ಧಾರವಾಡ | ಸೆ. 15ಕ್ಕೆ ಪ್ರಜಾಪ್ರಭುತ್ವ ದಿನ; ಅಧಿಕಾರಿಗಳು ಪಾಲ್ಗೊಳ್ಳುವುದು ಕಡ್ಡಾಯ: ಸಂತೋಷ್ ಲಾಡ್

Date:

ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು ‘ಪ್ರಜಾಪ್ರಭುತ್ವ ದಿನ’ವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಎಲ್ಲರೂ ಸೇರಿ ಸಂಭ್ರಮಿಸಬೇಕಿದೆ. ಎಲ್ಲ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕಾರ್ಮಿಕ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿ ಮತ್ತು ವಿವಿಧ ಸರ್ಕಾರೇತರ ಸಂಘ, ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಸೂಚಿಸಿದರು.

ಬೀದರ್‌ ಜಿಲ್ಲೆಯಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಢತೆ, ಸಾಮರಸ್ಯ ಮತ್ತು ಜನಶಕ್ತಿ ಸಾರುವ ಸಂಕೇತವಾಗಿ ಮಾನವ ಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ 51 ಕಿ.ಮೀ ಮಾರ್ಗದಲ್ಲಿ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಶ್ರಮಿಸಿ, ಪಾಲ್ಗೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ವಿಶೇಷವಾಗಿ ಆಚರಿಸಲಾಗುತ್ತಿರುವ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು, ಕುಟುಂಬದವರು, ಸಾರ್ವಜನಿಕರು ಭಾಗವಹಿಸಬೇಕೆಂದು ಹೇಳಿದರು.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬಾಯಲ್ಲಿ ಮತ್ತೆ ದೇವರು, ಮತ್ತೆ ಸುದ್ದಿ, ಮತ್ತೆ ಮೌನ!

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪೋಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಹೆಚ್ಚುವರಿ ಪೋಲೀಸ್ ಅಧೀಕ್ಷಕ ನಾರಾಯಣ ಬರಮನಿ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...