ಧಾರವಾಡ | ಹುಬ್ಬಳ್ಳಿ ಮೂಲದ ವಿಶ್ವನಾಥ ಸಜ್ಜನರ್ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕ

Date:

ಹುಬ್ಬಳ್ಳಿ ಮೂಲದ 1996ನೇ ಬ್ಯಾಚ್‌ ಐಪಿಎಸ್‌ ಅಧಿಕಾರಿ ವಿ.ಸಿ. ಸಜ್ಜನರ್ ಅವರನ್ನು ಹೈದರಾಬಾದ್ ನಗರ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಅವರು ಆಂಧ್ರ ಪ್ರದೇಶ ಕ್ಯಾಡರ್‌ಗೆ ಸೇರಿದ್ದು, ಆ ರಾಜ್ಯ ವಿಭಜನೆಯ ನಂತರ ತೆಲಂಗಾಣ ಕ್ಯಾಡರ್‌ಗೆ ವರ್ಗಾವಣೆಯಾದರು.

ಸಜ್ಜನರ್ ಹುಬ್ಬಳ್ಳಿಯವರಾಗಿದ್ದು, ತಂದೆ ಸಿ.ಬಿ. ಸಜ್ಜನರ್, ತಾಯಿ ಗಿರಿಜಾ ಸಜ್ಜನರ್. ಅವರು ಹುಬ್ಬಳಿಯ ಜೆ.ಜಿ. ವಾಣಿಜ್ಯ ಮಹಾವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದರು. ನಂತರ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ನಿಂದ ಎಂಬಿಎ ಸ್ನಾತಕೋತ್ತರ ಪದವಿ ಪಡೆದರು. ಐಪಿಎಸ್ ಪರೀಕ್ಷೆ ತೇರ್ಗಡೆ ಹೊಂದಿದ ಬಳಿಕ, ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಮಸೂರಿ) ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ (ಹೈದರಾಬಾದ್)ಯಲ್ಲಿ ಪೊಲೀಸ್ ತರಬೇತಿ ಪಡೆದ ಬಳಿಕ ತಮ್ಮ ವೃತ್ತಿಜೀವನ ಆರಂಭಿಸಿದರು.

ಪೊಲೀಸ್ ಸೇವೆಯ ಆರಂಭದಲ್ಲಿ ಅವರು ಜನಗಾಂವ್ ವಾರಂಗಲ್ ಜಿಲ್ಲೆ ಮತ್ತು ಪುಲಿವೆಂದಲ, ಕಡಪ ಜಿಲ್ಲೆಗಳಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ಕಾರ್ಯ ನಿರ್ವಹಿಸಿದರು. ನಂತರ ನಲ್ಗೊಂಡ, ಕಡಪ, ಗುಂಟೂರು, ವಾರಂಗಲ್ ಮತ್ತು ಮೇದಕ್ ಜಿಲ್ಲೆಗಳ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ (ಎಸ್‌ಪಿ)ಯಾಗಿ, ಸಿಐಡಿ ಆರ್ಥಿಕ ಅಪರಾಧಗಳ ವಿಭಾಗ ವಿಭಾಗ ಹಾಗೂ ಆಕ್ಟೋಪಸ್‌ನ (ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಪಡೆ)ಗಳ ಎಸ್‌ಪಿ’ಯಾಗಿ ಕಾರ್ಯ ನಿರ್ವಹಿಸಿದರು. ಆಂಧ್ರಪ್ರದೇಶ ವಿಶೇಷ ಪೊಲೀಸ್ (APSP) ಮಂಗಳಗಿರಿಯ ಕಮಾಂಡಾಂಟ್‌ ಆಗಿಯೂ ಕೆಲಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಂತರ ಡಿಐಜಿ ಹಾಗೂ ಐಜಿ ಹುದ್ದೆಗಳಿಗೆ ಬಡ್ತಿ ಪಡೆದು ಮಾರ್ಚ್ 2018ರವರೆಗೆ ಗುಪ್ತಚರ ಇಲಾಖೆಯಲ್ಲಿ ಸೇವೆ ಸಲ್ಲಿಸಿದರು. ಮಾರ್ಚ್ 2018ರಿಂದ ಆಗಸ್ಟ್ 2021ರವರೆಗೆ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದರು. ಬಳಿಕ ಸೆಪ್ಟೆಂಬರ್ 2021ರಲ್ಲಿ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (TSRTC) ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು. ಇದೀಗ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಅವರು, ನಗರದ ಕಾನೂನು-ಸುವ್ಯವಸ್ಥೆ ಮತ್ತು ಪೊಲೀಸ್ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...