ಧಾರವಾಡ | ವಿದ್ಯುತ್‌ ಕೊರತೆ, ನೀರಿದ್ದರೂ ಬೆಳೆಗೆ ಉಣಿಸಲಾಗದೆ ರೈತರು ಕಂಗಾಲು

Date:

ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ ಮಾಡಿ ಕೊಂಡಿದ್ದಾರೆ. ಕೆರೆಯಲ್ಲಿ ನೀರಿದ್ದರೂ, ವಿದ್ಯುತ್ ಕಡಿತದಿಂದ ನೀರು ಹರಿಸಲು ಆಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಬೆಣ್ಣಿಹಳ್ಳದಿಂದ ಪಂಪ್ ಸೆಟ್ ಮೂಲಕ ರೈತರ ನೀರು ಹರಿಸುತ್ತಿದ್ದಾರೆ. ಸ್ವಂತ ಖರ್ಚಿನಲ್ಲಿ ಕೆರೆ ನಿರ್ಮಿಸಿಕೊಂಡಿದ್ದಾರೆ. ಸದ್ಯ ಈರುಳ್ಳಿ ಬೆಳೆ ಕೈಗೆ ಬರುತ್ತಿರುವ ಸಮಯದಲ್ಲಿ ನೀರು ಹರಿಸಲಾಗುತ್ತಿಲ್ಲ. ಹೀಗಾಗಿ ಈರುಳ್ಳಿ ಬೆಳೆ ನಾಶವಾಗುವ ಚಿಂತೆಯಲ್ಲಿ ರೈತರು ಕಣ್ಣೀರಿಡು ತ್ತಿದ್ದಾರೆ. ದಿನಕ್ಕೆ ಏಳುಗಂಟೆ ವಿದ್ಯುತ್ ಪೂರೈಸಬೇಕಾಗಿರುವ ಬೆಸ್ಕಾಂ ಕೇವಲ ಮೂರರಿಂದ ನಾಲ್ಕು ಗಂಟೆ ಮಾತ್ರ ವಿದ್ಯುತ್ ಪೂರೈಕೆ ಮಾಡುತ್ತಿದೆ. ಈರುಳ್ಳಿಗೆ ಉತ್ತಮ ಬೆಲೆ ಬಂದಿದೆ, ನೀರು ಹಾಯಿಸಿದರೆ ಉತ್ತಮ ಇಳುವರಿ ಬರುತ್ತದೆ ಎಂಬ ನಿರೀಕ್ಷೆಯಲ್ಲಿರುವ ರೈತರ ಜೊತೆ ವಿದ್ಯುತ್‌ ಕಣ್ಣಾಮುಚ್ಚಾಲೆಯಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆ ಕೈ ಕೊಟ್ಟು ರಾಜ್ಯದಲ್ಲಿ ಬರೆದ ಛಾಯೆ ಆವರಿಸಿದೆ ಈ ಹಿನ್ನೆಲೆ ವಿದ್ಯುತ್ ಉತ್ಪಾದನೆ ಕೂಡ ಕುಂಠಿತವಾಗಿದ್ದು ರೈತರಿಗೆ ವಿದ್ಯುತ್ ಕೊರತೆ ಭಾರಿ ನಷ್ಟವನ್ನು ತಂದಿಟ್ಟಿದೆ. ಕೆಲ ಕಡೆ ನೀರಿದ್ದರೂ ವಿದ್ಯುತ್ ಸಮಸ್ಯೆಯಿಂದ ಬೆಳೆ ಬೆಳೆಯಲು ಆಗುತ್ತಿಲ್ಲ. ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿಯಿಂದ ರೈತರು ಕಂಗಾಲಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...