ಧಾರವಾಡ | ಸಾಲಭಾದೆಗೆ ಮನನೊಂದು ರೈತ ಆತ್ಮಹತ್ಯೆ

Date:

ಬೆಳೆ ಸಾಲದ ಭಾರವನ್ನು ತಾಳಲಾರದೆ ರೈತರೊಬ್ಬರು ಬೇವಿನ ಮರದ ಟೊಂಗೆಗೆ ಟವಲ್‌ನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಯರೇಬೂದಿಹಾಳ ಗ್ರಾಮದಲ್ಲಿ ಸೆ. 05ರಂದು ನಡೆದಿದೆ.

ಹಜರೇಸಾಬ ಬುಡ್ಡೆಸಾಬ ತಹಶೀಲ್ದಾರ (75) ಆತ್ಮಹತ್ಯೆಯಾದ ರೈತರೆಂದು ಗುರುತಿಸಲಾಗಿದ್ದು, ಸಾಲ ಮರುಪಾವತಿ ಚಿಂತೆಯಿಂದ ಹಜರೇಸಾಬ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಯರೇಬೂದಿಹಾಳ ಗ್ರಾಮದ ನಿವಾಸಿಯಾಗಿದ್ದ ಹಜರೇಸಾಬ ತಮ್ಮ 3 ಎಕರೆ 2 ಗುಂಟೆ ಜಮೀನಿನಲ್ಲಿ ಗೋವಿನ ಜೋಳ ಬೆಳೆ ಬೆಳೆದಿದ್ದರು. ಕೃಷಿ ಚಟುವಟಿಕೆಗಾಗಿ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ ಒಟ್ಟು ರೂ. 2,00,000/- (ಎರಡು ಲಕ್ಷ ರೂಪಾಯಿ) ಬೆಳೆ ಸಾಲ ತೆಗೆದುಕೊಂಡಿದ್ದರು. ಫಸಲಿನ ನಿರೀಕ್ಷೆಯು ವಿಫಲವಾದ ಕಾರಣ, ಮಾಡಿದ ಸಾಲವನ್ನು ಮರುಪಾವತಿಸುವುದು ಹೇಗೆ ಎಂಬ ಚಿಂತೆಯಿಂದ ಗ್ರಾಮದ ಬಸವಣ್ಯಪ್ಪ ಮಾಗಿನಮನಿ ಅವರ ಹೊಲದ ಬದುವಿನಲ್ಲಿರುವ ಬೇವಿನ ಮರದ ಟೊಂಗೆಗೆ ಟವಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಯರಗುಪ್ಪಿಯಲ್ಲಿ ಸಿಲಿಂಡರ್ ಸ್ಪೋಟ; 6 ಲಕ್ಷ ಮೌಲ್ಯದ ಹೋಟೆಲ್ ಸಾಮಗ್ರಿ ಸುಟ್ಟು ಭಸ್ಮ​

ಘಟನೆ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...