ಧಾರವಾಡ | ಪದವಿ ಶಿಕ್ಷಣದ ಹಂತ ಜೀವನದ ಬಹುಮುಖ್ಯ ಕಾಲಘಟ್ಟ: ಜಿಲ್ಲಾಧಿಕಾರಿ ದಿವ್ಯ ಪ್ರಭು

Date:

ಪದವಿ ಹಂತದಲ್ಲಿಯೇ ಯುವಕ, ಯುವತಿಯರು ಐಎಎಸ್, ಐಪಿಎಸ್‍ ಪರೀಕ್ಷೆಗಳಿಗೆ ಸಿದ್ಧತೆ ಆರಂಭಿಸಬೇಕು. ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಇರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಯುವ ಚೇತನದಲ್ಲಿ ಭಾಗವಹಿಸಿ, ಸಾಧಿಸುವ ಛಲದಿಂದ ಪ್ರತಿಜ್ಞೆ ಮಾಡಬೇಕೆಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿರುವ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆ ಕುರಿತು ಆರಂಭವಾಗಿರುವ ಯುವ ಚೇತನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಪ್ರತಿ ತಿಂಗಳು ಯುವಚೇತನ ಕಾರ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ವಿಷಯ ತಜ್ಞರು, ತರಬೇತಿದಾರರು ಮತ್ತು ಹಿರಿಯ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಗಳ ಮೂಲಕ ಮಾಹಿತಿ ನೀಡಲಿದ್ದಾರೆ. ವಸತಿ ನಿಲಯಗಳಲ್ಲಿ ಬಡ, ಮಧ್ಯಮ ಕುಟುಂಬದ ವಿದ್ಯಾರ್ಥಿಗಳು ಹೆಚ್ಚಾಗಿ ಇರುವದರಿಂದ ಅವರಿಗೆ ಉತ್ತಮ ತರಬೇತಿ ನೀಡುವ ಉದ್ದೇಶದಿಂದ ಉಚಿತವಾಗಿ ಈ ಯುವ ಚೇತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವಿ ಶಿಕ್ಷಣದ ಹಂತ ಜೀವನದಲ್ಲಿ ಬಹು ಮುಖ್ಯವಾದ ಕಾಲಘಟ್ಟ. ವಿದ್ಯಾರ್ಥಿಗಳು ಓದು, ಸಾಧನೆ ಬಿಟ್ಟು ಬೇರೆಡೆ ಚಿಂತಿಸಬಾರದು. ಜೀವನದ ಗುರಿ ತಲುಪಿದಾಗ ನೆಮ್ಮದಿ ಸೀಗುತ್ತದೆ. ವಿದ್ಯಾರ್ಥಿಗಳಲ್ಲಿ ಮುನ್ನುಗ್ಗುವ, ಸಾಧನೆ ಮಾಡುವ ಹಠ, ಛಲ ಇರಬೇಕೆಂದು ಹೇಳಿದರು.

ಯುವ ಚೇತನ ಉದ್ಘಾಟಿಸಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸ್ವಯಂ ನಿರ್ಧಾರ ಮತ್ತು ದೃಢತೆಯಿಂದ ಸಿದ್ಧರಾಗಬೇಕು. ಪರೀಕ್ಷಾ ಸಿದ್ಧತೆ ಆರಂಭದಿಂದ ವ್ಯವಸ್ಥಿವಾಗಿ ಆಗಬೇಕು. ಇನ್ನೊಬ್ಬರನ್ನು ನೋಡಿ, ಬರಿ ಆಸೆ ಪಟ್ಟು ಬರೆಯುವ ಪರೀಕ್ಷೆ ಅಲ್ಲ. ಆತ್ಮ ವಿಶ್ವಾಸ ಮತ್ತು ಕಠಿಣ ಪರಿಶ್ರಮ ಮುಖ್ಯವಾಗಿದೆ ಎಂದು ತಿಳಿಸಿದರು.

ಯುವ ಚೇತನ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಗಳ ವಸತಿ ನಿಲಯಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ನಿಲಯಪಾಲಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...