ಧಾರವಾಡ | ಭಾರಿ ಮಳೆಗೆ ಅಣ್ಣಿಗೇರಿ ಪಟ್ಟಣದ ಸುತ್ತಮುತ್ತ ಜಲಾವೃತ

Date:

ಭಾರೀ ಸುರಿದ ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣದ ವಿವಿಧ ಬಡಾವಣೆಗಳಿಗೆ ನೀರು ನುಗ್ಗಿ ಸುತ್ತಮುತ್ತಲಿನ ಪ್ರದೇಶ ಜಲಾವೃತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಪಟ್ಟಣದ ಬೆಂತೂರ ರಸ್ತೆಯ ಹೊಲದಲ್ಲಿ ಸಿಡಿಲು ಬಡಿದು ಮಲ್ಲಪ್ಪ ಬೆಳ್ಳಿಕೊಪ್ಪ ಎಂಬುವವರ 7 ಕುರಿಗಳು ಸಾವನ್ನಪ್ಪಿವೆ. ಈ ಮಳೆಹಾನಿ ಪ್ರದೇಶಗಳಿಗೆ ಶಾಸಕ ಎನ್. ಹೆಚ್. ಕೋನರಡ್ಡಿ ಭೇಟಿ ನೀಡಿ ಪರಿಶೀಲಿಸಿ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ಸುರಕೋಡ್ ಬಡಾವಣೆ, ರಾಜರಾಜೇಶ್ವರಿ ಬಡಾವಣೆ ಮತ್ತು ಜೆ.ಎಸ್.ಎಸ್. ಕಾಲೋನಿಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ; ತಕ್ಷಣ ಜೆಸಿಬಿ ಬಳಸಿಕೊಂಡು ನೀರು ಹರಿಯಲು ದಾರಿ ಮಾಡಬೇಕು ಮತ್ತು ಮೋಟಾರ್ ಪಂಪ್ ಬಳಸಿ ಬಡಾವಣೆಗಳಿಂದ ನೀರನ್ನು ಹೊರಹಾಕಬೇಕು. ಬಡಾವಣೆಗಳಲ್ಲಿ ನೀರು ನಿಲ್ಲದಂತೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯ ಜನರಿಗೆ ಭರವಸೆ ನೀಡಿದರು.

ಪಟ್ಟಣದ ಬೆಂತೂರ ರಸ್ತೆಯ ಹೊಲದಲ್ಲಿ ಸಿಡಿಲು ಬಡಿದು ಮಲ್ಲಪ್ಪ ಬೆಳ್ಳಿಕೊಪ್ಪ ಎಂಬುವವರ 7 ಕುರಿಗಳು ಸಾವನ್ನಪ್ಪಿದ ಸ್ಥಳಕ್ಕೆ ಭೇಟಿ ನೀಡಿ, ಘಟನೆಯನ್ನು ಪರಿಶೀಲಿಸಿ, ಕುರಿಗಾಹಿಗೆ ಧನ ಸಹಾಯ ಮಾಡಿದರು. ಸಿಡಿಲು ಬಡಿದು ಕುರಿಗಳು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ಪಂಚನಾಮೆ ಮಾಡಿ, ಸರ್ಕಾರದ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲು ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಯಿಂದಾಗಿ ಅಣ್ಣಿಗೇರಿ ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಭಾಗಶಃ ಹಾನಿಯಾಗಿರುವ ಮನೆಗಳ ಕುರಿತು ಸಮೀಕ್ಷೆ ನಡೆಸಿ, ಸರ್ಕಾರದ ಆದೇಶದಂತೆ ತಕ್ಷಣ ಪರಿಹಾರ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.

ಪಟ್ಟಣದ ಅನೇಕ ಲೇಔಟ್‌ಗಳಲ್ಲಿ ರಸ್ತೆ, ಚರಂಡಿಗಳ ಒತ್ತುವರಿ ಹಾಗೂ ಪಟ್ಟಣದ ವಿವಿಧೆಡೆ ರಾಜಕಾಲುವೆಗಳ ಒತ್ತುವರಿ ಆಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿವೆ. ಈ ಒತ್ತುವರಿಗಳಿಂದಾಗಿ ಮಳೆ ನೀರು, ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ಸಮಸ್ಯೆ ಆಗುತ್ತಿದೆ. ಈ ಕುರಿತು ಪುರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಅಣ್ಣಿಗೇರಿ ಪಟ್ಟಣ ಸುಂದರವಾಗಿ ರೂಪಗೊಳ್ಳಲು ಎಲ್ಲರೂ ಸಹಕರಿಸಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ; ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಈ ಸಂದರ್ಭದಲ್ಲಿ ಅಣ್ಣಿಗೇರಿ ತಹಶೀಲ್ದಾರ್ ಎಂ.ಜಿ. ದಾಸಪ್ಪನವರ, ಪುರಸಭೆ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ, ಕಂದಾಯ ಅಧಿಕಾರಿ ರಿಷಿಕುಮಾರ್ ಸಾರಂಗಿ, ಗ್ರಾಮ ಲೆಕ್ಕಾಧಿಕಾರಿ ಎಮ್.ಎಸ್. ಪಾಟೀಲ್, ಪುರಸಭೆ ಸದಸ್ಯರುಗಳಾದ ಈಶ್ವರ ಕಾಳಪ್ಪನವರ, ಮಂಜುನಾಥ್ ಮಾಯಣ್ಣವರ, ಚಂದ್ರಣ್ಣ ಸುರಕೋಡ, ಚಂಬಣ್ಣ ಸುರಕೋಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಬಡಾವಣೆ ನಿವಾಸಿಗಳು ಮತ್ತು ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...