ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.
ವಿಠ್ಠಲ ಶಿಂಧೆ(80), ನಾರಾಯಣ ಶಿಂಧೆ (42), ಶಿವಕುಮಾರ ಶಿಂಧೆ(12), ಶ್ರೀನಿಧಿ ಶಿಂಧೆ(11) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದ್ದು, ಮೃತ ನಾರಾಯಣ ತಮ್ಮಿಬ್ಬರ ಮಕ್ಕಳು ಮತ್ತು ತಂದೆಯನ್ನು ಕರೆದೋಯ್ದು ಸಾಲಬಾಧೆ ತಾಳಲಾರದೆ ನ. 21ರಂದು ಬೆಳಿಗ್ಗೆ ಗ್ರಾಮದ ಯಲ್ಲಮ್ಮ ದೇವಸ್ಥಾನದ ಹತ್ತಿರವಿರುವ ಬಾವಿಗೆ ಹಾರಿ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ ಧಾರವಾಡ | ಗೋವಿನಜೋಳ ಬೆಂಬಲ ಬೆಲೆಗೆ ಒತ್ತಾಯಿಸಿ ರೈತರ ಪ್ರತಿಭಟನೆ
ಎಂದಿನಂತೆ ದನ ಕಾಯುವವರು ಬಾವಿಯ ಬಳಿ ಬಂದಾಗ ನೀರಿನಲ್ಲಿ ಶವಗಳು ತೇಲುತ್ತಿರುವುದು ಕಂಡುಬಂದಿದ್ದು, ತಕ್ಷಣ ಗ್ರಾಮಸ್ಥರಿಗೆ ಮತ್ತು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ಆರ್ಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.





