ಧಾರವಾಡ | ಸೌಹಾರ್ದತೆಗೆ ಸಾಕ್ಷಿಯಾದ ಈದ್ ಮಿಲಾದ್; ಹಬ್ಬದಲ್ಲಿ ವಿವಿಧ ಧರ್ಮಿಯರು ಭಾಗಿ

Date:

ಪ್ರವಾದಿ ಮುಹಮ್ಮದ್ ಪೈಗಂಬರರ ಸ್ಮರಣೆಗಾಗಿ ಮುಸ್ಲಿಮರು ಈದ್ ಮಿಲಾದ್ ಉನ್ ನಬಿ ಆಚರಣೆ ಮಾಡುತ್ತಾರೆ. ಇಂತಹ ಮಿಲಾದ್ ಹಬ್ಬದಲ್ಲಿ ಹಿಂದೂಗಳೂ ಪಾಲ್ಗೊಳ್ಳುವುದು ವಿಶೇಷವೆಂದೇ ಹೇಳಬೇಹುದು. ಅಂತಹ ಸಾಮರಸ್ಯದ ಬೆಳವಣಿಗೆಯನ್ನು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಕಾಣಬಹುದು. ತಾಲೂಕಿನ ವಿವಿಧ ಗ್ರಾಮಗಳಲ್ಲಿ‌ ಹಿಂದೂ-ಮುಸ್ಲಿಮರು ಒಂದಾಗಿ, ಜಾತಿ ಭೇದ ಮರೆತು ಈದ್ ಮಿಲಾದ್ ಆಚರಸಿ, ನಾವೆಲ್ಲರೂ ಒಂದು ಎಂಬ ಸಂದೇಶ ಸಾರಿದ್ದಾರೆ.

‘ನಾವೆಲ್ಲರೂ ಒಂದು’ ಎಂಬ ಘೋಷವಾಖ್ಯದ ಅಡಿಯಲ್ಲಿ ಕುಂದಗೋಳ ಪಟ್ಟಣದಲ್ಲಿ ಪಂಚಗೃಹ ಹಿರೇಮಠದ ಶಿಥಿಕಂಠೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಲ್ಯಾಣಪುರ ಮಠದ ಅಭಿನವ ಬಸವಣ್ಣಜ್ಜನವರು, ಶಿವಾನಂದ ಮಠದ ಶಿವಾನಂದ ಸ್ವಾಮೀಜಿ ಮತ್ತು ಮುಸ್ಲಿಂ ಸುಮಾದಯದ ಮುಖಂಡರೆಲ್ಲ ಒಂಸಾಗಿ ಆಚರಿಸಿದ್ದಾರೆ.‌ ಈ ವೇಳೆ ಶಿಥಿಕಂಠೇಶ್ವರ ಸ್ವಾಮೀಜಿ ಮಾತನಾಡಿ, ಮುಸ್ಲಿಂ ಬಾಂಧವರು ನೀಡಿದ ಸೌಹಾರ್ದತೆಯ ಸಂದೇಶ ಪ್ರಶಂಸನೀಯ. ನಾವೆಲ್ಲರೂ ಒಟ್ಟಾಗಿ ಬದುಕುವ ಮೂಲಕ ಕೋಮು ಸೌಹಾರ್ದತೆಯನ್ನು ಹೆಚ್ಚಿಸಬೇಕು. ಭವಿಷ್ಯದಲ್ಲಿಯೂ ಎಲ್ಲರೂ ಹೀಗೆ ಒಗ್ಗಟ್ಟಿನಿಂದ ಬಾಳೋಣ ಎಂದು ಕರೆಕೊಟ್ಟರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಮಾತನಾಡಿ, ಈದ್ ಮಿಲಾದ್ ಕೇವಲ ಧಾರ್ಮಿಕ ಹಬ್ಬವಲ್ಲ, ಇದು ಮಾನವೀಯ ಮೌಲ್ಯಗಳು ಮತ್ತು ಸೌಹಾರ್ದತೆಯನ್ನು ಸಾರುವ ಹಬ್ಬವಾಗಿದೆ. ಈ ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಒಗ್ಗಟ್ಟಿನಿಂದ ಆಚರಿಸುತ್ತಿರುವುದು ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುತ್ತದೆ ಎಂದರು. ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಿವಾನಂದ ಬೆಂತೂರ ಮಾತನಾಡಿ, ಈದ್ ಮಿಲಾದ್ ಹಬ್ಬವು ಮಾನವೀಯತೆಯನ್ನು ಬೆಸೆಯುವ ಸೇತುವೆಯಾಗಿದ್ದು, ಎಲ್ಲರೂ ಒಂದಾಗಿ ಬದುಕುವ ಮೂಲಕ ಸಮಾಜವನ್ನು ಇನ್ನಷ್ಟು ಸದೃಢಗೊಳಿಸಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನ ಯಲಿವಾಳ ಗ್ರಾಮದಲ್ಲಿ, ಪ್ರವಾದಿ ಮಹಮ್ಮದ್‌ರ ಜನ್ಮದಿನಾಚರಣೆಯ ಅಂಗವಾಗಿ, ಎಲ್ಲ ಧರ್ಮಿಯರೂ ಈದ್ ಮಿಲಾದ್‌ನಲ್ಲಿ ಭಾಗವಹಿಸಿದ್ದರು. ಗ್ರಾಮಸ್ಥರು ಜಾತಿ ಮತ ಮರೆತು ಪ್ರವಾದಿಗಳ ಜನ್ಮ ದಿನಾಚರಣೆಯನ್ನು ಶ್ರದ್ಧೆಯಿಂದ ಆಚರಿಸಿದರು. ತಾಲೂಕಿನ ಸಂಶಿ ಗ್ರಾಮದಲ್ಲೂ ವಿವಿಧ ಧರ್ಮಿಯರು ಸೇರಿಕೊಂಡು ಈದ್ ಮಿಲಾದ್ ಆಚರಣೆಯಲ್ಲಿ ಪಾಲ್ಗೊಂಡು ಸಾಮರಸ್ಯವನ್ನು ಗಟ್ಟಿಗೊಳಿಸುವಲ್ಲಿ ಮುನ್ನೆಜ್ಜೆ ಹಾಕಿದರು. ಹೀಗೆ ತಾಲೂಕಿನ ವಿವುಧ ಗ್ರಾಮಗಳಲ್ಲಿ ಶಾಂತಿ ಮತ್ತು ಸೌಹಾರ್ದಯುತವಾಗಿ, ವಿಶೇಷವಾಗಿ ಡಿಜೆ ಬಳಸದೇ ಪ್ರವಾದಿಗಳ ಸಂದೇಶಗಳನ್ನು ಸಾರುತ್ತಾ, ಮೆರವಣಿಗಳನ್ನು‌ ಮಾಡಿದರು.

ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರಾದ ಖಹಿಂ ನಾಲಬಂದ, ಆರ್. ಎಚ್. ಕಳ್ಳಿಮನಿ, ಸಲೀಂ ಕ್ಯಾಲಕೊಂಡ, ಎ. ಟಿ. ಹುಬ್ಬಳ್ಳಿ, ಮಲ್ಲಿಕ್ ಶಿರೂರ, ಬಾಬಾಜಾನ್ ಮಿಶ್ರೀಕೋಟಿ, ಸಲೀಂ ಕಡ್ಲಿ, ನಾಸಿರ್ ಬಾನಿ, ಮೌಲಾಸಾಬ್ ಶೇರವಾಡ, ಜಾಕಿರ್ ಹುಸೇನ್ ಯರಗುಪ್ಪಿ, ಹಜರತ್ ಅಲಿ ಕರ್ಜಗಿ, ಸಲೀಂ ಜಾಗಿರ್ದಾರ, ಮಹಮ್ಮದ್ ರಫಿಕ್ ಶೇರವಾಡ, ಮರ್ದಾನಿ ಮುಲ್ಲಾ, ಎಂ. ಎಂ. ಜಂಗ್ಲಿ, ಮಹಮ್ಮದ್ ಗೌಸ್ ಕಲೇಗಾರ, ಮಾಬೂಬ್‌ಅಲಿ ನದಾಫ್, ಬಾಬುಸಾಬ ಮಿಶ್ರೀಕೋಟಿ ಸೇರಿದಂತೆ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪಟ್ಟಣದಲ್ಲಿ ನಾತ್‌ ಶರೀಫ್ ಗಾಯನ ಮತ್ತು ಧಾರ್ಮಿಕ ಉಪನ್ಯಾಸಗಳು ನೆರವೇರಿದವು. ಈ ಉಪನ್ಯಾಸಗಳಲ್ಲಿ ಪ್ರವಾದಿಮಹಮ್ಮದ್‌ರ ಜೀವನ ಮತ್ತು ಬೋಧನೆಗಳ ಮಹತ್ವವನ್ನು ವಿವರಿಸಿದರು. ಗ್ರಾಮಗಳ ಪ್ರಮುಖ ಬೀದಿಗಳಲ್ಲಿ ಸಾಗಿದ ಮಿಲಾದ್ ಮೆರವಣಿಗೆಯಲ್ಲಿ ಎಲ್ಲರೂ ಪಾಲ್ಗೊಂಡು ಪ್ರವಾದಿಗಳ ಸಂದೇಶಗಳನ್ನು ಸಾರುವಲ್ಲಿ ಕೈಜೋಡಿಸಿದರು. ಈ ರೀತಿಯ ವಾತಾವರಣಗಳಿಂದ ಸೌಹಾರ್ದತೆಯು ಮತ್ತಷ್ಟು ಗಟ್ಟಿಗೊಳ್ಳುತ್ತದೆ ಎನ್ನುತ್ತಾರೆ ಜನರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...