ಧಾರವಾಡ | ಶಿಕ್ಷಣವು ಮನುಷ್ಯ ಜೀವನದ ಬಾಳು ಬೆಳಗುವ ಪ್ರಕಾಶಮಾನ ಜ್ಯೋತಿ: ಮಹೇಶ ಮಾಶಾಳ

Date:

ಶಿಕ್ಷಣವು ಕೇವಲ ಪುಸ್ತಕದ ಜ್ಞಾನವಲ್ಲ, ಅದು ಮನುಷ್ಯ ಜೀವನದ ಬಾಳು ಬೆಳೆಗುವ ಪ್ರಕಾಶಮಾನ ಜ್ಯೋತಿ. ಹೀಗಾಗಿ ಶ್ರದ್ಧೆಯಿಂದ ಕಲಿಯಬೇಕು ಎಂದು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಜನ್ಮದಿನದ ಅಂಗವಾಗಿ ನಗರದ ಅಂಜುಮನೆ ಇಸ್ಲಾಂ ಶಿಕ್ಷಣ ಸಂಸ್ಥೆಯ ಸಭಾ ಭವನದಲ್ಲಿ ‘ರಾಷ್ಟ್ರೀಯ ಶಿಕ್ಷಣ ದಿನಾಚರಣೆ’ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಪೋರೇಟ್ ಟ್ರೇನರ್ ಮಹೇಶ ಮಾಶಾಳ ಹೇಳಿದರು.

ಶಿಕ್ಷಣ ವ್ಯಕ್ತಿಯ ಹಾಗೂ ದೇಶದ ಪ್ರಗತಿಯ ಮೂಲ ಸಂಕೇತ. ಸನ್ನಡತೆ, ಸಂಸ್ಕೃತಿ, ಸಂಸ್ಕಾರ, ಉತ್ತಮ ಹಾಗೂ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಸದ್ಗುಣಗಳ ಗಣಿಯಾಗಿ ತಯಾರಾಗಬೇಕ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಜುಮನ್ ಸಂಸ್ಥೆಯ ಉಪಾಧ್ಯಕ್ಷ ಬಶೀರ್ ಅಹ್ಮದ್ ಜಾಗೀರದಾರ್, ಶಿಕ್ಷಣವು ವ್ಯಕ್ತಿತ್ವ ನಿರ್ಮಾಣದ ಪ್ರಮುಖ ಅಂಶ, ಶಿಸ್ತು ಮತ್ತು ಪ್ರಾಮಾಣಿಕತೆ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಲು ವಿದ್ಯಾರ್ಥಿಗಳಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಚಾರ್ಯ ಅಬ್ದುಲ್ ಮತಿನ ಬಿಡಿವಾಲೆ ಮೌಲಾನಾ ಅಬ್ದುಲ್ ಕಲಾಂ ಆಝಾದ್ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವದ ಕುರಿತು ಭಾಷಣ ಹಾಗೂ ಕವನ ವಾಚನ ಮಾಡಿದರು.

ಇದನ್ನೂ ಓದಿ ಧಾರವಾಡ | ಪತ್ನಿ ತೀರಿಕೊಂಡ ಹಿನ್ನೆಲೆ; ಮನನೊಂದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಪ್ರಬಂಧ, ಭಾಷಣ ಹಾಗೂ ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆ ಕಾರ್ಯದರ್ಶಿ ಸೈಯದ್ ಖದೀರ್ ಸರ್ಗಿರೋ, ರಿಯಾಜ್ ನನ್ನೆಸಾಬ್ ನವರ, ಖೈರುದ್ಧಿನ್ ಶೇಖ್, ಪ್ರಾಚಾರ್ಯರು, ಪ್ರಾಧ್ಯಾಪಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರೊ. ಅಯಾಜ್ ಕಿತ್ತೂರು ನಿರೂಪಿಸಿದರು. ರೂಹಿದ್ ನದಾಫ್ ವಂದಿಸಿದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...