ಧಾರವಾಡ | ರೆಡಿಮೇಡ್ ಬಟ್ಟೆ ಕಂಪನಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

Date:

ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್‌ ಕಂಪನಿಗೆ ಗ್ರಾಹಕರ ಆಯೋಗ, ಒಂದು ತಿಂಗಳೊಳಗಾಗಿ ದೂರುದಾರ ಗ್ರಾಹಕ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸಹಿತ ಪೂರ್ತಿ ಹಣ ಸಂದಾಯ ಮಾಡುವಂತೆ ಆದೇಶಿಸಿದೆ.

ಜಿಲ್ಲೆಯ ಕಲಘಟಗಿ ತಾಲೂಕಿನ ಅಕ್ಕಿ ಓಣಿಯ ನಿವಾಸಿ ಅರುಣ್ ಕುಂಬಾರ ಎನ್ನುವವರು 2022ಆಗಸ್ಟ್ 28ರಂದು ಮಲೀಕ್ ಇಸ್ಮಾಯಿಲ್ ಎನ್ನುವವರ ಮಧ್ಯಸ್ಥಿಕೆಯಲ್ಲಿ, ಹುಬ್ಬಳ್ಳಿಯ ಸ್ಯಾಮ್ ಔಟ್‍ಫಿಟ್ ಫ್ಯಾಶನ್ ಪ್ರೈವೇಟ್ ಲಿಮಿಟೆಡ್ ಇವರಿಂದ ರೂ. 38,640 ರೂ. ಮೌಲ್ಯದ ಬಟ್ಟೆಗಳ ಬಾಕ್ಸ್‌ಗಳನ್ನು ಖರೀದಿಸಿದ್ದರು.

ಆದರೆ, ಸ್ಯಾಮ್ ಔಟ್‍ಫಿಟ್ ಫ್ಯಾಶನ್‌ನವರು ಒಪ್ಪಂದದಂತೆ ಬಟ್ಟೆಗಳ ಬಾಕ್ಸ್ ತಲುಪಿಸಿರಲಿಲ್ಲ. ಈ ಕುರಿತು ವಿಚಾರಿಸಿದಾಗ 2022ಸೆಪ್ಟೆಂಬರ್ 20ರಂದು ಕೇವಲ 9,396 ರೂ. ರಸೀದಿ ಕೊಟ್ಟಿದ್ದರು. ಹಲವು ಬಾರಿ ವಿಚಾರಿಸಿದರೂ ಅರುಣ್​ ಕುಂಬಾರ ಅವರಿಗೆ ಬಟ್ಟೆಗಳ ಬಾಕ್ಸ್ ಕೊಟ್ಟಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರಿಂದ ತನಗೆ ಮೋಸವಾಗಿದೆ. ಕಂಪನಿಯವರ ನಡುವಳಿಕೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಂದು ಅರುಣ್​ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ ಅವರು ವಿಚಾರಣೆ ನಡೆಸಿ, “ಕಂಪನಿಯವರು ಅರುಣ್​ ಅವರಿಂದ ಹಣ ಪಡೆದ ವಿಷಯವನ್ನು ಅಲ್ಲಗಳೆದಿಲ್ಲ. ಹಣ ಪಡೆದ ನಂತರ ಆ ಮೊತ್ತದ ಬಟ್ಟೆಗಳ ಬಾಕ್ಸ್‌ ಕೊಡುವುದು ಅವರ ಕರ್ತವ್ಯವಾಗಿರುತ್ತದೆ. ಬಟ್ಟೆಗಳ ಬಾಕ್ಸ್ ಸರಬರಾಜು ಮಾಡದೇ ಮೋಸ ಮಾಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ,” ಎಂದು ಅಭಿಪ್ರಾಯಪಟ್ಟಿದೆ.

ಸುದೀರ್ಘ ವಿಚಾರಣೆಯ ನಂತರ ಗ್ರಾಹಕರ ಆಯೋಗ ತೀರ್ಪು ನೀಡಿದ್ದು, ಒಂದು ತಿಂಗಳೊಳಗೆ ಅರುಣ್​ ಕುಂಬಾರ ಸಂದಾಯ ಮಾಡಿದ 38,640 ರೂ.ಗಳನ್ನು, ಹಣ ಕೊಟ್ಟ ದಿನದಿಂದ ಶೇ.8ರಂತೆ ಬಡ್ಡಿ ಸೇರಿಸಿ ಪೂರ್ತಿ ಹಣ ಸಂದಾಯ ಮಾಡುವಂತೆ ಆದೇಶಿಸಿದೆ. ಅರುಣ್​ ಅವರಿಗಾದ ಅನಾನುಕೂಲ ಮತ್ತು ಮಾನಸಿಕ ತೊಂದರೆಗಾಗಿ 10ಸಾವಿರ ರೂ. ಪರಿಹಾರ ಮತ್ತು ಪ್ರಕರಣದ ಖರ್ಚು ಐದು ಸಾವಿರ ರೂ. ಕೊಡುವಂತೆ ಆಯೋಗ ತೀರ್ಪು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...