ಧಾರವಾಡ | ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಅಸ್ತು; ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಶಶಿಕಲಾ

Date:

ಅತಿಥಿ ಉಪನ್ಯಾಸಕರ ನೇಮಕಾತಿಗೆ ಒತ್ತಾಯಿಸಿ ಎಐಡಿಎಸ್ಓ ನೇತೃತ್ವದಲ್ಲಿ ರಾಜ್ಯದ ವಿದ್ಯಾರ್ಥಿಗಳು ಕಳೆದ ಎರಡು ತಿಂಗಳಿಂದ ಹೋರಾಟ ನಡೆಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳನ್ನು ನಡೆಸಿ, ಸೆಪ್ಟೆಂಬರ್ 27ರಂದು ರಾಜ್ಯವಾಪಿ ಸ್ವಯಂಪ್ರೇರಿತರಾಗಿ ತರಗತಿ ಬಹಿಷ್ಕರಿಸಿದ್ದಾರೆ. ಇದೀಗ ಕರ್ನಾಟಕ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಕೂಗಿಗೆ ಸ್ಪಂದಿಸಿ, ನೇಮಕಾತಿಗೆ ಮುಂದಾದ ಸರ್ಕಾರದ ನಡೆಯನ್ನು ಸ್ವಾಗತಿಸಿ ಎಐಡಿಎಸ್ಓ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ 2 ತಿಂಗಳಾದರೂ, ಅತಿಥಿ ಉಪನ್ಯಾಸಕರಿಲ್ಲದೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ತರಗತಿಗಳನ್ನೇ ನಡೆಸದೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳು ಪರೀಕ್ಷೆಗಳನ್ನು ಕೂಡ ಘೋಷಿಸಿವೆ. ಇನ್ನೊಂದೆಡೆ, ಖಾಸಗಿ ಕಾಲೇಜುಗಳಲ್ಲಿ ಸರಾಗವಾಗಿ ಪಾಠಗಳು ನಡೆದು ಅಲ್ಲಿನ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗುತ್ತಿದ್ದಾರೆ. ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕಿಂದು ಅಂತಿಮವಾಗಿ ಜಯ ದೊರೆತಿದೆ. ಆದರೆ, ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆ ಪಾಠ ನಡೆಸಿದ ನಂತರವಷ್ಟೇ ಪರೀಕ್ಷೆಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರವನ್ನು ಈ ಮೂಲಕ ಆಗ್ರಹಿಸುತ್ತಿದ್ದೇವೆ ಎಂದರು.

ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂಬ ಸಂದೇಶವನ್ನು ಕರ್ನಾಟಕದ ವಿದ್ಯಾರ್ಥಿಗಳು ಈ ಮೂಲಕ ಎಲ್ಲೆಡೆ ಸಾರಿದ್ದಾರೆ. ಹೋರಾಟದಲ್ಲಿ ಭಾಗಿಯಾದ ಧಾರವಾಡ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಇಂದು ಎಐಡಿಎಸ್ಓ ಧಾರವಾಡ ಜಿಲ್ಲಾ ಸಮಿತಿಯಿಂದ ಕ್ರಾಂತಿಕಾರಿ ಅಭಿನಂದನೆಗಳನ್ನು ತಿಳಿಸಿದರು. ತರಗತಿಗಳನ್ನು ಪೂರ್ಣಗೊಳಿಸದೆ ಪರೀಕ್ಷೆಗಳನ್ನು ನಡೆಸಿದ್ದಲ್ಲಿ, ಮುಂಬರುವ ದಿನಗಳಲ್ಲಿ ಈ ಸಮಸ್ಯೆಯ ವಿರುದ್ಧ ವಿದ್ಯಾರ್ಥಿಗಳು ಒಟ್ಟಾಗಿ ಹೋರಾಡಬೇಕಾಗುತ್ತದೆ ಎಂಬ ಕರೆಯನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ನೀರು ಸರಬರಾಜು, ಒಳಚರಂಡಿ ಮಂಡಳಿ ಅಧ್ಯಕ್ಷೆಯಾಗಿ ಶಿವಲೀಲಾ ಕುಲಕರ್ಣಿ ಅಧಿಕಾರ ಸ್ವೀಕಾರ

ಈ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷೆ ಸಿಂಧೂ ಕೌದಿ, ಕಚೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತ ಸಿದ್ದು, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...