರು ಉದ್ಯೋಗಕ್ಕಾಗಿ ಧ್ವನಿ ಎತ್ತಿದಾಗ ಪಕೋಡ ಮಾರುವ ಸಲಹೆ ಕೊಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪ್ರಗತಿಪರರರು, ಹೋರಾಟಗಾರರು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...