ಭವಿಷ್ಯತ್ತಿನ ಬೆಳಕಾಗಿರುವ ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಸೌಲಭ್ಯ ಹಾಗೂ ಸೂಕ್ತ ಪರಿಸರ ಸೃಷ್ಟಿಸುವುದು ನಮ್ಮ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕು ಮತ್ತು ಕರ್ತವ್ಯಗಳನ್ನು ಕಾಪಾಡುವದರೊಂದಿಗೆ ಅವರ ಬೇಕು ಬೇಡಿಕೆಗಳಿಗೆ ಸ್ಪಂದಿಸುವುದರಿಂದ ಗ್ರಾಮದ ಅಭಿವೃದ್ಧಿಗೆ ಪೂರಕ ಕಾರ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ನ. 18ರಂದು ಧಾರವಾಡ ತಾಲೂಕಿನ ಮಾದನಭಾವಿ ಗ್ರಾಮದ ಗ್ರಾಮ ಪಂಚಾಯತದಿಂದ ಗ್ರಾಮದ ಸರಕಾರಿ ಶಾಲಾ ಆವರಣಲ್ಲಿ ಆಯೋಜಿಸಿದ್ದ ಗ್ರಾಪಂ ಮಕ್ಕಳ ವಿಶೇಷ ಗ್ರಾಮ ಸಭೆ ಉದ್ಘಾಟಿಸಿ, ಮಾತನಾಡಿದರು.
ಇದನ್ನೂ ಓದಿ ಧಾರವಾಡ | ಹಿಂದುತ್ವ ರಾಜಕಾರಣ, ಸಾಂಸ್ಥಿಕ ಭ್ರಷ್ಟಾಚಾರ ಇವೆರಡು ಜ್ವಲಂತ ಸಮಸ್ಯೆಗಳು: ಡಾ. ಮೂಡ್ನಾಕೂಡು ಚಿನ್ನಸ್ವಾಮಿ
ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಅವರ ಭವಿಷ್ಯ ಕೇವಲ ಶಾಲೆಯ ಹೊಣೆಯಲ್ಲ. ಇದು ನಮ್ಮ ಸಮುದಾಯದ ಸಂಯುಕ್ತ ಜವಾಬ್ದಾರಿಎಂದರು.





