ನಮ್ಮ ದೇಶದ ವೀರ ಸೈನಿಕರು ತ್ಯಾಗಜೀವಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಜನರನ್ನು ಕಾಪಾಡುತ್ತಿದ್ದಾರೆ. ಅವರ ಕುಟುಂಬದ ಸದಸ್ಯರು ಕಾನೂನಿನ ತೊಡಕಿನಲ್ಲಿ ಸಿಲುಕಿ ತೊಂದರೆ ಅನುಭವಿಸಬಾರದು. ಅವರಿಗೆ ಕಾನೂನಿನ ಅರಿವು ಮೂಡಿಸುವುದು ಮತ್ತು ಕಾನೂನಿನ ನೆರವು ನೀಡುವುದಕ್ಕಾಗಿಯೇ ಉಚಿತ ಕಾನೂನು ಸೇವೆಗಳ ಕ್ಲಿನಿಕ್‍ಗಳನ್ನು ಪ್ರಾರಂಭಿಸಲಾಗಿದೆ ಎಂದು ಭಾರತಿ.ಬಿ.ಎಸ್ ಹೇಳಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡ ವಕೀಲರ ಸಂಘ ಹಾಗೂ ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಇವರ ಸಹಯೋಗದಲ್ಲಿ ಸೆ. 15ರಂದು ಧಾರವಾಡದ ಡಿ.ಸಿ.ಕಂಪೌಂಡಿನಲ್ಲಿರುವ ಸೈನಿಕ ಕಲ್ಯಾಣ ಮತ್ತು ಮುನರ್ವಸತಿ ಇಲಾಖೆಯ ಆವರಣದಲ್ಲಿ ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ವೀರ ಪರಿವಾರ ಸಹಾಯ ಯೋಜನೆ-2025 ಅಡಿಯಲ್ಲಿ ಉಚಿತ ಕಾನೂನು ಸೇವೆಗಳ ಕ್ಲಿನಿಕ್‍ಗಳ ವರ್ಚುವಲ್ ಉದ್ಘಾಟನೆ ಸಮಾರಂಭವನ್ನು ಧಾರವಾಡದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಭಾರತಿ.ಬಿ.ಎಸ್. ನೆರವೇರಿಸಿದರು.
ಈ ಸುದ್ಧಿ ಓದಿದ್ದೀರಾ? ಧಾರವಾಡ | ಪ್ರತಿ ಪೊಲೀಸ್ ಪೇದೆಯು ಜನಪರ, ಜನಸ್ನೇಹಿ ಆಗಬೇಕು: ಆಲೋಕ್ ಕುಮಾರ್
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ. ಎಫ್ .ದೊಡ್ಡಮನಿ, ಮಾಜಿ ಸೈನಿಕರು, ಅವರ ಕುಟುಂಬದವರು ಹಾಗೂ ಇಲಾಖೆಯ ಸಿಬ್ಬಂದಿಯವರು ಹಾಜರಿದ್ದರು.





