ಧಾರವಾಡ | ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಉತ್ಪನ್ನ ಖರೀದಿ ಕೇಂದ್ರಗಳು ಆರಂಭ

Date:

2025-26 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‍ಗೆ ರೂ. 5,875 ರಂತೆ ಧಾರವಾಡ ಜಿಲ್ಲೆಯಲ್ಲಿ ಸರ್ಕಾರದಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಟಾಸ್ಕಪೋರ್ಸ್ ಸಮಿತಿಯ ಅಧ್ಯಕ್ಷ ಹಾಗೂ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು ಖರೀದಿಸಲು ರೈತರ ನೋಂದಣಿಯು 80 ದಿನಗಳವರೆಗೆ ಅಂದರೆ 2026 ಜನವರಿ 29ರಿಂದ 2026 ಏಪ್ರಿಲ್ 18 ರವರೆಗೆ ಹಾಗೂ ಉತ್ಪನ್ನ ಖರೀದಿಸಲು 90 ದಿನಗಳವರೆಗೆ ಅಂದರೆ ಜನವರಿ 29 ರಿಂದ ಏಪ್ರಿಲ್ 28 ರವರೆಗೆ ಅವಧಿಯನ್ನು ನಿಗದಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಡಲೆಕಾಳು ಖರೀದಿ ಕೇಂದ್ರಗಳ ವಿವರ:
ಧಾರವಾಡ ತಾಲೂಕಿನ ಟಿ.ಎ.ಪಿ.ಸಿ.ಎಮ್.ಎಸ್ (ದೂ:9916259625), ಉಪ್ಪಿನಬೇಟಗೇರಿ ಪಿ.ಕೆ.ಪಿ.ಎಸ್ (ದೂ.:9620048221), ಹುಬ್ಬಳ್ಳಿ ತಾಲೂಕಿನ ಹುಬ್ಬಳ್ಳಿ ಟಿ.ಎ.ಪಿ.ಸಿ.ಎಮ್.ಎಸ್ (ದೂ: 6360506861), ಕೋಳಿವಾಡ ಪಿ.ಕೆ.ಪಿ.ಎಸ್ ಕೋಳಿವಾಡ ನಂ-1(ದೂ: 9945846878), ಹೆಬಸೂರ ಪಿ.ಕೆ.ಪಿ.ಎಸ್ (ದೂ: 9945894870), ನೂಲ್ವಿ ಪಿ.ಕೆ.ಪಿ.ಎಸ್ (ದೂ: 9900896952), ಹಳೇ ಹುಬ್ಬಳ್ಳಿ ಪಿ.ಕೆ.ಪಿ.ಎಸ್ (ದೂ: 9448424876), ನವಲಗುಂದ ತಾಲೂಕಿನ ಹೆಬ್ಬಾಳ ಪಿ.ಕೆ.ಪಿ.ಎಸ್ (ದೂ. 9449065613), ತಿರ್ಲಾಪೂರ ಪಿ.ಕೆ.ಪಿ.ಎಸ್ (ದೂ: 8494801475), ಆರೇಕುರಹಟ್ಟಿ ಪಿ.ಕೆ.ಪಿ.ಎಸ್ (ದೂ. 9845822903), ಶಿರೂರ ಮೊರಬಶಿರೂರ ಎಫ್.ಪಿ.ಓ (ದೂ:9380871883), ಮೊರಬ ಕೆ.ಎಸ್.ಎಫ್.ಪಿ.ಓ (ದೂ: 9620107330), ಮೊರಬ ಪಿ.ಕೆ.ಪಿ.ಎಸ್ (ದೂ: 7204821271), ಹಾಳಕುಸುಗಲ್ ಪಿ.ಕೆ.ಪಿ.ಎಸ್ (ದೂ: 8123836380), ನವಲಗುಂದ ಪಿ.ಕೆ.ಪಿ.ಎಸ್ (ದೂ: 9886491644), ಬೆಳವಟಗಿ ಪಿ.ಕೆ.ಪಿ.ಎಸ್ (ದೂ:6363463089), ನವಲಗುಂದ ಟಿ.ಎ.ಪಿ.ಸಿ.ಎಮ್.ಎಸ್ ಅಣ್ಣಿಗೇರಿ (ದೂ: 8861008191), ಅಣ್ಣಿಗೇರಿ ತಾಲೂಕಿನ ಅಣ್ಣಿಗೇರಿ ಪಿ.ಕೆ.ಪಿ.ಎಸ್ (ದೂ: 7760184669), ಅಣ್ಣಿಗೇರಿ ತಾಲೂಕು ಫಾರ್ಮರ್ ಪ್ರೋಡ್ಯೂಸರ್ ಕಂಪನಿ ಲಿಮಿಟೆಡ್ ಅಣ್ಣಿಗೇರಿ (ದೂ: 9731041200), ಕುಂದಗೋಳ ತಾಲೂಕಿನ ಯರಗುಪ್ಪಿ ಪಿ.ಕೆ.ಪಿ.ಎಸ್ (ದೂ: 9845169206), ಯಲಿವಾಳ ಪಿ.ಕೆ.ಪಿ.ಎಸ್ (ದೂ: 9945163891), ಕುಂದಗೋಳ ಪಿ.ಕೆ.ಪಿ.ಎಸ್ (ದೂ: 9845169206), ಯರೇಬೂದಿಹಾಳ ಪಿ.ಕೆ.ಪಿ.ಎಸ್ (ದೂ:9742553167), ಸಂಶಿ ಎಫ್.ಪಿ.ಓ ಕುಂದಗೋಳ (ದೂ: 7411512065), ಕುಬಿಹಾಳ ಪಿ.ಕೆ.ಪಿ.ಎಸ್ (ದೂ: 9880414263) ಖರೀದಿ ಕೇಂದ್ರಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ಪನ್ನವನ್ನು ಖರೀದಿಸಲು ಅಗತ್ಯವಿರುವ ದಾಖಲೆಗಳು:
ಆಧಾರ ಗುರುತಿನ ಚೀಟಿಯ ಮೂಲ ಪ್ರತಿ ಹಾಗೂ ಅದರ ನಕಲು ಪ್ರತಿ. ಪಹಣಿ ಪತ್ರಿಕೆಯಲ್ಲಿರುವ ಹೆಸರಿನ ರೈತರ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಾಸ್ ಪುಸ್ತಕದ ನಕಲು ಪ್ರತಿ.

ಕಡಲೆಕಾಳು ಖರೀದಿಸಲು ಅನುಸರಿಸುವ ಕ್ರಮಗಳು:
ಕಡಲೆಕಾಳು ಉತ್ಪನ್ನದ ಎಫ್.ಎ.ಕ್ಯೂ ಗುಣಮಟ್ಟ ಅಂದರೆ ಚೆನ್ನಾಗಿ ಒಣಗಿರಬೇಕು, ತೇವಾಂಶವು ಶೇ.12 ಕ್ಕಿಂತ ಕಡಿಮೆ ಇರಬೇಕು. ಕಡಲೆಕಾಳು ಉತ್ಪನ್ನವು ಗುಣಮಟ್ಟದ ಗಾತ್ರ, ಬಣ್ಣ ಮತ್ತು ಆಕಾರವನ್ನು ಹೊಂದಿರಬೇಕು.ಗಟ್ಟಿಯಾಗಿರಬೇಕು ಮತ್ತು ಮಣ್ಣಿನಿಂದ ಬೇರ್ಪಡಿಸಲ್ಪಟ್ಟು ಸ್ವಚ್ಛವಾಗಿರಬೇಕು, ಸಾಣಿಗೆಯಿಂದ ಸ್ವಚ್ಛಗೊಳಿಸಿರಬೇಕು. ಕ್ರಿಮಿಕೀಟಗಳಿಂದ ಮುಕ್ತವಾಗಿರಬೇಕು. ರೈತರಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದವರು ನೀಡುವ ಗೋಣಿ ಚೀಲದಲ್ಲಿ 50 ಕೆ.ಜಿ. ಪ್ರಮಾಣದಲ್ಲಿ ತುಂಬಬೇಕು. ಕಡಲೆಕಾಳು ಪ್ರತಿ ಎಕರೆಗೆ 04 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 40 ಕ್ವಿಂಟಾಲ್ ಪ್ರಮಾಣದ ಎಫ್‍ಎಕ್ಯೂ ಗುಣಮಟ್ಟದ ಉತ್ಪನ್ನವನ್ನು ಖರೀದಿಸಲಾಗುವುದು. ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‍ಗೆ ರೂ.5,875 ರಂತೆ ಕಡಲೆಕಾಳನ್ನು ಖರೀದಿಸಲಾಗುವುದು.

ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮಾತ್ರ ಖರೀದಿಸಲಾಗುವುದು. ಯಾವುದೇ ಸಂದರ್ಭದಲ್ಲಿ ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು. ಇದರ ಉಪಯೋಗವನ್ನು ರೈತರೇ ನೇರವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಧಾರವಾಡ, ಹುಬ್ಬಳ್ಳಿ, ಕುಂದಗೋಳ ಮತ್ತು ಅಣ್ಣಿಗೇರಿ ತಾಲೂಕಾ ತಹಶೀಲ್ದಾರ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರನ್ನು ಹಾಗೂ ಶಾಖಾ ವ್ಯವಸ್ಥಾಪಕರು, ಹುಬ್ಬಳ್ಳಿ ಶಾಖೆಯ ಕ.ರಾ.ಸ.ಮಾ.ಮ.ಮಂಡಳ (ದೂರವಾಣಿ ಸಂಖ್ಯೆ:0836-2004419)  ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...