ಧಾರವಾಡ | ಗಾಂಧೀಜಿ ಸ್ಮರಣೆಯಿಂದ ಸಂಸ್ಕಾರ ಬೆಳೆದು, ನಡೆ-ನುಡಿ ಒಂದಾಗಿರಬೇಕು: ಭುವನೇಶ ಪಾಟೀಲ್

Date:

ಮಹಾತ್ಮಾ ಗಾಂಧೀಜಿ ತಮ್ಮ ಜೀವನದಲ್ಲಿ ನುಡಿದಂತೆ ನಡೆದರು ಮತ್ತು ನಡೆದಂತೆ ನುಡಿದರು. ಅವರ ಸ್ಮರಣೆಯೊಂದಿಗೆ ಅವರ ಜೀವನ ಸಂದೇಶಗಳನ್ನು, ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.

ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಉದ್ಘಾಟಿಸಿ, ತಾಲೂಕು ಹಂತದಲ್ಲಿ ಪ್ರಬಂಧ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಮಾತನಾಡಿದರು.

ಗಾಂಧೀಜಿ ಅವರದ್ದು, ಭಾರತವು ಸೂರ್ಯ ಚಂದ್ರರು ಇರುವವರೆಗೆ ಸ್ಮರಿಸುವಂತಹ ವ್ಯಕ್ತಿತ್ವ. ಸ್ವಾತಂತ್ರ್ಯ ಚಳುವಳಿಗೆ ತಮ್ಮನ್ನು ತಾವು ಅರ್ಪಿಸಿಕೊಂಡು ಬದುಕಿನ ಕೊನೆಯವರೆಗೂ ಆದರ್ಶರಾಗಿ ಉಳಿದುಕೊಂಡವರು. ಇಂತಹ ಮಹಾತ್ಮರ ಜೀವನ ಚರಿತ್ರೆ, ಜೀವನ ಸಂದೇಶ ಮತ್ತು ಅವರ ನೀತಿ ಬೊಧನೆಗಳು ಇಂದಿನ ಯುವ ಸಮಾಜಕ್ಕೆ ಸ್ಪೂರ್ತಿದಾಯಕ ಮತ್ತು ಮಾರ್ಗದರ್ಶಿ ಆಗಬೇಕು. ಅವರು ಪ್ರಯೋಗಿಸಿ, ಕಂಡುಕೊಂಡ ಸತ್ಯವನ್ನು ಇತರರಿಗೆ ತಿಳಿಸಿದರು. ಸತ್ಯ, ಅಹಿಂಸೆಯ ಪರಿಕಲ್ಪನೆಯ ಜೊತೆಗೆ ಅಹಿಂಸಾತ್ಮಕ ಬದಕನ್ನು ಕಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳಲ್ಲಿ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧಿ ಚಿತ್ರಣವನ್ನು ಎಲ್ಲರ ಮನದಲ್ಲಿ ಕಟ್ಟಿಕೊಡುವುದು ಈ ಪ್ರಬಂಧ ಸ್ಪರ್ಧೆಯ ಉದ್ದೇಶವಾಗಿದೆ. ಅವಕಾಶಗಳು ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಗಾಂಧೀಜಿಯವರ ಜೀವನದ ಬಗ್ಗೆ ಬರೆಯುವುದು ಅಷ್ಟೊಂದು ಸುಲಭವಲ್ಲ. ಅವರು ಜೀವನದಲ್ಲಿ ನಡೆದು ಬಂದ ದಾರಿಯೂ ಕಷ್ಟಕರವಾಗಿತ್ತು. ಅವರ ತ್ಯಾಗಮಯಿ ಬದುಕು ಮಾದರಿಯಾಗಿತ್ತು. ಅವರ ಸರಳ ಜೀವನ, ಸತ್ಯ ಮತ್ತು ಅಹಿಂಸೆಯ ಮಾರ್ಗವು ನಮಗೆಲ್ಲರಿಗೂ ಆದರ್ಶಪ್ರಾಯ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಚಿಂತನೆಗೆ ಹಚ್ಚುವುದಲ್ಲದೆ, ದೇಶದ ಇತಿಹಾಸ ಮತ್ತು ಮಹಾನ್ ನಾಯಕರ ಬಗ್ಗೆ ತಿಳುವಳಿಕೆ ಮೂಡಿಸುತ್ತವೆ ಎಂದರು.

ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ವಿಭಾಗದ ನಿವೃತ್ತ ಪ್ರಾಧ್ಯಾಪಕ ಶಿವಾನಂದ ಶೆಟ್ಟರ ಮಾತನಾಡಿ, ಈ ದೇಶಕ್ಕೆ ಸ್ವಾತಂತ್ರ್ಯವೂ ತ್ಯಾಗ ಬಲಿದಾನದಿಂದ ಬಂದಿದೆ. ಆದ್ಧರಿಂದ ಜೀವನದಲ್ಲಿ ಪರಿಶ್ರಮ ಎನ್ನುವುದು ಅತಿ ಮುಖ್ಯವಾದ ಸಂಗತಿ. ಜೀವನದಲ್ಲಿ ಕೇವಲ ಶಾಲೆ ಕಾಲೇಜುಗಳ ಪಠ್ಯ ಪುಸ್ತಕಗಳನ್ನು ಓದುವುದು ಅಷ್ಟೇ ಅಲ್ಲ. ಮಹಾನ್ ನಾಯಕ, ನಾಯಕಿಯರ ಬಗ್ಗೆ ಹೋರಾಟಗಾರರ ಬಗ್ಗೆ ತಿಳಿದುಕೊಳ್ಳಬೇಕು. ಅದೇ ರೀತಿ ನೈತಿಕ ಮೌಲ್ಯಗಳನ್ನು ಸಹ ತಿಳಿದುಕೊಳ್ಳುವುದು ಅಷ್ಟೇ ಮುಖ್ಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಗಾಂಧಿವಾದಿ, ಅದರಗುಂಚಿ ಶಂಕರಗೌಡರ ಸಹೋದರ, ಏಕೀಕರಣದ ಹೋರಾಟಗಾರ ವಿರುಪಾಕ್ಷಗೌಡ ಪಾಟೀಲ ಮಾತನಾಡಿ, ಬ್ರಿಟಿಷರು ಕೇವಲ ವ್ಯಾಪಾರಕ್ಕೆ ಬಂದು ಭಾರತವನ್ನು ಸುತ್ತುವರೆದು ನಮ್ಮನ್ನು ಆಳುವಂಥವರಾದರು. ಅವರಿಂದ ಮುಕ್ತಿಗೊಳಿಸುವುದುಕ್ಕೋಸ್ಕರವಾಗಿ ಗಾಂಧೀಜಿಯವರು ಸತ್ಯಾಗ್ರಹ, ಅಹಿಂಸೆ, ಅಸಹಕಾರ ಚಳುವಳಿ, ಉಪ್ಪು ಸತ್ಯಾಗ್ರಹ, ಭಾರತ ಚಲೋ ಚಳುವಳಿ ಮುಂತಾದ ಹಲವಾರು ಹೋರಾಟಗಳ ಮೂಲಕ ಜನರಲ್ಲಿ ಸ್ವಾತಂತ್ರ್ಯದ ಜಾಗೃತಿ ಮೂಡಿಸಿದರು ಎಂದು ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ಅಂಗಡಿ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿದರು. ವೇದಿಕೆಯಲ್ಲಿ ಮನಗುಂಡಿ ಪ್ರೌಢ ಶಾಲೆಯ ಇಂಗ್ಲೀಷ್ ಸಹ ಶಿಕ್ಷಕ ಸಿ.ಸಿ.ಹಿರೇಮಠ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ತಟಗಾರ ಇದ್ದರು. ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದಲ್ಲಿ ವಿಜೇತರಾದ ಎಲ್ಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಹಾಗೂ ಅತಿಥಿಗಳು ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ, ಶುಭ ಹಾರೈಸಿದರು.

ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಜಿಲ್ಲಾ ನೊಡಲ್ ಅಧಿಕಾರಿಗಳಾದ ಸರಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಕನ್ನಡ ಪ್ರಾಧ್ಯಾಪಕಿ ಡಾ. ಸರಸ್ವತಿದೇವಿ ಭಗವತಿ, ನಿಗದಿ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಶ್ರೀಧರ ಹೆಗಡೆ ಭದ್ರನ್ ಮತ್ತು ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯದ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಡಾ. ರೇಣುಕಾ ಅಮಲಝರಿ ಅವರನ್ನು ಸಿಇಓ ಭುವನೇಶ ಪಾಟೀಲ ಅಭಿನಂದನಾ ಪತ್ರ ನೀಡಿ, ಗೌರವಿಸಿದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಕರ ದಿನಾಚರಣೆ; ಹೊಸ ಯೋಜನೆ ಘೋಷಣೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಸ್ವಾಗತಿಸಿ, ಪ್ರ್ರಾಸ್ತಾಪಿಕವಾಗಿ ಮಾತನಾಡಿದರು. ಡಾ. ಸರಸ್ವತಿದೇವಿ ಭಗವತಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಧರ ಹೆಗಡೆ ಭದ್ರನ್ ವಂದಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ತಾಲೂಕುಗಳಿಂದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ್ದ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ಹಾಗೂ ಆಯಾ ಶಾಲಾ ಕಾಲೇಜುಗಳ ಶಿಕ್ಷಕರು, ಸರ್ಕಾರಿ ಪ್ರಥಮ ದರ್ಜೆ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...