ಧಾರವಾಡ | ಮಗು ಅಳುತ್ತದೆಂಬ ಕಾರಣಕ್ಕೆ ನೆಲಕ್ಕೆ ಬಡಿದು ವಿಕೃತಿ ಮೆರೆದ ತಂದೆ; ಮೃತ್ಯು

Date:

ಮಗು ಅಳುತ್ತದೆ ಎಂಬ ಕಾರಣಕ್ಕೆ ತಂದೆಯೊಬ್ಬ ಮಗುವನ್ನು ನೆಲಕ್ಕೆ ಬಡಿದು ಕೊಂದಿರುವ ಹೃದಯ ವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಯಾದವಾಡದಲ್ಲಿ ನಡೆದಿದೆ.

ಮೃತ ಮಗು ಶ್ರೇಯಾ(1) ಶಂಭುಲಿಂಗಯ್ಯ ಹಾಗೂ ಸವಿತಾ ದಂಪತಿಯ ಪುತ್ರಿ. ಶಂಭುಲಿಂಗಯ್ಯ ಎಂಬಾತ ಕುಡಿತದ ಚಟಕ್ಕೆ ಒಳಗಾಗಿದ್ದು, ನಿತ್ಯವೂ ದಂಪತಿಯ ನಡುವೆ ಜಗಳ ನಡೆಯುತ್ತಿತ್ತು. ಇಂತಹ ಸಂದರ್ಭದಲ್ಲಿ ಕುಟುಂಬಸ್ಥರು, ಅಕ್ಕಪಕ್ಕದವರು ಆತನಿಗೆ ಬುದ್ದಿ ಹೇಳಿ ಬರುತ್ತಿದ್ದರು. ಇದೀಗ ತನ್ನ ಮಗುವನ್ನೇ ಕೊಂದು ಕ್ರೌರ್ಯ ಮೆರೆದಿದ್ದಾನೆ.

ರಾತ್ರಿ ವೇಳೆ ಅಳುತ್ತದೆ. ತನಗೆ ನಿದ್ರೆ ಬರುವುದಿಲ್ಲವೆಂದು ಒಂದು ವರ್ಷದ ಮಗುವಿಗೆ ಹೊಡೆದಿದ್ದಾನೆ. ಹೆಂಡತಿ ಕೇಳಿಕೊಂಡರೂ ಬಿಡದ ಪಾಪಿ ತಂದೆ, ಅಳು ನಿಲ್ಲಿಸದ ವೇಳೆ ಮಗುವನ್ನು ತೆಗೆದು ನೆಲಕ್ಕೆ ಬಡಿದಿದ್ದಾನೆ. ಇದರಿಂದಾಗಿ ಗಂಭೀರ ಗಾಯಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದ ಕುಟುಂಬಸ್ಥರು ಮಗುವನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮಗುವನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಸಂತ್ರಸ್ತ ತಾಯಿಯು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ನಿತ್ಯವೂ ಕುಡಿದು ಬಂದು ನನಗೆ ಬಡಿಯುತ್ತಿದ್ದ. ಮಗು ಅಳುತ್ತೆ ಎಂಬ ಕಾರಣಕ್ಕೆ ಮಗುವಿಗೆ ಬಡಿದ. ಬಳಿಕ ಮಗುವಿಗೆ ಹೊಡಿಯಬೇಡ, ಬೇಕಾದರೆ ನನ್ನನ್ನು ಬಡಿದು ಸಾಯಿಸು. ಆ ಮಗು ಏನು ಮಾಡಿದೆ ನಿನಗೆ ಎಂದು ಪರಿಪರಿಯಾಗಿ ಗೋಗರೆದರೂ ಕೂಡ ಮಗುವನ್ನು ಎತ್ತಿ ನೆಲಕ್ಕೆ ಬಡಿದಿದ್ದಾನೆ” ಎಂದು ಕಣ್ಣೀರು ಸುರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಶವವಾಗಿ ಪತ್ತೆ

ಕುಟುಂಬಸ್ಥರು ಮಾತನಾಡಿ, “ಮಗುವನ್ನು ಹೊಡೆದಿರುವುದು ಅಲ್ಲದೆ, ಕೊಂದಿರುವುದು ಘೋರ ಅಪರಾಧ. ಆತನಿಗೆ ಯಾವ ಶಿಕ್ಷೆ ಬೇಕಾದರೂ ನೀಡಿ, ಏನೂ ಅರಿಯದ ಕಂದಮ್ಮ ಅವನಿಗೆ ಏನು ಮಾಡಿತ್ತು” ಎಂದು ಹಿಡಿ ಶಾಪ ಹಾಕಿದ್ದಾರೆ.

“ಗಂಡ-ಹೆಂಡತಿ ಯಾವಾಗಲೂ ಜಗಳವಾಡುತ್ತಿದ್ದರು. ನಾವು ಬಹಳಷ್ಟು ಬಾರಿ ಜಗಳ ಬಿಡಿಸಿ ಆತನಿಗೆ ಬೈದು ಬುದ್ದಿಹೇಳಿ ಬರುತ್ತಿದ್ದೆವು. ಕುಡಿದ ನಶೆಯಲ್ಲಿ ಏನೂ ಅರಿಯದ ಕಂದನ್ನು ಕೊಂದಿರುವ ಪಾಪಿಯನ್ನು ಸುಮ್ಮನೆ ಬಿಡಬೇಡಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...