ಧಾರವಾಡ | ಭೀಕರ ಕೊಲೆ: ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧನ

Date:

ಧಾರವಾಡ ಜಿಲ್ಲೆಯ ಹುಬ್ಬಳ್ಳಿಯ ಗೋಪನಕೊಪ್ಪದಲ್ಲಿ ಶುಕ್ರವಾರ ದಿನದಂದು ವ್ಯಕ್ತಿ ಓರ್ವನನ್ನು ಭೀಕರವಾಗಿ ಕೊಲೆ ಮಾಡಿದ್ದ 7ಜನರ ತಂಡದಲ್ಲಿನ ಇಬ್ಬರ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಆರೋಪಿ ಸುದೀಪ ರಾಯಾಪುರ, ಕಿರಣ ಜಟ್ಟಪ್ಪನವರ ಎಂಬವರನ್ನು ಪೊಲೀಸರು ಗುಂಡು ಹೊಡೆದಿದ್ದಾರೆ. ಈ ವೇಳೆ ಇಬ್ಬರು ಪಿಎಸ್‌ಐ ಸೇರಿದಂತೆ 6ಜನ ಪೊಲೀಸರು ಗಾಯಗೊಂಡಿದ್ದಾರೆ.

ಬಂಧಿತರು ಸೇರಿದಂತೆ 6-7 ಜನರ ತಂಡವು ಹಳೆ ದ್ವೇಷ ಹಾಗೂ ಹಣಕಾಸಿನ ವಿಚಾರವಾಗಿ ಗೋಪನಕೊಪ್ಪದ ಸಂತೋಷನಗರ ರಸ್ತೆಯಲ್ಲಿ ಶಿವರಾಜ ಕಮ್ಮಾರ (23) ಎಂಬಾತನ ಮೇಲೆ ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆಗೈದು ಪರಾರಿಯಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಗೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಇನ್ನುಳಿದವರ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಹಳೇಹುಬ್ಬಳ್ಳಿಯ ರೈಲ್ವೆ ಕ್ವಾರ್ಟರ್ಸ್‌ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಪಿಎಸ್‌ಐ ಸಾತನ್ನವರ ಸಿಬ್ಬಂದಿಗಳ ರಕ್ಷಣೆಗಾಗಿ ಗಾಳಿಯಲ್ಲಿ ಮೂರು ಸುತ್ತು ಹಾಗೂ ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಮೂರು ಸುತ್ತು ಗುಂಡು ಹೊಡೆದು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಅಜಿತ್ ಪವಾರ್ ಬಣದ ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿಗೆ ಗುಂಡಿಟ್ಟು ಹತ್ಯೆ

ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಶಿವರಾಜನ ಕುಟುಂಬಸ್ಥರು ಸುದೀಪ್ ರಾಯಾಪುರ, ಕಿರಣ ಜಟ್ಟಪ್ಪನವರ, ಕಾರ್ತಿಕ, ಅಭಿಷೇಕ ಜಾಧವ ಮೇಲೆ ದೂರು ಕೊಟ್ಟಿದ್ದಾರೆ. ಪೂರ್ವನಿಯೋಜಿತವಾಗಿ 6-7 ಜನರ ತಂಡವು ಲಾಂಗು, ಮಚ್ಚಿನಿಂದ ತಲೆಗೆ ಐದಾರು ಬಾರಿ ಹಾಗೂ ಮೂವತ್ತಕ್ಕೂ ಹೆಚ್ಚು ಸಲ ದೇಹದ ಎಲ್ಲೆಂದರಲ್ಲಿ 30ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆಗೈದಿದ್ದಾರೆ. ಹೆಚ್ಚಿನ ತನಿಖೆ ನಡೆಸಿ, ಆದಷ್ಟು ಬೇಗ ಎಲ್ಲರನ್ನೂ ಬಂಧಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...