ಧಾರವಾಡ | ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

Date:

ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದೆ. ಪಂಚ ಗ್ಯಾರಂಟಿಗಳೊಂದಿಗೆ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಮುಂದುವರೆಯುತ್ತವೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ಕೃಷಿಮೇಳ- 2023 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ, ಆದರೆ ಸರ್ಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗಿದೆ. ಪಂಚ‌ ಗ್ಯಾರಂಟಿಗಳು ಸೇರಿದಂತೆ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3.80 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರ್ಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅ‌ನುಷ್ಠಾನಕ್ಕೆ ಅಂದಾಜು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಅಂದಾಜು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯಗಳಿಗೆ ಹಣ ಹೊಂದಿಸಲು ಸರ್ಕಾರ ಶಕ್ತವಾಗಿದೆ. ಯಾರಿಗೂ ಭಯಬೇಡ” ಎಂದರು.

ಪಂಚ ಗ್ಯಾರಂಟಿಗಳ ವೆಚ್ಚ ಸೇರಿದಂತೆ ಮುಂದಿನ ವರ್ಷದ ಬಜೆಟ್ ಅಂದಾಜು 3.80 ಲಕ್ಷ ಕೋಟಿ ರೂ.ಗಳಾಗುವ ಸಾಧ್ಯತೆಯಿದೆ” ಎಂದು ತಿಳಿಸಿದರು.

“ಪ್ರಸ್ತುತದಲ್ಲಿ ಶೇ.60ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಮಂದಿ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು” ಎಂದರು.

“ಯುವಜನರು, ಹೆಚ್ಚು ಮಂದಿ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ. ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಜನರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು” ಎಂದರು.

“ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿವಹಿಸಿ, ಸಂಶೋಧನೆ ಮಾಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

“ಲ್ಯಾಬ್ ಟು ಲ್ಯಾಂಡ್ ಅಂದರೆ ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತವೆ. ಕೃಷಿಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವುದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮವಹಿಸಲಾಗಿದೆ” ಎಂದರು.

ಕೋರಮಂಗಲ ಚಲ್ಲಘಟ್ಟ(ಕೆಸಿ) ವ್ಯಾಲಿ ಮೂಲಕ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ, ನೀರಾವರಿಗೆ ಅನುಕೂಲ ಮಾಡಲಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಈ ವರ್ಷದಿಂದ ರೈತರಿಗೆ 5 ಲಕ್ಷ‌ ರೂ.ವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ₹15 ಲಕ್ಷದವರೆಗೆ ಕೇವಲ ಶೇ.3 ರಷ್ಟು ಬಡ್ಡಿ ನಿಗದಿಗೊಳಿಸಿ, ಕ್ರಮಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಕೃಷಿ ಸಚಿವ ಎನ್ ಚಲುರಾಯಸ್ವಾಮಿ ಮಾತನಾಡಿ, “ಅನೇಕ ವೀರರ ತ್ಯಾಗ ಬಲಿದಾನಗಳಿಂದ ಸ್ವಾತಂತ್ರ್ಯ ಸಿಕ್ಕಿದೆ. ರೈತರು ಅನೇಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದು, ಅವುಗಳ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ದೇಶಕ್ಕೆ ಮಾದರಿಯಾಗುವ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದಾರೆ” ಎಂದು ಹೇಳಿದರು.

“ಸರ್ಕಾರದ ಆರ್ಥಿಕ ಸುರಕ್ಷತೆ ಕಾಪಾಡಿಕೊಂಡು ಬಡವರ, ಹಿಂದುಳಿದವರ, ರೈತರ, ಮಹಿಳೆಯರ ಅಭಿವೃದ್ಧಿಗಾಗಿ ವಿಶೇಷವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ‌ಅನುಷ್ಠಾನಗೊಳಿಸಿದೆ. ಕೃಷಿಭಾಗ್ಯ ಯೋಜನೆ ಮುಂದುವರಿಕೆಗೆ ಸರ್ಕಾರ ಆದೇಶಿಸಿದೆ” ಎಂದರು.‌

“ಧಾರವಾಡ ಕೃಷಿ ವಿವಿಯು, ರಾಷ್ಟ್ರದ 10 ಉತ್ತಮ ಕೃಷಿ ವಿಶ್ವವಿದ್ಯಾಲಯದಗಳಲ್ಲಿ ಸ್ಥಾನ ಪಡೆದಿದೆ. ಸಂಶೋಧನೆ, ಕೃಷಿ ತಾಂತ್ರಿಕತೆ, ಉತ್ತಮ ಬೀಜ ತಳಿಗಳ ಬಿಡುಗಡೆ ಮಾಡುವ ಮೂಲಕ ರೈತರ ಕಣ್ಮಣಿಯಾಗಿದೆ. ರಾಜ್ಯ ಸರ್ಕಾರ ರೈತರ ಬೆಳೆವಿಮೆಗಾಗಿ ₹900 ಕೋಟಿ ಮೀಸಲಿಡಲಾಗಿದೆ. ಇದರಿಂದ ಬೆಳೆವಿಮೆ ಮಾಡಿಸಿರುವ ಸುಮಾರು 16 ಲಕ್ಷ ರೈತರು ಲಾಭ ಪಡೆಯಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಾಲಕಿ ಬರೆದ ಪತ್ರಕ್ಕೆ ಸಿಎಂ ಸಿದ್ಧರಾಮಯ್ಯ ಫಿದಾ; ವಿದ್ಯಾರ್ಥಿನಿ ಫೋಷಕರು-ಶಿಕ್ಷಕರು ಖುಷ್

ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, “ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ರೈತರಿಗೆ ಅನಕೂಲ ಮಾಡಿದೆ. ಪ್ರಸ್ತುತ ರಾಜ್ಯ ಸರ್ಕಾರ ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ ಮತ್ತು 10‌ ಲಕ್ಷದಿಂದ 15 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು 25 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ರೈತರ, ಬಡವರ ಶ್ರೇಯೋಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಕೃಷಿ ವಿವಿ ಕುಲಾಧಿಪತಿ ಎನ್ ಚಲುವರಾಯಸ್ವಾಮಿ ಅವರು ಕೃಷಿ ವಿವಿಯ ವಿಶೇಷ ಪ್ರಕಟಣೆಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಶ್ರೇಷ್ಠ ಕೃಷಿ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆಯರಿಗೆ, ಪ್ರಗತಿಪರ ರೈತರಿಗೆ ಮುಖ್ಯಮಂತ್ರಿ ಅವರು ಪ್ರಶಸ್ತಿ ವಿತರಿಸಿ, ಗೌರವಿಸಿದರು.

ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ಪ್ರಸಾದ ಅಬ್ಬಯ್ಯ, ಎನ್‌ ಎಚ್ ಕೋನರಡ್ಡಿ, ಬಸವರಾಜ ಶಿವಣ್ಣನವರ, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ, ಕೃಷಿ ಇಲಾಖೆ ಆಯುಕ್ತ ವೈ ಎಸ್ ಪಾಟೀಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ, ಜಿ ಪಂ ಸಿಇಒ ಸ್ವರೂಪ ಟಿ ಕೆ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ ಹಾಗೂ ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯರು, ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...