ಧಾರವಾಡ | ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ-2025 ವಿವಿಧ ಕಲಾ ಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನಿನ್ನೆ (ಡಿ.11) ಬೆಳಿಗ್ಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಡೆಯಿತು.

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಆಯ್.ಜಿ.ಸನದಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ರಂಜಾನ ದರ್ಗಾ, ಚಿತ್ರಕಲಾ ಶಿಲ್ಪಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಬಿ. ಮಾರುತಿ, ಟ್ರಸ್ಟ್ ಸದಸ್ಯ ಡಾ. ಬಿ.ಎಚ್.ಕುರಿಯವರ, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಉಪಸ್ಥಿತರಿದ್ದರು.

ಬಾಲ, ಕಿಶೋರ ಹಾಗೂ ಯುವ ಪ್ರತಿಭೆಗಳ ಸುಗಮ ಸಂಗೀತ ಸ್ಪರ್ಧೆಯ ತೀರ್ಪುಗಾರರಾಗಿ ಆರತಿ ಪಾಟೀಲ, ಶ್ರೀಕಾಂತ ಬಾಕಳೆ, ಹಾಗೂ ಭಾರ್ಗವಿ ಕುಲಕರ್ಣಿ ಅವರು ಭಾಗವಹಿಸಿದ್ದರು. ಯುವ ಪ್ರತಿಭೆಗಳ ಆಶು ಭಾಷಣ ಸ್ಪರ್ಧೆಯ ತೀರ್ಪುಗಾರರಾಗಿ ಡಾ. ಈರಣ್ಣ ಇಂಜಗನೇರಿ, ಸಂಗಮೇಶ ಹಡಪದ, ಹಾಗೂ ಡಾ.ದುಂಡಪ್ಪ ನಾಂದ್ರೆ ಅವರು ಇದ್ದರು. ಮತ್ತು ಯುವ ಪ್ರತಿಭೆಗಳ ನಾಟಕ ಸ್ಪರ್ಧೆಯ ತೀರ್ಪುಗಾರರಾಗಿ ಬಿ.ಆಯ್.ಈಳಗೇರ, ಎನ್. ರಾಜೇಶ್ವರಿ ಸುಳ್ಯ ಹಾಗೂ ವಿಜಯೇಂದ್ರ ಅರ್ಚಕ್ ಅವರು ಭಾಗವಹಿಸಿದ್ದರು. ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಬಾಲ, ಕಿಶೋರ ಮತ್ತು ಯುವ ಪ್ರತಿಭೆಗಳ ಚಿತ್ರಕಲಾ ಸ್ಪರ್ಧೆಗಳು ಜರುಗಿದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...