ಧಾರವಾಡ | ಸಮರ್ಪಕ ವಿದ್ಯುತ್ ಪೂರೈಸಲು ಕಲಘಟಗಿ ರೈತರ ಆಗ್ರಹ

Date:

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ, ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದ ರೈತರು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಹೊಸ ಪರಿವರ್ತಕವನ್ನು ಅಳವಡಿಸಿ ಕೊಡಬೇಕೆಂದು ಒತ್ತಾಯಿಸಿ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.

ಮನವಿ ಪತ್ರದಲ್ಲಿ, ಈ ವರ್ಷ ಸಂಪೂರ್ಣ ಬರಗಾಲದಿಂದಾಗಿ ರೈತ ಕೃಷಿ ಕಾರ್ಮಿಕರು ಕಂಗಾಲಾಗಿದ್ದಾರೆ. ಅಲ್ಪ ಸ್ವಲ್ಪ ಬೆಳೆಯನ್ನು ಬೆಳೆಯುವುದಕ್ಕೆ ಅವರು ಬೋರ್ ವೆಲ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ವಿದ್ಯುತ್ ಸರಿಯಾಗಿ ದೊರೆಯದ ಕಾರಣ ಅವರ ಬೆಳೆ  ಹಾಳಾಗುವ ಪರಿಸ್ಥಿತಿಗೆ ಬಂದಿದೆ. ಬರಗಾಲದ ಸಂದರ್ಭದಲ್ಲಿ  ರೈತರಿಗೆ ಸಮರ್ಪಕ ವಿದ್ಯುತ್ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

ಕಲಘಟಗಿ ತಾಲೂಕಿನ ಕುರುವಿನ ಕೊಪ್ಪ ಗ್ರಾಮದ ಮೇಟಿಯವರ 63 ಟಿಸಿಗೆ, 15 ಬೋರ್ ವೆಲ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಏಳು ಬೋರ್ ವೇಲ್‌ಗಳಿಗೆ, ವೋಲ್ಟೇಜ್ ಇಲ್ಲದ ಕಾರಣ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದಾಗಿ ರೈತರ ಬೆಳೆ ನಷ್ಟವಾಗುತ್ತಿದೆ. ಆದ್ದರಿಂದ ಈ ಕೂಡಲೇ ಹೊಸದಾದ ಟಿಸಿಯನ್ನು ಹಾಕಬೇಕೆಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಮನವಿಯಲ್ಲಿ ಆಗ್ರಹಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸ್ವೀಕರಿಸಿದ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ ಎಂ.ಟಿ. ದೊಡ್ಡಮನೆ, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ರೈತರಿಗೆ ಸರ್ಮಪಕ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಶರಣು ಗೋನವಾರ, ಯಲ್ಲಪ್ಪ ವಾಲೀಕಾರ, ಬಸು ರೇವಡಿಹಾಳ, ರಾಮಪ್ಪ ಮಣಕವಾಡ, ಸುಭಾಸ್ ರೇವಡಿಹಾಳ, ಅರವಿಂದ ವಂಡಪ್ಪನವರ, ಕಲ್ಲಪ್ಪ ರಾಮನಾಳ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...