ಧಾರವಾಡದ ಪ್ರಜ್ವಲ ಹವ್ಯಾಸಿ ಕನ್ನಡ ಹಾಗೂ ಕೊಂಕಣಿ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾರ್ಚ್ 12ರಂದು ಗುರುವಾರ ಸಾಯಂಕಾಲ 6 ಘಂಟೆಗೆ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಹಿರಿಯ ಸಂಗೀತ ಶಿಕ್ಷಕಿ ಡಾ. ಶಕ್ತಿ ಪಾಟೀಲ ಹಾಗೂ ಸಂಗಡಿಗರಿಂದ “ಕನ್ನಡದ ನವೋದಯದ ಶ್ರೇಷ್ಠ ಕವಿ ಡಾ.ದ.ರಾ.ಬೇಂದ್ರೆ ಅವರ ಗೀತೆಗಳ ಸಿಂಚನ” ಕಾರ್ಯಕ್ರಮ ಆಯೋಜಿಸಿದ್ದಾರೆ.
ಅಂದು ಹಿರಿಯ ರಂಗಕಲಾವಿದೆ ಜಾನಪದ ಸಂಶೋಧನಾ ಕೇಂದ್ರದ ಸಂಸ್ಥಾಪಕಿ ವಿಶ್ವೇಶ್ವರಿ ಬಸವಲಿಂಗಯ್ಯಾ ಹಿರೇಮಠ ಕಾರ್ಯಕ್ರಮ ಉಧ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೇಕ್ಕೇರಿ, ಹಿರಿಯ ರಂಗಕರ್ಮಿ ರವಿ ಕುಲಕರ್ಣಿ ಹಾಗೂ ಯುವ ಚಿಂತಕ ಸಾಹಿತಿ ಮಾರ್ತಾಂಡಪ್ಪ ಕತ್ತಿ ಆಗಮಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಜಾನಪದ ಅಕಾಡಮಿ ಪ್ರಶಸ್ತಿ ಪುರಸ್ಕೃತ ಡಾ. ಪ್ರಕಾಶ ಮಲ್ಲಿಗವಾಡ ಹಾಗೂ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ ಪುರಸ್ಕೃತ ಗೋಪಾಲ ಉಣಕಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವೇದಿಕೆಯ ಮೇಲೆ ಸಂಘದ ಉಪಾಧ್ಯಕ್ಷ ಅಪೂರ್ವಾ ಮಹಾಲೆ ಹಾಗೂ ಕಿರಣ ಮಹಾಲೆ ಉಪಸ್ಥಿತರಿರುವರು. ಕಾರ್ಯಕ್ರಮ ನಿರೂಪಣೆಯನ್ನು ಯುವ ಪ್ರತಿಭೆ ಕುಮಾರಿ ಸ್ನೇಹಾ ಪಟದಾರಿ ಮಾಡಲಿದ್ದಾರೆ ಎಂದು ಸಂತೋಷ ಮಹಾಲೆ ಪ್ರಕಟಣೆಯಲ್ಲಿ ತಿಳಿಸಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ವಿನಂತಿ ಮಾಡಿದ್ದಾರೆ.





