ಧಾರವಾಡ | ವಿದ್ಯಾರ್ಥಿಯ ಜನಿವಾರ ಕತ್ತರಿಸಿದ್ದು ಗಂಭೀರ ವಿಷಯ: ಸಂತೋಷ ಲಾಡ್

Date:

ನಗರದ ಹುರಕಡ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಧುನಿಕ ಯುಗದಲ್ಲಿದ್ದೇವೆ. ಇದೊಂದು ಗಂಭೀರ ವಿಷಯ. ಯಾರು ಜನಿವಾರ ಕತ್ತರಿಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸ್‌ ಇಲಾಖೆ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈಗಾಗಲೇ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ ಎಂದರು.

ಜನಿವಾರ ಕತ್ತರಿಸಿದ ವಿಷಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆಯನ್ನೇ ನೀಡುತ್ತಿಲ್ಲ ಎನ್ನುವ ಶಾಸಕ ಅರವಿಂದ ಬೆಲ್ಲದ್‌ ಆರೋಪಕ್ಕೆ ಉತ್ತರ ನೀಡುತ್ತಾ, ಅರವಿಂದ ಬೆಲ್ಲದ್‌ ಅವರೇ ಹೋಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈ ಬಗ್ಗೆ ಪ್ರತಿಕ್ರಿಯೆ ಕೇಳಲಿ. ಖಂಡಿತಾ ಸಿಎಂ ಪ್ರತಿಕ್ರಿಯೆ ನೀಡುತ್ತಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...