ಧಾರವಾಡ | ನಿರಂತರ ಪರಿಶ್ರಮವೇ ಯಶಸ್ಸಿನ ಮೂಲಮಂತ್ರ: ಸದಾನಂದ ಅಮರಾಪುರ್

Date:

ಸಣ್ಣ ಸಣ್ಣ ಹಂತಗಳನ್ನು ಜಯಿಸಿ ಮುಂದೆ ಸಾಗುವವರೇ ಭವಿಷ್ಯದಲ್ಲಿ ದೊಡ್ಡ ಸಾಧನೆ ಮಾಡುತ್ತಾರೆ. ವಿದ್ಯಾರ್ಥಿಗಳಾಗಲಿ, ಶಿಕ್ಷಕರಾಗಲಿ ಅಥವಾ ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವವರಾಗಲಿ ಎಲ್ಲರಿಗೂ ನಿರಂತರ ಪರಿಶ್ರಮವೇ ಯಶಸ್ಸಿನ ಮೂಲಮಂತ್ರ ಎಂದು ಅಂಜುಮನ್ ಮಹಾವಿದ್ಯಾಲಯದಲ್ಲಿ ಎನ್‌ಎಸ್ಎಸ್ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ್ ಮಾತನಾಡಿದರು.

ಸಮಾಜದ ಹಾಗೂ ಶಿಕ್ಷಣ ಕ್ಷೇತ್ರದ ಪ್ರಗತಿಗೆ ನಿರಂತರ ಪ್ರಯತ್ನಗಳು ಅತ್ಯಾವಶ್ಯಕವಾಗಿದೆ. ಯಶಸ್ಸು ತಕ್ಷಣ ಸಿಗುವುದಿಲ್ಲ. ಒಂದು ಕಾರ್ಯವನ್ನು ಆರಂಭಿಸುವುದಷ್ಟೇ ಸಾಕಾಗುವುದಿಲ್ಲ, ಅದನ್ನು ಯಶಸ್ಸಿನ ತುದಿಗೆ ತಲುಪಿಸಲು ಹಠಮಾರಿ ಶ್ರಮ, ಧೈರ್ಯ ಮತ್ತು ದಿಟ್ಟತನ ಬೇಕಾಗುತ್ತದೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ. ಐ ಎ ಮುಲ್ಲಾ ಮಾತನಾಡಿ, ಸಮಾಜದಲ್ಲಿ ಶಾಂತಿ, ಅಭಿವೃದ್ಧಿ ಮತ್ತು ಸಮಾನತೆಯನ್ನು ಸಾಧಿಸಲು ಪ್ರತಿಯೊಬ್ಬರೂ ತಮ್ಮ ತಮ್ಮ ಜವಾಬ್ದಾರಿಗಳನ್ನು ಅರಿತು ನಿರಂತರ ಪ್ರಯತ್ನ ನಡೆಸಬೇಕು. ಇಂತಹ ಅಚಲ ಶ್ರಮದಿಂದಲೇ ನಮ್ಮ ಗುರಿಗಳನ್ನು ಸಾಕಾರಗೊಳಿಸಲು ಸಾಧ್ಯ ಎಂದು ಹೇಳಿದರು. ಡೇ ಸೆಲೆಬ್ರೇಶನ್ ಚೇರ್ಮನ್ ಡಾ. ಎಸ್ ಎಸ್ ಆದೋನಿ ಮಾತನಾಡುತ್ತಾ, ಮರವನ್ನು ನೆಡುವುದುರ ಜೊತೆಗೆ ಮರವನ್ನು ಬೆಳೆಸಬೇಕು ಎಂದು ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಭೂಗೋಳ ಶಾಸ್ತ್ರದ ಅಧ್ಯಯನದಿಂದ ಜೀವನಮಟ್ಟ ಉತ್ತಮಗೊಳ್ಳುತ್ತದೆ: ಡಾ. ಅಂಗಡಿ

ಡಾ. ಸೈಯದ್ ತಾಜ್ಜುನಿಸ್ಸಾ, ಸ್ವಾಗತಿಸಿದರು. ನಾಗರಾಜ್ ಕಂಕಣಿ ಪರಿಚಯಿಸಿದರು. ಐಕ್ಯೂಏಸಿಎಸ್‌ಸಿ ಕೋ-ಆರ್ಡಿನೇಟರ್ ಡಾ. ಎನ್. ಬಿ. ನಾಲತವಾಡ ಎನ್ಎಸ್ಎಸ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು, ಕುಮಾರಿ ಮಾಬುನ್ನಿ ದಫೇದಾರ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...