ಧಾರವಾಡ | ಆತ್ಮಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಮುಖ್ಯ: ಮನೋವೈದ್ಯ ಸಿ ಆರ್ ಚಂದ್ರಶೇಖರ್

Date:

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ, ಯುವ ಸಮೂಹದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಮನೋ ವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡು ಆತ್ಮಹತ್ಯೆ ಯೋಚನೆಗಳಿಂದ ಹೊರಬರಬೇಕು. ಆತ್ಮಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಬೇಕು ಎಂದು ಮನೋವೈದ್ಯ ಡಾ. ಸಿ ಆರ್ ಚಂದ್ರಶೇಖರ್ ಹೇಳಿದರು.

ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ, ಧಾರವಾಡ, ಭಾರತೀಯ ಮನೋವೈದ್ಯಕೀಯ ಸಂಘ(ಕರ್ನಾಟಕ ಶಾಖೆ), ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಹುಬ್ಬಳ್ಳಿ, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಧಾರವಾಡ, ಜನತಾ ಶಿಕ್ಷಣ ಸಮಿತಿ, ವಿದ್ಯಾಗಿರಿ ಧಾರವಾಡ, ಸೃಷ್ಟಿ ವಿಜ್ಞಾನ ಪದವಿ ಪೂರ್ವ ಕಾಲೇಜು ಧಾರವಾಡ, ಕೆ.ಇ.ಬೋರ್ಡ್‌ ಪದವಿ ಪೂರ್ವ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ, ಧಾರವಾಡ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್, ಧಾರವಾಡ ಇವರ ಸಹಯೋಗದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಿಮ್ಹಾನ್ಸ್‍ನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊ. ಸಿ.ಆರ್.ಚಂದ್ರಶೇಖರ್ ಮಾತನಾಡಿ, ಆತ್ಮಹತ್ಯೆ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ತುಂಬಾ ಮಹತ್ವ. ಆದ್ದರಿಂದ ಇಂತಹ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಮಾಡಬೇಕು. ಪಾಲಕರು ತಮ್ಮ ಮಕ್ಕಳ ಬಗ್ಗೆ ಜಾಗೃತಿ ವಹಿಸಬೇಕು. ಉತ್ತಮ ಹವ್ಯಾಸಗಳನ್ನು ರೂಪಿಸಿಕೊಳ್ಳಲು ಅವರಿಗೆ ಉತ್ತಮ ಮಾರ್ಗದರ್ಶನ ನೀಡಬೇಕು. ಕುಟುಂಬದಲ್ಲಿ ಒಳ್ಳೆಯ ವಾತಾವರಣ ಇರುವಂತೆ ನೋಡಿಕೊಳ್ಳಬೇಕು. ಕೌಟುಂಬಿಕ ಸಮಸ್ಯೆಗಳು, ಆರೋಗ್ಯ ಸಮಸ್ಯೆಗಳು, ಸೋಲುಗಳು, ಹತಾಶೆ, ಹಣಕಾಸಿನ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣಗಳಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ್ಮಹತ್ಯೆ ತಡೆಗಟ್ಟಬಹುದಾದ ವಿಷಯ, ಸರಿಯಾದ ಕಾರಣಗಳನ್ನು ತಿಳಿದುಕೊಂಡು, ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿರುವ ವ್ಯಕ್ತಿಗಳಿಗೆ ಅಗತ್ಯ ಆಪ್ತ ಸಮಾಲೋಚನೆ, ಸಹಾಯ ಮಾಡಬೇಕು. ಕೆಲವರು ತಮಗೆ ಅತಿಯಾದ ಕಷ್ಟಗಳು ಬಂದಾಗ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅತಿ ಪುರಾತನ ಕಾಲದಿಂದಲೂ ಆತ್ಮಹತ್ಯೆ ಇದೆ. ಭೂ ಪ್ರವೇಶ, ಅಗ್ನಿ ಪ್ರವೇಶ, ಜಲಪ್ರವೇಶ ಹೀಗೆ ಇತರ ಆಯಾಮಗಳಲ್ಲಿ ಪುರಾತನ ಕಾಲದಲ್ಲಿ ಪ್ರಾಣತ್ಯಾಗ ಮಾಡುತ್ತಿದ್ದರು. ಆತ್ಮಹತ್ಯೆ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವೆಂದು ಅಭಿಪ್ರಾಯಪಟ್ಟರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿ, ಯುವ ಸಮೂಹದಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕಕಾರಿ. ಮನೋವೈದ್ಯರ ಸಲಹೆ ಮತ್ತು ಮಾರ್ಗದರ್ಶನ ಪಡೆದುಕೊಂಡು ಆತ್ಮಹತ್ಯೆ ಯೋಚನೆಗಳಿಂದ ಹೊರಬರಬೇಕು. ನಿರ್ಲಕ್ಷ್ಯ ವಹಿಸದೆ ಆತ್ಮಹತ್ಯೆ ಘಟನೆಗಳನ್ನು ತಡೆಗಟ್ಟಲು ಎಲ್ಲರೂ ಮುಂದಾಗಬೇಕೆಂದು ಅವರು ಹೇಳಿದರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ತಮ್ನಾರ್ ಯೋಜನೆಯಲ್ಲಿರುವ ಪ್ರಧಾನಿ ಮೋದಿ, ಮಹದಾಯಿ ವಿಚಾರದಲ್ಲಿ ಯಾಕೆ ಮೌನ: ಸಿದ್ದಣ್ಣ ತೇಜಿ

ವೈದ್ಯಕೀಯ ಮತ್ತು ಅರೆವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಘಟನೆಗಳು ಹೆಚ್ಚಾಗದಂತೆ ಎಚ್ಚರ ವಹಿಸಬೇಕಾಗಿದೆ ಎಂದು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...