ಧಾರವಾಡ | ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ, ಕೃಷಿ ಕಾರ್ಮಿಕ‌ ಸಂಘಟನೆ ಬೃಹತ್ ಪ್ರತಿಭಟನೆ

Date:

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ(ಎಐಕೆಕೆಎಂಎಸ್) ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿ ಕಛೇರಿ ವರಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ, ಕಾರ್ಪೋರೇಟ್ ಪರವಾದ ಕೃಷಿ ನೀತಿಗಳನ್ನು ಹಿಂಪಡಿಯಲು ಒತ್ತಾಯಿಸಿ ಮತ್ತು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಜೆಲ್ಲೆಯ ಎಲ್ಲಾ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ, ನೀಡಬೇಕು, ಮಳೆಯಿಂದ ಹಾನಿಯಾದ ಬೆಳೆಗೆ ಬೆಳೆ ನಷ್ಟ ಪರಿಹಾರ ನೀಡಿಬೇಕು, ಜೆಲ್ಲೆಯಲ್ಲಿ ಹದಗೆಟ್ಟ್ ರಸ್ತೆಗಳನ್ನು ದುರಸ್ತಿ ಮಾಡಬೇಕು. ರೈತರು ಬೆವರು ಸುರಿಸಿ ದೇಶದ ಜನರಿಗೆ ಅನ್ನ ಹಾಕುತ್ತಾರೆ. ಆದ್ದರಿಂದ ‘ಅನ್ನದಾತ’ರ ಯೋಗಕ್ಷೇಮವನ್ನು ಸರಿಯಾಗಿ ನೋಡಿಕೊಳ್ಳುವುದು ಪ್ರತಿಯೊಂದು ನಾಗರಿಕ ಸಮಾಜದ ಆದ್ಯ ಕರ್ತವ್ಯ. ಆದರೆ ಇಲ್ಲಿಯವರೆಗೆ ಆಳಿರುವ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಮೂಲಭೂತ ಜವಾಬ್ದಾರಿಯನ್ನು ನಿರಾಕರಿಸುತ್ತಾ ಬಂದಿರುವುದು ದುರಂತದ.

ಇಡೀ ದೇಶಾದ್ಯಂತ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ಅತ್ಯಂತ ಸಂಕಟಮಯ ಜೀವನ ನಡೆಸುತ್ತಿದ್ದು, ಸಾಲದ ಹೊರೆಯಿಂದಾಗಿ ಸಾವಿರಾರು ರೈತರು ಆತ್ಮಹತ್ಯೆಗೆ ಮೊರೆ ಹೋಗುತ್ತಿದ್ದಾರೆ. ಪ್ರತಿದಿನವೂ ಬೀಜ, ಗೊಬ್ಬರ, ಕೀಟನಾಶಕಗಳಂತಹ ಕೃಷಿ ಒಳಸುರಿಗಳ ಬೆಲೆಗಳು ಗಗನಕ್ಕೇರುತ್ತಿವೆ. ಆದರೆ ಯಾವ ಸರ್ಕಾರಗಳೂ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ದೊರಕುವಂತೆ ಕ್ರಮಗಳನ್ನು ತೆಗೆದುಕೊಳ್ಳದಿರುವುದು ವಿಷಾದದ ಸಂಗತಿಯಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ಎಲ್ಲಾ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಲು ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ಮೇಲಿನ ಅನಾವಶ್ಯಕ ಕೇಸ್‌ಗಳನ್ನು ಹಿಂಪಡೆಯಬೇಕು. ಗೋಂಜಾಳ , ಹತ್ತಿ, ಭತ್ತ, ಸೋಯಾಬಿನ್ , ಬೆಳೆಗೆ ಬೆಂಬಲ ಬೆಲೆಯನ್ನು ನೀಡಬೇಕು. ಕೃಷಿ ಕಾರ್ಮಿಕರಿಗಾಗಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿದರು.

ಈ ವರದಿ ಓದಿದ್ದೀರಾ? ಮನುವಾದದ ಮಡಿವಂತಿಕೆ, ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಬಂಡಾಯಗಾರ ಕನಕದಾಸ

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು‌ ಮಾತನಾಡಿ, ಬೆಳೆ ಪರಿಹಾರ ಇನ್ನು ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಜಮಾ ಆಗುತ್ತದೆ. ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಜೆಲ್ಲಾ ಮಟ್ಟದಲ್ಲಿ ಬಗೆಹರಿಸುವ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಉಪಾಧಕ್ಷ ಹನುಮೇಶ ಹುಡೇದ , ಜಿಲ್ಲಾ ಸಮಿತಿ ಸದಸ್ಯರಾದ ಅಲ್ಲಾವುದೀನ್ ಅಡ್ಲಿ, ಕಲ್ಲಪ್ಪ, ಗೌರಮ್ಮ, ಅಣ್ಣಪ್ಪ ಕುಲಕರ್ಣೀ, ಶಿವಲಿಂಗಪ್ಪ ಉಣಕಲ್, ಸಜ್ಜನ್, ಶ್ರೀದೇವಿ ದೊಡ್ಡಮನೆ, ಬಸ್ಸಪ್ಪ ನೇಕಾರ, ರೈತರು ಮುಂತಾದವರು ಇದ್ದರು.

ವರದಿ: ಹನುಮೇಶ ಹುಡೇದ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...