ಧಾರವಾಡ | ಮನರೇಗಾ ಮುಚ್ಚಿಹಾಕಿದರೆ ಬಂಡವಾಳಶಾಹಿಗಳಿಗೆ ಅನುಕೂಲ: ನಿಂಗಮ್ಮ ಸವಣೂರ

Date:

ಜಿ ರಾಮ್ ಜಿ ಮಸೂದೆಯನ್ನು ತಿರಸ್ಕರಿಸಿ ಮನರೇಗಾ ಉಳಿಸಿ ಎಂಬ ಘೋಷವಾಕ್ಯದಲ್ಲಿ ಕಾರ್ಮಿಕರು ಮತ್ತು ಯಾವುದೆ ಕಾರ್ಮಿಕ ಗುಂಪುಗಳ ಜೊತೆ ಸಮಾಲೋಚನೆ ನಡೆಸದೆ ರಚಿಸಿದ ವಿಬಿ ಜಿ ರಾಮ್ ಜಿ ಮಸೂದೆಯು ಮನರೇಗಾ 2025 ಅನ್ನು ಪೂರ್ಣ ಪ್ರಮಾಣದಲ್ಲಿ ಕಿತ್ತೊಗೆಯುವ ಹುನ್ನಾರವಾಗಿದೆ. ಉದ್ಯೋಗ ಖಾತ್ರಿಯನ್ನು ಕೇಂದ್ರ ಸರಕಾರದ ಬಿಗಿ ಮುಷ್ಟಿಯಿಂದ ಕೇಂದ್ರಿಕೃತ, ವಿವೇಚನಾಯುಕ್ತ, ಬಜೆಟ್ ನ್ನು ನಿಯಂತ್ರಿಸುವ ಯೋಜನೆಯನ್ನಾಗಿ ಬದಲಾಯಿಸಲು ಹೊರಟಿದೆ. ಇದು ಬಡವರ ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಮತ್ತು ಮನರೇಗಾ ಅನ್ನು ಮುಚ್ಚಿಹಾಕಿದರೆ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕಿ ನಿಂಗಮ್ಮ ಸವಣೂರು ಹೇಳಿದರು.

ಈ ಕುರಿತು ಧಾರವಾಡದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿದ್ದರು. ನಂತರ ಈದಿನ.ಕಾಮ್ ಜತೆಗೆ ಮಾತನಾಡಿದ ಅವರು, ಜಿ ರಾಮ್ ಜಿ ಮಸೂದೆಯ ಪ್ರಕಾರ ಪ್ರತಿ ವರ್ಷ ರಾಜ್ಯವಾರು “ಬಜೆಟ್ ಹಂಚಿಕೆಯನ್ನು ಕೇಂದ್ರ ಸರಕಾರ ನಿರ್ಧರಿಸುತ್ತದೆ ಹಾಗೂ ಯಾವುದೆ ಹೆಚ್ಚುವರಿ ವೆಚ್ಚವನ್ನು ರಾಜ್ಯ ಸರಕಾರಗಳೇ ಭರಿಸಬೇಕು. ಎನ್ನಲಾಗಿದೆ. ಪ್ರತಿ ರಾಜ್ಯದಲ್ಲಿ ಒದಗಿಸಲಾಗುವ ಮಾನವ ದಿನಗಳ ಸಂಖ್ಯೆಯ ಮೇಲೆ ಮಿತಿಯನ್ನು ಹೇರುತ್ತದೆ. ಈಗಿರುವ ಬಜಟ್‌ನಲ್ಲಿ ಕೇಂದ್ರ ಸರಕಾರವು ಪ್ರತಿ ಕುಟುಂಬಕ್ಕೆ ವರ್ಷಕ್ಕೆ 50 ದಿನಗಳ ಕೆಲಸವನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಬಜೆಟ್‌ನ್ನು ಕೇಂದ್ರ ಸರಕಾರವೆ ಮಿತಿಗೊಳಿಸುತ್ತ ಹಣವನ್ನ ಸಂಗ್ರಹಿಸಲು ರಾಜ್ಯಗಳ ಮೇಲೆ ಇನ್ನಷ್ಟು ಹಣದ ಹೊರ ಹಾಕುವ ಮೂಲಕ ಬಿಜೆಪಿ ಸರಕಾರ 125 ದಿನಗಳ ಉದ್ಯೋಗದ ಹುಸಿ ಭರವಸೆ ನೀಡುತ್ತಿದೆ.

ಬಂಡವಾಳಶಾಹಿಗಳನ್ನು ಮಾತ್ರವೇ ಬದುಕಿಸುವ ಮತ್ತು ಕ್ರಮೇಣವಾಗಿ ಬಡ ಕೂಲಿ ಕಾರ್ಮಿಕರು ಪ್ಯಾಕ್ಟರಿಗಳಿಗೆ ಕೆಲಸ ಕೇಳಿಕೊಂಡು ಹೋಗುವ ವಾತಾವರಣ ಸೃಷ್ಟಿಸಲು ಉದ್ಯೋಗ ಖಾತ್ರಿ ಯೋಜನೆಯನ್ನು ಸಂಪೂರ್ಣವಾಗಿ ಇಲ್ಲವಾಗಿಸುವ ಹುನ್ನಾರವಾಗಿದೆ. ಮತ್ತು ಈ ಮೂಲಕ ಮಹಾತ್ಮಾ ಗಾಂಧೀಜಿ ಹೆಸರನ್ನೂ ಕೂಡ ತೆಗೆದುಹಾಕಲಾಗಿದೆ. ಈ ಮೂಲಕ ಬಡ ಕೂಲಿ ಕಾರ್ಮಿಕರನ್ನು ನಾಶ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹಾಗೂ ಉದ್ಯೋಗ ಸೃಷ್ಟಿ ಮಾಡುವ ಪ್ರಧಾನಿಯವರು ಉದ್ಯೋಗವನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಮನರೇಗಾ ಯೋಜನೆಗೆ ಮರಣ ಶಾಸನವಾದ ‘ಜಿ ರಾಮ ಜಿ ಮಸೂದೆ’ಯ ಪ್ರತಿ ಸುಟ್ಟು ಪ್ರತಿಭಟನೆ

ವರ್ಷದಲ್ಲಿ ಎರಡು ತಿಂಗಳು ಕೆಲಸ ನಿರಾಕರಿಸುವುದರಿಂದ ಮಹಿಳೆಯರು, ಭೂಹಿನರು ಮತ್ತು ಇತರೆ ಅಂಚಿನಲ್ಲಿರುವ ಸಮುದಾಯಗಳ ಉದ್ಯೋಗದ ಹಕ್ಕಿನಿಂದ ವಂಚಿತರಾಗುತ್ತಾರೆ. ಕಾಮಗಾರಿಗಳನ್ನು ಕೇಂದ್ರ ಸರಕಾರ ತಾನೆ ನಿರ್ಧರಿಸುವ ಮೂಲಕ ಗ್ರಾಮ ಸಭೆಗಳನ್ನು ದರ್ಬಲಗೊಳಿಸಿದೆ. ಕಾರ್ಮಿಕರ ಹಕ್ಕುಗಳನ್ನು ನಿರಾಕರಿಸುವ ಹಾಗೂ ಗ್ರಾಮ ಪಂಚಾಯತಗಳನ್ನು ದುರ್ಬಲ ಪಡಿಸುವ ಮೂಲಕ ಸಾಮಾಜಿಕ ನ್ಯಾಯವನ್ನೆ ಅಣಕಿಸುವ ಈ ಮಸೂದೆಯನ್ನು ನಾವು ತಿರಸ್ಕರಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...