ಕರ್ತವ್ಯ ನಿರ್ವಹಣೆಗಾಗಿ ಹುಬ್ಬಳ್ಳಿಯತ್ತ ಹೊರಟಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅನಿರೀಕ್ಷಿತವಾಗಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿಯಾದ ಈರಯ್ಯ ಹಿರೇಮಠ ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಹುಬ್ಬಳ್ಳಿಯ ಅಮರಗೋಳ ಅಗ್ನಿಶಾಮಕ ದಳದಲ್ಲಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈರಯ್ಯ ಅವರನ್ನು ತಕ್ಷಣವೇ ಸ್ಥಳೀಯರ ನೆರವಿನೊಂದಿಗೆ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಈರಯ್ಯ ಕೊನೆಯುಸಿರೆಳೆದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಚಿಗರಿ ಬಸ್ಸಿನಲ್ಲಿ ಬೆಂಕಿ; ಅಗ್ನಿಶಾಮಕದಳ ದೌಡು
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





