ಧಾರವಾಡ | ಏಕೀಕರಣದ ಹೋರಾಟಗಾರ ಡಾ. ಪಂಚಾಕ್ಷರಿ ಹಿರೇಮಠ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ಗೌರವ

Date:

ಹಿರಿಯ ಸಾಹಿತಿ, ಕರ್ನಾಟಕ ಏಕೀಕರಣದ ಹೋರಾಟಗಾರ ಮತ್ತು ಹೈದರಾಬಾದ್ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಭಾಗವಹಿಸಿದ್ದ ಡಾ. ಪಂಚಾಕ್ಷರಯ್ಯ ಹಿರೇಮಠ ಅವರು ಮಾ. 14ರಂದು ರಾತ್ರಿ ವಯೋಸಹಜ ಕಾಯಿಲೆಯಿಂದ ನಿಧನರಾದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾ.15ಕ್ಕೆ ಬೆಳಿಗ್ಗೆ ಅವರ ಮನೆಗೆ ಭೇಟಿ ನೀಡಿ, ಮೃತರ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತದ ಪರವಾಗಿ ಪುಷ್ಪಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಮೃತರ ಪತ್ನಿ ಶಾಂತಾದೇವಿ, ಪುತ್ರರಾದ ಜಯದೇವ, ಮೃತ್ಯುಂಜಯ ಮತ್ತು ಪುತ್ರಿ ವಿಜಯಶ್ರೀ ಅವರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಅಯುಕ್ತ ಈರೇಶ ಅಂಚಟಗೇರಿ, ಡಾ.ಬಸವರಾಜ ಕಟ್ಟಿಮನಿ ರಾಷ್ಟ್ರೀಯ ಟ್ರಸ್ಟ್ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ, ಮಕ್ಕಳ ವೈದ್ಯ‌ ಅರುಣ ಜೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...