ಧಾರವಾಡ | ಪಿಒಪಿ ವಿಗ್ರಹಗಳನ್ನು ಬಳಸದಿರಿ: ಜಿಲ್ಲಾಧಿಕಾರಿ ದಿವ್ಯಾಪ್ರಭು

Date:

ಪಿಒಪಿ ವಿಗ್ರಹಗಳು ನಮ್ಮ ಕೆರೆ, ನದಿ ಮತ್ತು ಇತರೆ ಜಲಮೂಲಗಳನ್ನು ಶಾಶ್ವತವಾಗಿ ಕಲುಷಿತಗೊಳಿಸುತ್ತವೆ. ಇದರಲ್ಲಿರುವ ರಾಸಾಯನಿಕ ಬಣ್ಣಗಳು ಜಲಚರಗಳಿಗೆ ಮಾರಕವಾಗಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲ. ಈ ಕಾರಣದಿಂದ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ಮತ್ತು ಸರ್ಕಾರದ ನಿರ್ದೇಶನದಂತೆ, ಜಿಲ್ಲೆಯಲ್ಲಿ ಪಿಒಪಿ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಾಪ್ರಭು ತಿಳಿಸಿದ್ದಾರೆ.

“ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ವಿಗ್ರಹಗಳ ಬಳಕೆಯನ್ನು ತಡೆಗಟ್ಟಲು ಜಿಲ್ಲಾಡಳಿತವು ಕಠಿಣ ಕ್ರಮಗಳನ್ನು ಕೈಗೊಂಡು, ಕಾರ್ಯಾಚಣೆಯನ್ನು ಕೊಳ್ಳಲಾಗುತ್ತಿದೆ. ಹಬ್ಬ ಆಚರಿಸುವುದು ನಮ್ಮ ಸಂಸ್ಕೃತಿಯ ಹೆಮ್ಮೆ. ಆದರೆ, ಅದು ಪರಿಸರ ಸ್ನೇಹಿಯಾಗಿರಬೇಕು. ಮಣ್ಣಿನ, ನೈಸರ್ಗಿಕ ಬಣ್ಣಗಳಿಂದ ಮಾಡಿದ, ಸುಲಭವಾಗಿ ನೀರಿನಲ್ಲಿ ಕರಗುವ ಗಣೇಶನ ವಿಗ್ರಹಗಳನ್ನೇ ಪೂಜಿಸಿ. ಈಗಾಗಲೇ ಅನೇಕರು ಪರಿಸರ ಸ್ನೇಹಿ ಗಣೇಶನಿಗೆ ಆದ್ಯತೆ ನೀಡುತ್ತಿರುವುದು ಅತ್ಯಂತ ಶ್ಲಾಘನೀಯ ವಿಷಯವಾಗಿದೆ” ಎಂದು ಹೇಳಿದ್ದಾರೆ.

“ಈ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ಜಿಲ್ಲಾಡಳಿತವು ಪೊಲೀಸ್ ಇಲಾಖೆ, ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ವಿಶೇಷ ತಂಡಗಳನ್ನು ರಚಿಸಿದೆ. ಈ ತಂಡಗಳು ದಿಢೀರ್ ದಾಳಿ, ಅನಿರೀಕ್ಷಿತ ಭೇಟಿ ಮೂಲಕ ಜಿ‌ಲ್ಲಾದ್ಯಂತ ಕಾರ್ಯಾಚರಣೆ ನಡೆಸಿ, ಪಿಒಪಿ ವಿಗ್ರಹಗಳನ್ನು ತಡೆಗಟ್ಟಲು ಕ್ರಮವಹಿಸಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

“ಜಿಲ್ಲೆಯಲ್ಲಿ ಪಿಒಪಿ ಗಣಪತಿ ವಿಗ್ರಹಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ, ಪರಿಸರ ಇಲಾಖೆ, ಕಂದಾಯ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದು, ಗ್ರಾಮ ಮತ್ತು ತಾಲೂಕು ಮಟ್ಟದ, ಜಿಲ್ಲಾ ಮಟ್ಟದ ಕಾರ್ಯಪಡೆಗಳು ನಿರಂತರ ತಪಾಸಣೆ, ಪರಿಶೀಲನೆ ಕೈಗೊಳ್ಳುತ್ತಿವೆ. ಸಾರ್ವಜನಿಕರು ಮಣ್ಣಿನ ಗಣಪತಿಯನ್ನು ಪೂಜಿಸುವ ಮೂಲಕ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಆಚರಿಸಬೇಕು. ನೆಲ, ಜಲ, ವಾಯು ಸೇರಿದಂತೆ ನಮ್ಮ ಪರಿಸರವನ್ನು ಕಾಪಾಡಬೇಕು, ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ಪ್ರಯತ್ನಗಳನ್ನು ಬೆಂಬಲಿಸಿ, ನೀಡುವ ನಿರ್ದೇಶನಗಳನ್ನೂ ಪಾಲಿಸಬೇಕು” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...