ಧಾರವಾಡ | ಬೆಳೆ ನಾಶ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಬಿತ್ತನೆ ಮಾಡಿರುವ ಬೆಳೆಗೆ ದನಕರುಗಳನ್ನು ಬಿಟ್ಟು ನಾಶ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯರಿಕೊಪ್ಪ ಗ್ರಾಮದ ರೈತರು ಒತ್ತಾಯಿಸಿದ್ದಾರೆ.

ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ರೈತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಹಸು ಮೇಯಿಸಲು ಬರುವ ಕಿಡಿಗೇಡಿಗಳು ಹಾಗೂ ದನಗಳ ಮಾಲಿಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

“ಮುಂಗಾರು ಮಳೆ ಸಕಾಲಕ್ಕೆ ಬಾರದ ಕಾರಣ ರೈತರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಪಸ್ವಲ್ಪ ಬಂದ ಮಳೆ ಹಾಗೂ ಬೋರ್‌ವೆಲ್ ನೀರಿನ ಸಹಾಯದಿಂದ ಯರಿಕೊಪ್ಪ ಗ್ರಾಮಸ್ಥರು ತಮ್ಮ ಕೃಷಿ ಭೂಮಿಯಲ್ಲಿ ಮುಂಗಾರು ಬಿತ್ತನೆ ಮಾಡಿದ್ದಾರೆ. ಬಿತ್ತನೆ ಮಾಡಿದ ಬೆಳೆಗೆ ಕಿಡಿಗೇಡಿಗಳು ದನಕರುಗಳನ್ನು ಬಿಟ್ಟು ಬೆಳೆನಾಶ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮನರೇಗಾ ಯೋಜನೆಯ ಸಮಸ್ಯೆ ಬಗೆಹರಿಸುವಂತೆ ಒತ್ತಾಯ

“ಬೆಳೆ ಮೊಳಕೆ ಒಡೆದು ಮೇಲೇಳುತ್ತಿರುವ ಸಂದರ್ಭದಲ್ಲಿ ಗ್ರಾಮದ ಹತ್ತಿರದಲ್ಲಿರುವ ತಡಸಿನಕೊಪ್ಪದ ದನಕರಗಳು ನಮ್ಮ ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆಯನ್ನು ಹಾನಿ ಮಾಡುತ್ತಿವೆ. ಹಾಗಾಗಿ ಅಕ್ಕಪಕ್ಕಾ ಗ್ರಾಮದ ಜಾನುವಾರು ಸಾಕಾಣಿಕೆದಾರರಿಗೆ ತಿಳಿಹೇಳಿ ನಮ್ಮ ಬೆಳೆ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

“ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ, ನಿರ್ಲಕ್ಷ್ಯ ತೋರಿದರೆ ಮುಂದೆ ಆಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಗಾರರು” ಎಂದು ಎಚ್ಚರಿಕೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...