ಧಾರವಾಡ | RSS ಪಥಸಂಚಲನ ವೇಳೆ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ; ಕೊಲೆ ಯತ್ನ

Date:

ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದ RSS ಪಥಸಂಚಲನದ ವೇಳೆ ಭದ್ರತಾ ಕರ್ತವ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ (ಪಿಎಸ್‌ಐ) ಮೇಲೆ ವ್ಯಕ್ತಿಯೋರ್ವ ಮಾರಣಾಂತಿಕ ಹಲ್ಲೆಗೈದ ಘಟನೆ ಅ. 19ರಂದು ನಡೆದಿದೆ.

ಮಹಿಳಾ ಪಿಎಸ್‌ಐ ಪೊಲೀಸ್ ಸಿಬ್ಬಂದಿ ಜೊತೆಗೂಡಿ ಜನರನ್ನು ಪರಿಶೀಲಿಸುವ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಬೈಕ್ ನಲ್ಲಿ ಬಂದಿದ್ದ, ದ್ಯಾಮನಗೌಡ  ಕುಲಕರ್ಣಿ (31) ಎಂಬಾತನು, ಏಕಾಏಕಿ ತಡೆದು, ಲೇ ಎಂದು ಏಕವಚನದಿಂದ, “ನನ್ನ ಮೇಲೆ ಕೇಸ್ ಮಾಡಿ ತ್ರಾಸು ಕೊಡುತೀರಿ?, ನಿಮ್ಮನ್ನ ಸುಮ್ಮನೇ ಬಿಡುದಿಲ್ಲಾ” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ ಒಮ್ಮೆಲೇ ಮಹಿಳಾ ಪಿಎಸ್ಐ ಉಮಾದೇವಿ (37) ಅವರ ಹಣೆಗೆ ಬೈಕ್ ಕೀಲಿಯಿಂದ ಹೊಡೆದು, ಕುತ್ತಿಗೆ ಹಿಸುಕಿ ಕೊಲೆಗೆ ಯತ್ನಿಸಿ, ಬಲಗಾಲಿಗೆ ಕಚ್ಚಿ ಗಂಭೀರ ಗಾಯ ಮಾಡಿದ್ದಾನೆ ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿ ದ್ಯಾಮನಗೌಡ ತಾಲೂಕಿನ ಗುಡಿಸಾಗರ ನಿವಾಸಿ ಎಂದು ತಿಳಿದುಬಂದಿದ್ದು, ಆರೋಪಿಯ ಸಹೋದರಿಯು ಹಿಂದೆ ನವಲಗುಂದ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರ ಸಿಟ್ಟಿನಿಂದ ಪೊಲೀಸರ ಮೇಲೆ ದ್ವೇಷ ಸಾಧಿಸಿದ್ದಾನೆ. ಅಷ್ಟೇ ಅಲ್ಲದೆ ಮಹಿಳಾ ಪಿಎಸ್ಐ’ಗೆ ಜೀವಬೆದರಿಕೆ ಹಾಕಿದ್ದಾನೆ ಎಂದು ಎಫ್‌ಐಆರ್ ಪ್ರತಿಯಲ್ಲಿ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ನಂತರ ಪಿಎಸ್‌ಐ ನವಲಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಹಿರಿಯ ಅಧಿಕಾರಿಗಳು ಪ್ರಕರಣ ದಾಖಲಿಸಿ, ಆರೋಪಿ ದ್ಯಾಮನಗೌಡ ಕುಲಕರ್ಣಿಯನ್ನು ಬಂಧಿಸಿದ್ದಾರೆ. ಗಾಯಗೊಂಡಿರುವ ಮಹಿಳಾ ಪಿಎಸ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...