ಧಾರವಾಡ | ಮಳೆಗೆ ಭಾರಿ ಬೆಳೆಹಾನಿ; 100ಕ್ಕೂ ಹೆಚ್ಚು ಮನೆಗೆ ನೀರು: ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

Date:

ಧಾರವಾಡ ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಆಗಿದೆ. ಈ ಕುರಿತು ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ನೀಡಿ, ಪರಿಶೀಲನೆ ನಡೆಸಿ, ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಗ್ರಾಮಗಳ ರೈತರನ್ನು, ಸಾರ್ವಜನಿಕರನ್ನು ಭೇಟಿಯಾಗಿ ವಿವಿಧ ಮನವಿ ಸ್ವೀಕರಿಸಿದರು. ಬೆಳೆಹಾನಿ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಹಾಗೂ ಮನೆ ಹಾನಿ ಮತ್ತು ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಬಗ್ಗೆ ವರದಿ ಸಲ್ಲಿಸಿ, ಅದಕ್ಕೆ ಪರಿಹಾರ ಕ್ರಮ ಜರುಗಿಸಲು ಗ್ರಾಮ ಪಂಚಾಯತ ಮತ್ತು ತಹಶೀಲ್ದಾರರಿಗೆ ಸೂಚಿಸಿದರು.

ತುಪ್ಪರಿಹಳ್ಳದ ನೆರೆ ಹಾವಳಿಯಿಂದ ಶಿರೂರ ಗ್ರಾಮದ ಶಾಲೆ ಆವರಣ ಹಾಗೂ 100 ಕ್ಕೂ ಹೆಚ್ಚು ಮನೆಗಳಿಗೆ ನೀರು ಬಂದಿದೆ. ಇದನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಬೇಕು. ಹಾಳಾಗಿರುವ ರಸ್ತೆ ದುರಸ್ತಿ ಮಾಡಬೇಕು. ಹೆಚ್ಚುವರಿ ಆಗಿ ಹೆಸರು ಕಾಳು ಖರೀದಿ ಮಾಡಬೇಕು ಮತ್ತು ಬೆಳೆ ಹಾನಿ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ ಆವರಣ, ಮನೆಗಳಿಗೆ ನೀರು ಬಂದಿರುವ ಕುರಿತು ಸ್ವಚ್ಛತೆ ಕೈಗೊಳ್ಳಲು ತಾಲ್ಲೂಕು ಪಂಚಾಯತ ಇಓ ಹಾಗೂ ಬಿಇಓ ಅವರಿಗೆ ಈಗಾಗಲೇ ಪಿ.ಆರ್.ಇ.ಡಿ ವಿಭಾಗಗಳಿಗೆ ತಿಳಿಸಲಾಗಿದೆ. ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಮಾಡಿ ಅದರ ವರದಿಯನ್ನು ಗ್ರಾಮ ಪಂಚಾಯತ್, ತಹಶೀಲ್ದಾರ ಕಚೇರಿ, ರೈತ ಸಂಪರ್ಕ ಕೇಂದ್ರ, ಜಿಲ್ಲಾಧಿಕಾರಿಗಳ ಕಚೇರಿ ವೆಬ್‍ಸೈಟ್‍ದಲ್ಲಿ ಪ್ರಕಟಿಸಲಾಗುತ್ತದೆ. ಹೆಸರು ಬಿಟ್ಟು ಹೋಗಿದ್ದರೆ ರೈತರು ಆಕ್ಷೇಪಣೆ ಸಲ್ಲಿಸಲು ಒಂದು ವಾರದ ಅವಕಾಶ ನೀಡಲಾಗಿರುತ್ತದೆ. ರೈತರು ಪರಿಶೀಲಿಸಿ, ತಮ್ಮ ಹೆಸರು, ಜಮೀನು ಬೆಳೆಹಾನಿ ವಿವರ ಪ್ರಕಟವಾಗಿರದಿದ್ದಲ್ಲಿ ಮನವಿ ಆಕ್ಷೇಪಣೆ  ಸಲ್ಲಿಸಬೇಕು. ಮರು ಸಮೀಕ್ಷೆ ಮಾಡಿ ಅರ್ಹವಿದ್ದಲ್ಲಿ ಪಟ್ಟಿಗೆ ಸೆರ್ಪಡೆ ಮಾಡುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಅಮ್ಮಿನಭಾವಿ-ಶಿರೂರ ರಸ್ತೆ ನಿರ್ಮಾಣದ ಬಗ್ಗೆ ದೂರುಗಳಿದ್ದಲ್ಲಿ ಲಿಖಿತವಾಗಿ ಸಲ್ಲಿಸಿದರೆ ಪರಿಶೀಲಿಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಶಿರೂರ ಗ್ರಾಮ ಪಂಚಾಯತ ಉಪಾಧ್ಯಕ್ಷ ಸಂಗನಗೌಡ ತೋಟದ, ಸದಸ್ಯ ಈರಣ್ಣ ಕಡೆಮನಿ, ರೈತ ಮುಖಂಡ ಮಲ್ಲನಗೌಡ ಸೇರಿದಂತೆ ಇತರರು ಇದ್ದರು.

ಇದನ್ನು ಓದಿದ್ದೀರಾ? ಧಾರವಾಡ | ಧಾರಾಕಾರ ಮಳೆಗೆ ಮನೆ ಕುಸಿತ: ಮಹಿಳೆ ಸಾವು

ಹಾನಿಗೆ ಒಳಗಾದ ಬೆಳೆಗಳನ್ನು ಸರಿಯಾಗಿ ಸಮೀಕ್ಷೆ ಮಾಡಿ, ದಾಖಲಿಸಬೇಕು. ರೈತರಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು; ಅಮ್ಮಿನಭಾವಿ, ಶಿರೂರು, ಮೊರಬ, ಅರೇಕುರಹಟ್ಟಿ, ಯಮನೂರು, ಕಿರೆಸೂರ, ತೀರ್ಲಾಪುರ ವಿವಿಧ ಗ್ರಾಮಗಳಿಗರ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಮತ್ತು ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...