ಧಾರವಾಡ | ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಿದೆ.

ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ₹31,000, ದ್ವಿತೀಯ ಬಹುಮಾನ ₹21,000 ಮತ್ತು ತೃತೀಯ ಬಹುಮಾನ ₹11,000 ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ ₹3,000, ದ್ವಿತೀಯ ಬಹುಮಾನ ₹2,000, ತೃತೀಯ ಬಹುಮಾನ ₹1,1000 ಬಹುಮಾನ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೌಢ ಶಾಲಾ ವಿಭಾಗದಲ್ಲಿ: 1) ಸ್ವಚ್ಚತೆಯ ಪಾಠ- ಗಾಂಧೀಜಿಯವರ ಸಂದೇಶ, 2) ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ. 3) ಗಾಂಧೀಜಿಯವರ ಸ್ವಾತಂತ್ರ್ಯದ ಕನಸು – ನನ್ನ ಕಲ್ಪನೆ. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 700 ರಿಂದ 800 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ: 1) ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ, 2) ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ, 3) ಬದಲಾವಣೆ ನನ್ನಿಂದಲೇ ಆರಂಭ- ಗಾಂಧೀಜಿಯವರ ಪಾಠ, ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 900 ರಿಂದ 1000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ: 1) ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ, 2)ಗಾಂಧೀಜಿ ಮತ್ತು ಡಾ. ಬಿ ಆರ್ ಅಂಬೇಡ್ಕರ್ – ತತ್ವಗಳ ಹೋಲಿಕೆ, 3) ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ- ಯುವಕರಿಗೆ ಗಾಂಧೀಜಿಯವರ ಪಾಠ. ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು 1400 ರಿಂದ 1500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸೆಪ್ಟೆಂಬರ್ 06 ರೊಳಗಾಗಿ ಸ್ಪರ್ಧೆ ಏರ್ಪಡಿಸಿ ನಂತರ ಮೌಲ್ಯಮಾಪನ ಮಾಡಿ ಸೆಪ್ಟೆಂಬರ್ 12ರ ಒಳಗಾಗಿ ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ. ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು. ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು (3) ಪ್ರಬಂಧಗಳಿಗೆ ಅಕ್ಟೋಬರ್ 02ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲದೆ ಪರದಾಟ; ದಾರಿ ಮಧ್ಯೆ ಶವವಿಟ್ಟು ಪ್ರತಿಭಟನೆ

ನಿಬಂಧನೆಗಳು : ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು. ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು. ಅಕರವಾಗಿ ಬಳಸಿದ ಪರಾಮರ್ಶನ, ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು. ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ, ಆಧಾರ ಗ್ರಂಥಗಳು, ಮೊಬೈಲ್‍ಗಳ ಬಳಕೆಗೆ ಅವಕಾಶವಿರುವುದಿಲ್ಲ. ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು. ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು. ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾಯ್ದಿರಿಸಿಕೊಂಡಿರುತ್ತದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...