ಧಾರವಾಡ | ಐದು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ; ಶಾಸಕ ಪ್ರಸಾದ್ ಅಬ್ಬಯ್ಯ

Date:

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಮಟನ್‌ ಮಾರುಕಟ್ಟೆ ನಿರ್ಮಾಣ ಸೇರಿದಂತೆ, ಕ್ಷೇತ್ರದ 23 ವಾರ್ಡ್‍ಗಳಲ್ಲಿ ಅಗತ್ಯ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೂಡಲೇ ಪ್ರಸ್ತಾವ ಸಲ್ಲಿಸಬೇಕು ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾನುವಾರ ತಮ್ಮ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಅವರು, ನ್ಯೂ ಇಂಗ್ಲಿಷ್ ಸ್ಕೂಲ್, ಮೇದಾರ ಓಣಿ ಬಳಿ ಇರುವ ಮಟನ್ ಮಾರುಕಟ್ಟೆಯನ್ನು ನೆಲಸಮ ಗೊಳಿಸಿ ಐದು ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಟನ್ ಮಾರುಕಟ್ಟೆ ನಿರ್ಮಾಣ ಮಾಡುವುದು, ಐದು ಕೋಟಿ ರೂ. ವೆಚ್ಚದಲ್ಲಿ ಸಿಸಿ ಟಿವಿ ಕ್ಯಾಮೆರಾ, ಮಂಟೂರು ರಸ್ತೆಯ ಹರಿಶ್ಚಂದ್ರ ಸ್ಮಶಾನದ ಬಳಿ ಎರಡು ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನಕ್ಕಾಗಿ ಪ್ರಸ್ತಾವ ಸಲ್ಲಿಸಿದರೆ ಅನುದಾನ ಬಿಡುಗಡೆ ಮಾಡಿಸಲಾಗುವುದು ಎಂದರು.

ಪ್ರತಿ ಬಾರಿಯೂ ಸಭೆಯಲ್ಲಿ ಹೇಳುವ ವಿಷಯಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಭೆಯಲ್ಲಿ ನೀಡಿದ ಸೂಚನೆಗಳನ್ನು ತಪ್ಪದೆ ಪಾಲಿಸಿ, ವರದಿ ಒಪ್ಪಿಸಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದಾಗ ಕ್ಷೇತ್ರದ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಅಧಿಕಾರಿಗಳಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾನಗರ ಪಾಲಿಕೆ ಕಾನೂನು ಸಲಹೆ ವಿಭಾಗ ಬಲಹೀನವಾಗಿದೆ. ಈ ಹಿಂದೆ ಹಲವು ಬಾರಿ ಸೂಚನೆ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪಾಲಿಕೆ ಆಸ್ತಿಗಳನ್ನು ನಿಯಮಾನುಸಾರ ಬಳಕೆ ಮಾಡದೇ ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ ಅಧೀಕ್ಷಕ ಎಂಜಿನಿಯರ್‌ ಬಿ. ತಿಮ್ಮಪ್ಪ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ವಿಜಯ್‍ಕುಮಾರ್, ಸಹಾಯಕ ವಲಯ ಆಯುಕ್ತ ಬಸವರಾಜ ಲಮಾಣಿ, ಮನೋಜ್ ಗಿರೀಶ್, ಫಕೀರಪ್ಪ ಇಂಗಳಗಿ ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...