ಧಾರವಾಡ | ಕ್ಷುಲ್ಲಕ ಕಾರಣಕ್ಕೆ ರಸ್ತೆ ಮಧ್ಯೆಯೇ ಗುಂಡಿನ ಕಾಳಗ: ಬಿಜೆಪಿ ಮುಖಂಡನ ಪುತ್ರ ಭಾಗಿ?

Date:

ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮುಖಂಡನ ಪುತ್ರ ಮತ್ತು ಆತನ ಸ್ನೇಹಿತರು ಹಾಗೂ ಯುವಕನೊಬ್ಬನ ಮಧ್ಯೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಡು‌ ಹಾರಿಸಿದ ಘಟನೆ ಧಾರವಾಡದ ಆರ್.ಎನ್. ಶೆಟ್ಟಿ ಕ್ರಿಡಾಂಗಣದ ಬಳಿ ಕಳೆದ ಬುಧವಾರ ನಡೆದಿದೆ.

ಆ ಹಿನ್ನೆಲೆಯಲ್ಲಿ ಎರಡು ಗುಂಡು ಹಾರಿಸಿದ ಯುವಕ ಅಭಿಷೇಕ ಬಡ್ಡಿಮನಿ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ಬಿಜೆಪಿ ಮುಖಂಡ ಹಾಗೂ ಸಿಂಡಿಕೇಟ್ ಸದಸ್ಯರಾಗಿದ್ದ ಕಲ್ಮೇಶ ಹಾವೇರಿಪೇಟೆ ಅವರ ಪುತ್ರ ಪ್ರಜ್ವಲ್, ಘಟನೆ ವೇಳೆ ಕಾರು ಚಲಾಯಿಸುತ್ತಿದ್ದರು. ಪ್ರಜ್ವಲ್ ಮತ್ತು ಸ್ನೇಹಿತರು ಕಾರಿನಲ್ಲಿ ಬರುವಾಗ ಏಕಾಏಕಿ ಡಿಕ್ಕಿ ಹೊಡೆದು ಹಲ್ಲೆ ಮಾಡಲು ಬಂದನು. ಅಲ್ಲದೇ ಗುಂಡು ಹಾರಿಸಿದ್ದಾರೆ ಎಂದು ಅಭಿಷೇಕ ಪ್ರತಿದೂರು ದಾಖಲಿಸಿದ್ದಾರೆ.

ಇನ್ನುಳಿದ ಗಣೇಶ ಮತ್ತು ದಿನೇಶ ಎಂಬುವವರು ಕಾರಿನಲ್ಲಿ ಬಂದು ಅಭಿಷೇಕನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಹಲ್ಲೆ ಮಾಡಲು ಯತ್ನಿಸಿದರು. ಆದ್ಧರಿಂದ ಜೀವ ರಕ್ಷಣೆಗೆ ಗುಂಡು ಹಾ‌ರಿಸಿರುವುದಾಗಿ ಅಭಿಷೇಕ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ? ಧಾರವಾಡ | ಸರ್ಕಾರದ ವಿರುದ್ಧ ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಶಾಸಕ ಎನ್.ಎಚ್.ಕೋನರಡ್ಡಿ ಆರೋಪ

ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪೋಲಿಸ್ ವಶಕ್ಕೆ ಪಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ರಸ್ತೆ ಮದ್ಯೆ ಫೈರಿಂಗ್ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ದೂರು ಪ್ರತಿ ದೂರುಗಳು ದಾಖಲಾಗಿದ್ದು, ಅಭಿಷೇಕ್ ಬಡ್ಡಿಮನಿ, ಪ್ರಜ್ವಲ್ ಹಾವೇರಿಪೇಟ್, ಗಣೇಶ್ ಕೋಡೆ, ದಾನೇಶ್ ಕಠಾರಿ ಎಂಬ ನಾಲ್ವರು ಯುವಕರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...