ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ; ಲಿಂಗಾಯತ ಮಹಾಸಭಾ ಖಂಡನೆ

Date:

ತಾಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆಯು ಇಡೀ ರಾಜ್ಯದ ಜನತೆಯ ಆಕ್ರೋಶಕ್ಕೆ ಕಾರಣವಾಗಿದ್ದು, ಎಲ್ಲಾ ಜನರು ಜಾತಿ, ಮತ, ಪಕ್ಷಭೇದ ಮರೆತು ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಸಂತ್ರಸ್ತರ ಪರವಾಗಿ ನಿಂತು ಧೈರ್ಯ ಹೇಳುವ ಕೆಲಸ ಮಾಡಿದ್ದಾರೆ. ಆ ಹಿನ್ನೆಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಧಾರವಾಡ ಜಿಲ್ಲಾ ಯುವ ಘಟಕದ ಸದಸ್ಯರು ಡಿ. 28ರಂದು ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಗೆ ಭೇಟಿ ಕೊಟ್ಟು, ಸಾಂತ್ವನ ಹೇಳಿದ್ದರು.

ಇದೀಗ ಈ ಕುರಿತು ಈದಿನ.ಕಾಮ್ ಜತೆಗೆ ಸಿ. ಜಿ. ಪಾಟೀಲ ಮಾತನಾಡಿ, ಜಾತಿ ಕಾರಣಕ್ಕಾಗಿ ಹೆತ್ತ ಮಗಳನ್ನೇ ಕೊಲೆ ಮಾಡಿದ ಘಟನೆಯಿಂದ ನಾಗರೀಕ ಸಮಾಜವೇ ತಲೆತಾಗ್ಗಿಸುವಂತಾಗಿದೆ. ಇದನ್ನು ಮನುಷ್ಯರಾದ ಎಲ್ಲರೂ ಖಂಡಿಸಬೇಕಿದೆ. ತಪ್ಪು ಮಾಡಿದವರು ಯಾರೇ ಆಗಿದ್ದರೂ ತಕ್ಕ ಶಿಕ್ಷೆ ನೀಡಬೇಕು. ನೊಂದ ವಿವೇಕಾನಂದ ದೊಡಮನಿ ಕುಟುಂಬದ ಜತೆಗೆ ಪ್ರಜ್ಞಾವಂತ ಲಿಂಗಾಯತ ಸಮುದಾಯ ಇರುತ್ತದೆ. ಬಸವಣ್ಣ 12ನೇ ಶತಮಾನದಲ್ಲಿ ಅಂತರ್ಜಾತಿ ವಿವಾಹ ಮಾಡುವ ಮೂಲಕ ಜಾತಿರಹಿತವಾದ ನವಸಮಾಜವನ್ನು ಕಟ್ಟಿದ್ದರು. ಅಂತಹ ನೆಲದಲ್ಲಿ ನಡೆಯುತ್ತಿರುವ ಈ ರೀತಿಯ ಹೇಯ ಕೃತ್ಯಗಳಿಂದ ಮಾನವ ಕುಲವೇ ಭಯದ ವಾತಾವರಣದಲ್ಲಿ ಮುಳುಗಿದೆ ಎಂದು ವಿಷಾಧಿಸಿದರು.

ಅರುಣ ಮೂಡಿ ಮಾತನಾಡಿ, ನಮ್ಮ ಕರ್ನಾಟಕವು ಸಾಂಸ್ಕೃತಿಕವಾಗಿ, ವೈಚಾರಿಕವಾಗಿ, ಧಾರ್ಮಿಕವಾಗಿ ಹಲವಾರು ಮೌಲ್ಯಗಳನ್ನು ಒಳಗೊಂಡಿರುವ ರಾಜ್ಯವಾಗಿದೆ. ಇಲ್ಲಿ ಅನೇಕ ಶರಣರು, ಸಂತರು, ದಾಸರು, ಸಾಹಿತಿಗಳು, ಮಹನೀಯರು ಬಂದು ಹೋಗಿದ್ದಾರೆ. ಸಂವಿಧಾನ ಬಂದು ವರ್ಷಗಳು ಕಳೆದರೂ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿರುವುದು ದುಃಖಕರವಾದ ಸಂಗತಿ ಎಂದು ವಿಷಾಧ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಕ್ಯಾಲೆಂಡರ್‌ ಬದಲಾದರೂ ಬದಲಾಗಲೊಲ್ಲದ ಮನಸುಗಳು; ಸಮಾನತೆಯ ಪಾಠ ಕೊಟ್ಟ ನಾಡು ಮಾಡುತ್ತಿರುವುದೇನು?

ಅಭಿಷೇಕ ಮಾತನಾಡಿ, ಬುದ್ಧ, ಬಸವಣ್ಣ, ಅಂಬೇಡ್ಕರ ಹಾಕಿಕೊಟ್ಟ ಹಾದಿಯಲ್ಲಿ ನಮ್ಮ ಸಮಾಜವು ಸಾಗಬೇಕಿತ್ತು, ಅದರ ವಿರುದ್ಧ ಮುಖಮಾಡಿರುವುದನ್ನು ಗಮನಿಸಿದರೆ, ನಾಗರೀಕ ಸಮಾಜಕ್ಕೆ ಧಕ್ಕೆ ತಂದಂತಾಗಿದೆ. ಈ ರೀತಿಯ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿದರು. ಈ ಸಂದರ್ಭದಲ್ಲಿ ಭೀಮನಗೌಡ, ಗುರುರಾಜ್ ಅವರಾದಿ, ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...