ಧಾರವಾಡ | ಗೋವಿನಜೋಳ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

Date:

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತರು ಕುಂದಗೋಳ ತಹಶಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಗೋವಿನಜೋಳ ಬೆಂಬಲ ಬೆಲೆ, ಹತ್ತಿ ಖರೀದಿ ಕೇಂದ್ರ ಮತ್ತು ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ, ತಹಶಿಲ್ದಾರ ರಾಜು ಮಾವರಕರ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ತಾಲೂಕು ಅಧ್ಯಕ್ಷ ಗುರುಪಾದಪ್ಪ ಬಂಕದ ಮಾತನಾಡಿ, ರೈತರು ಪಡುತ್ತಿರುವ ಸಂಕಷ್ಟದ ಬಗ್ಗೆ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ಗಮನಕ್ಕೆ ಬಂದಿಲ್ಲ ಅನಿಸುತ್ತದೆ. ಮತ್ತು ಸರ್ಕಾರಗಳಿಗೆ ಕುಂದಗೋಳ ತಾಲೂಕು ಕಾಣುತ್ತಿಲ್ಲವಾಗಿದೆ. ಈಗಾಗಲೇ ಗೋವಿನ ಜೋಳದ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದ್ದು, ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗುತ್ತಿದೆ. ಕೆಲವೊಂದು ಸಲ ರೈತ ಸಮಸ್ಯೆ ಹೇಳಿಕೊಂಡಾಗ; ರಾಜ್ಯ ಸರ್ಕಾರ ಕೇಂದ್ರದ ಮೇಲೆ, ಕೇಂದ್ರ ಸರ್ಕಾರ ರಾಜ್ಯದ ಮೇಲೆ ಗೂಬೆ ಕೂಡ್ರಿಸುತ್ತಾ, ನಾಟಕೀಯ ರಾಜಕಾರಣ ಮಾಡುತ್ತಾರೆ. ರೈತನ ಬೆಂಬಲ ಇರದಿದ್ದರೆ ಯಾರೂ ಅಧಿಕಾರಕ್ಕೆ ಬರುವುದಿಲ್ಲ.‌ ಅಂತಹ ರೈತ ಸಂಕಷ್ಟದಲ್ಲಿದ್ದಾಗ ಆತನ ಪರ ನಿಲ್ಲುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳ ಕರ್ತವ್ಯವಾಗಿದೆ.

ರಾಜ್ಯ ರೈತ ಸಂಘದ ಕಾರ್ಯದರ್ಶಿ ಫಕೀರಪ್ಪ ಪೂಜಾರ ಮಾತನಾಡಿ, ಕುಂದಗೋಳ ತಾಲೂಕಿನಲ್ಲಿ ಗೋವಿನಜೋಳ ಬೆಂಬಲ ಬೆಲೆ ನೀಡಬೇಕು ಮತ್ತು ಹತ್ತಿ ಖರೀದಿ ಕೇಂದ್ರ ತೆರೆಯಬೇಕು ಎಂದು ಈಗಾಗಲೇ ತಶಿಲ್ದಾರರಿಗೆ ಮನವಿ ಕೊಡಲಾಗಿದ್ದು, ಇಂದಿಗೂ ಖರೀದಿ ಕೇಂದ್ರ ಸ್ಥಾಪನೆಯಾಗಿಲ್ಲ. ಮತ್ತು ಬೆಂಬಲ ಬೆಲೆ ನಿಗದಿಯಾಗಿಲ್ಲ. ಮಳೆ ಇಲ್ಲದೆಯೂ ಅರ್ಧ ಬೆಳೆ ನಾಶವಾಗಿದೆ ಮತ್ತು ವಿಪರೀತ ಮಳೆಯಿಂದಲೂ ಬೆಳೆ ನಾಶವಾಗಿದೆ. ಬೆಳೆ ಹಾನಿ ಪರಿಹಾರವಾದ ವಿಚಾರದಲ್ಲಿ ರೈತರಿಗೆ ತಾರತಮ್ಯವಾಗಿದೆ. ಸರ್ಕಾರದಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಕೂಡಲೇ ಎಚ್ಚೆತ್ತುಕೊಂಡು ರೈತರ ಬೆಳೆಹಿಮೆ ಹಾಕಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಮಾಡಬೇಕು. ಒಂದು ವೇಳೆ ಮಾಡದಿದ್ದರೆ ಕಳೆದ ಬಾರಿ ಬೆಳಗಾವಿಯಲ್ಲಿ ನಡೆದ ರೀತಿಯ ಪ್ರತಿಭಟನೆಯ ಅನಿವಾರ್ಯ ಈ ತಾಲೂಕಿಗೂ ಬರಬಹುದು ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಬ್ಬಳ್ಳಿ ತಾಲೂಕಿನ ಸಾಕ್ಷಿ ಭಾದ್ರಿ ಮಾತನಾಡಿ, ರೈತರು ಇರದಿದ್ದರೆ ಯಾರು ಉಳಿಯುವುದಿಲ್ಲ. ರೈತರು ಬೆಳೆದಿದ್ದನ್ನು ಉಣ್ಣಲೇಬೇಕು. ಗೋವಿನ ಜೋಳಕ್ಕೆ ಬೆಂಬಲ ಬೆಲೆ ನೀಡದೆ ಇದ್ದರೆ, ರೈತರೆಲ್ಲ ಸೇರಿ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದರು. ಸುಮಾ ಮಳಗಿ ಮಾತನಾಡಿ, ರಾಜಕಾರಣಿಗಳು ಎಸಿ ರೂಮ್ನಲ್ಲಿ ಕುಳಿತುಕೊಂಡ ಕಾರಣ ರೈತರ ನೋವು ಸಮಸ್ಯೆಗಳು ಅವರಿಗೆ ಕಾಣುತ್ತಿಲ್ಲ. ಅಲ್ಲಿಂದ ಹೊರ ಬಂದು ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮುಂದಾಗಬೇಕಿದೆ ಎಂದರು.

ಇದನ್ನೂ ಓದಿ ಧಾರವಾಡ | 3 ವರ್ಷ ಕಳೆದರೂ ಮುಗಿಯದ ಶಾಲೆಯ ಶೌಚಾಲಯ ಕಾಮಗಾರಿ: ಪೂರ್ಣವಾಗಿರುವುದಾಗಿ ನಕಲಿ ದಾಖಲೆ ಸೃಷ್ಟಿ, ಆರೋಪ

ಬೇಡಿಕೆಗಳು:
• ರೈತ ಬೆಳೆದ ಬೆಳೆಗೆ ಸರಿಯಾದ ಬೆಂಬಲ ಬೆಲೆ ಹಾಗೂ ಅತೀವ ಮಳೆಯಿಂದಾಗಿ ಬೆಳೆ ಹಾಳಾದ ಕಾರಣದಿಂದ ಬೆಳೆ ಪರಿಹಾರದ ಹಣವನ್ನು ಬಿಡುಗಡೆ ಮಾಡಬೇಕು.
• 2024 ನೇ ಸಾಲಿನ ಹಿಂಗಾರಿ ಮತ್ತು 2025 ನೇ ಸಾಲಿನ ಮುಂಗಾರಿ ಬೆಳೆ ವಿಮಾ ಹಣವನ್ನು ಬಿಡುಗಡೆ ಮಾಡಬೇಕು.
• ಕುಂದಗೋಳ ತಾಲೂಕಿನಲ್ಲಿ ಗೋವಿನಜೋಳವನ್ನು ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು ಅದಕ್ಕಾಗಿ ಬೆಂಬಲ ಬೆಲೆಯ ಖರೀದಿ ಕೇಂದ್ರವನ್ನು ತೇರೆಯಬೇಕು.
• ಹತ್ತಿ ಖರೀದಿ ಕೇಂದ್ರವನ್ನು ಬೆಂಬಲ ಬೆಲೆ ಅಡಿಯಲ್ಲಿ ತೇರೆಯಬೇಕು.
• ಬೆಳೆ ಪರಿಹಾರದ ಹಣವನ್ನು ಎಲ್ಲ ರೈತರಿಗೆ ಬೇಗನೆ ಹಾಕಬೇಕು.
• ಕುಂದಗೋಳ ತಾಲೂಕಿನಲ್ಲಿ ಕಬ್ಬನ್ನು ಬೆಳೆಯುತ್ತಿದ್ದು ಅದಕ್ಕಾಗಿ ಸಕ್ಕರೆ ಕಾರ್ಖಾನೆಯವರಿಗೆ ಪ್ರತಿ ಟನ್‌ಗೆ 3500 ರೂಪಾಯಿಗಳಂತೆ ಖರೀದಿಸಲು ಸೂಚಿಸಬೇಕು.
• ಕುಂದಗೋಳ ತಾಲೂಕಿನ ಹಳ್ಳಿಯ ಹೊಲದ ದಾರಿಗಳನ್ನು ಸರಿಮಾಡಲು ಹಲವಾರು ಬಾರಿ ಮನವಿ ನೀಡಿದರು ಯಾವುದೆ ರೀತಿಯ ಕ್ರಮ ಕೈಗೊಂಡಿಲ್ಲ. ಆ ದಾರಿಗಳನ್ನು ಸುಸಜ್ಜಿತಗೊಳಿಸಬೇಕೆಂದು ಸಂಬಂದ ಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು.
• ಸತತ 7-8 ವರ್ಷಗಳಿಂದ ಅತಿವೃಷ್ಟಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕನಲ್ಲಿರುವ ರೈತರ ಸಾಲ ಮನ್ನಾ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...