ಧಾರವಾಡ | ಸರ್ಕಾರಿ ನೌಕರಸ್ಥರು ನೀತಿ, ತತ್ವ ಸಿದ್ದಾಂತಕ್ಕೆ ಬದ್ಧರಾಗಿರಬೇಕು: ಫಕ್ಕೀರ ಸಿದ್ಧರಾಮ ಸ್ವಾಮೀಜಿ

Date:

ಸರಕಾರಿ ನೌಕರ ಸೇವೆಯಲ್ಲಿದ್ದಾಗ ನೀತಿ, ತತ್ತ್ವ, ಸಿದ್ದಾಂತಗಳಿಗೆ ಬದ್ಧನಾಗಿ ವೃತ್ತಿ ನಿರ್ವಹಿಸಬೇಕು. ಅದರಂತೆ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಅವರು ಬಡತನದಲ್ಲಿ ಹುಟ್ಟಿ ಅರಳಿದ ಮಲ್ಲಿಗೆ ಹೂವು. ಜೀವನದಲ್ಲಿ ದೊಡ್ಡ ಗುರಿಯಿಂದ ಸಾಧನೆ ಮಾಡಿದ್ದಾರೆ. ಅವರ ವ್ಯಕ್ತಿತ್ವ ಇತರರಿಗೆ ಮಾದರಿ ಎಂದು ಶಿರಹಟ್ಟಿ ಮಠದ ಫಕ್ಕೀರ ಸಿದ್ಧರಾಮ ಸ್ವಾಮೀಜಿ ಹೇಳಿದರು.

ನಗರದ ಆಲೂರು ವೆಂಕಟರಾವ ಸಭಾಭವನದಲ್ಲಿ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ನಿವೃತ್ತಿ ಪ್ರಯುಕ್ತ ಜರುಗಿದ ಅಭಿನಂದನಾ ಸಮಾರಂಭದ ಸಾನಿಧ್ಯ ವಹಿಸಿ, ಮಾತನಾಡಿ, ಸರಕಾರಿ ನೌಕರ ಸೇವೆಯಲ್ಲಿದ್ದಾಗ ನೀತಿ, ತತ್ತ್ವ, ಸಿದ್ದಾಂತಗಳಿಗೆ ಬದ್ಧನಾಗಿ ವೃತ್ತಿ ನಿರ್ವಹಿಸಬೇಕು. ನಿವೃತ್ತಿ ನಂತರ ತನ್ನ ಅನುಭವದ ಆಧಾರದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಜೀವನದಲ್ಲಿ ಸಾರ್ಥಕತೆ, ಸಮಾದಾನ ಸಿಗುತ್ತದೆ ಮತ್ತು ಅವರ ಪರೊಪಕಾರಿ, ಜೀವಪರ ಚಿಂತನೆಯಿಂದ ಜೀವನ ಸಾರ್ಥಕವಾಗುತ್ತದೆ ಎಂದರು.

ಮುರಘಾಮಠದ ಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಪ್ರತಿ ಮನುಷ್ಯ ಭೂಮಿಯ ಮೇಲೆ ನೂರು ವರ್ಷ ಬದುಕುತ್ತಾನೆ. ಹಾಗೆ ಹದ್ದು ಕೂಡ ನೂರು ವರ್ಷ ಬದುಕುತ್ತದೆ. ಆದರೆ ಹದ್ದಿನ ಹಾಗೆ ಬದುಕುವುದು ಬದುಕಲ್ಲ. ಆತ್ಮ ಸಾಕ್ಷಿಯಾಗಿ ಮತ್ತು ಮನ ಸಾಕ್ಷಿಯಾಗಿ ಬದುಕಬೇಕು ಎಂಬುವುದನ್ನು ಬಸವಣ್ಣವರ ತಮ್ಮ ವಚನದಲ್ಲಿ ಹೇಳಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿನಂದನೆ ಸ್ವಿಕರಿಸಿದ ಪ್ರಧಾನ ಜಿಲ್ಲಾ ನ್ಯಾಯಾದೀಶ ಎಸ್.ಬಿ.ವಸ್ತ್ರಮಠ ಮಾತನಾಡಿ, ಜೀವನದಲ್ಲಿ ನಾನು ಕಷ್ಟ ಮತ್ತು ಸುಖ ಎರಡನ್ನೂ ಕಂಡಿದ್ದೇನೆ. ಒಂದು ರೂಪಾಯಿಯಲ್ಲಿಯೂ ಚಹಾ ಕುಡಿದಿದ್ದೇನೆ. ಅದೇ ರೀತಿಯಾಗಿ 500 ರೂಪಾಯಿ ಕೊಟ್ಟು ರೇಸಿಡೆನ್ಸಿ ಹೋಟೆಲ್‍ನಲ್ಲಿಯೂ ಸಹ ಚಹಾ ಕುಡಿದಿದ್ದೇನೆ. ನಾವು ಒಂದರಿಂದ ಎರಡು ಲಕ್ಷದವರೆಗೆ ಸಂಬಳ ಪಡೆದುಕೊಂಡರೂ ನೆಮ್ಮದಿಯ, ಖುಷಿಯ ಜೀವನ ಮಾಡಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮೊದಲು ಒಂದು ರೂಪಾಯಿ ಇದ್ದರು ಜೀವನದಲ್ಲಿ ಸಂತಸದಿಂದ ಪ್ರೀತಿಯಿಂದ ಇರುತ್ತಿದ್ದೆವು. ಸಣ್ಣ ವಯಸ್ಸಿನಲ್ಲಿ ಅಪ್ಪ ಕೊಟ್ಟ ಒಂದು ರೂಪಾಯಿ ಮನಸ್ಸಿಗೆ ಆನಂದ ತರುತಿತ್ತು. ಮೂರರಿಂದ ನಾಲ್ಕು ದಿನಗಳವರೆಗೆ ಆ ಒಂದು ರೂಪಾಯಿ ನೋಡಿಕೊಂಡು ಸಂತಸದಿಂದ ಆಡಿ, ನಲಿದಿದ್ದೆವೆ. ಅದೇ ಒಂದು ರೂಪಾಯಿ ಕಳೆದುಕೊಂಡಾಗ ಮೂರು ದಿನ ಊಟ ಬಿಟ್ಟು, ಹುಡುಕಿದ್ದೂ ಇದೆ. ಆದರೆ ನಾವು ಈ ದಿನಗಳಲ್ಲಿ ಒಂದರಿಂದ ಎರಡು ಲಕ್ಷದವರೆಗೆ ಸಂಬಳವನ್ನು ಪಡೆದರೂ, ಆ ಖುಷಿ ನೆಮ್ಮದಿ ಸಿಗುವುದಿಲ್ಲ. ಹಾಗೆ ಜೀವನವೆಂಬುವುದು ನಿಂತ ನೀರಾಗಬಾರದು. ಮುಂದಕ್ಕೆ ಸಾಗಿ ನದಿಗಳ ಮೂಲಕ ಸಾಗರವನ್ನು ಸೇರುವ ಮಾರ್ಗವನ್ನು ಕಂಡುಕೊಂಡು ಮುಂದೆ ಸಾಗಿ ಸಾಧನೆ ಮಾಡುವ ಗುರಿಯನ್ನು ಹೊಂದಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಧಾರವಾಡ | ಬಾಬು ಜಗಜೀವನ ರಾಂ, ನಿರಂತರ ದೇಶದ ಅಭಿವೃದ್ಧಿಪರ ಇದ್ದವರು: ಶಾಸಕ ಎನ್.ಎಚ್.ಕೋನರಡ್ಡಿ

ಕಾರ್ಯಕ್ರಮದಲ್ಲಿ ಕೃಷಿ ಮಾರಾಟ ಇಲಾಖೆಯ ರಾಜ್ಯ ನಿರ್ದೇಶಕ ಶಿವಾನಂದ ಕಾಪಶಿ ಮತ್ತು ಧಾರವಾಡದ ಹಿರಿಯ ನ್ಯಾಯವಾದಿ ಎ.ಸಿ.ಚಾಕಲಬ್ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದೀಪಾ ಪತ್ತಾರ ಪ್ರಾರ್ಥಿಸಿದರು. ಪ್ರೊ. ಸಿದ್ದಯ್ಯ ವಸ್ತ್ರಮಠ ಸ್ವಾಗತಿಸಿದರು. ವಿನಾಯಕ ವಸ್ತ್ರಮಠ ವಂದಿಸಿದರು. ಡಾ. ಜಗದತ್ತ ಹಡಗಲಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಬಿ.ವಸ್ತ್ರಮಠ ಗೆಳೆಯರ ಬಳಗ ಹಾಗೂ ಕುಟುಂಬದ ಸದಸ್ಯರು, ಬಂಧುಗಳು, ಗುರು ಹಿರಿಯರು, ಅವರ ಅಭಿಮಾನಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...