ಧಾರವಾಡ | ಹಳ್ಳಿಗಳಲ್ಲಿ ಎಗ್ಗಿಲ್ಲದೆ ಸಾಗುತ್ತಿರುವ ಅಕ್ರಮ ಸಾರಾಯಿ ಮಾರಾಟ; ಕ್ರಮಕ್ಕೆ ಒತ್ತಾಯ

Date:

ಹಳ್ಳಿಗಳಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ, ಈ ಕೂಡಲೆ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯಿಸಿ, ಕರ್ನಾಟಕ ಮದ್ಯ ನಿಷೇದ ಆಂದೋಲನದ ಅಡಿಯಲ್ಲಿ ರೈತ, ದಲಿತ, ಕಾರ್ಮಿಕ ಸಂಘಟನೆಗಳು ಹಾಗೂ‌ ಮಹಿಳೆಯರ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಅಕ್ರಮ ಸಾರಾಯಿ‌ ಮಾರಾಟದ ಪರಿಣಾಮವಾಗಿ ಬಹುತೇಕ ಹಳ್ಳಿಗಳಲ್ಲಿ ಸಣ್ಣ ವಯೋಮಾನದ ಯುವಕರು ದುಶ್ಚಟಕ್ಕೆ ಬಲಿಯಾಗಿದ್ದಾರೆ. ಈ ಕುರಿತು ಸರ್ಕಾರವು ಸೂಕ್ತ ಕ್ರಮಕ್ಕೆ ಮುಂದಾಗಬೇಕು. ಅಕ್ರಮ ಸಾರಾಯಿ ಮಾರಾಟವನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಲಕ್ಷ್ಮಣ ಬಕ್ಕಾಯಿ ಮಾತನಾಡಿ, ಎಗ್ಗಿಲಗಲದೆ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ತಡೆಯಲು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಜಿಲ್ಲಾಧಿಕಾರಿಗಳು ಮುಂಬರುವ ಜಿಲ್ಲಾಸಭೆಯಲ್ಲಿ ಚರ್ಚೆಗೆ ಒಳಪಡಿಸಿ, ಗಂಭೀರವಾಗಿ ಪರಿಗಣಿಸಿ ಆಯಾ ತಾಲೂಕಾಧಿಕಾರಿಗಳಿಗೆ ಸೂಕ್ತ ಕ್ರಮ‌ಕೈಗೊಳ್ಳಲು ಒತ್ತಾಯಿಸಬೇಕು. ಒಂದುವೇಳೆ‌ ಮಾಡದೇ ಹೋದರೆ; ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದು. ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47 ರಂತೆ ದೇಶ ಮಧ್ಯ ನಿಷೇಧದತ್ತ ಸಾಗಬೇಕೆಂದು ಹೇಳಲಾಗಿದೆ. ಆದ್ದರಿಂದ ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಗ್ರಾಮೀಣ ಕೂಲಿಕಾರರ ಸಂಘಟನೆಯ ಜಿಲ್ಲಾ ಸಂಚಾಲಕಿ ನಿಂಗಮ್ಮ ಸವಣೂರ ಮಾತನಾಡಿ, ಈಗಾಗಲೇ ಹರಿಯಾಣ, ಮಹಾರಾಷ್ಟ್ರ ಹಾಗೂ ಇತರ ರಾಜ್ಯಗಳಲ್ಲಿ ಮಹಿಳಾ ಗ್ರಾಮ ಸಭೆಗಳಿಗೆ ಪರಮಾಧಿಕಾರ ಕೊಟ್ಟರುವ ನಿಟ್ಟಿನಲ್ಲಿ ಹಳ್ಳಿಗಳಲ್ಲಿ ಸಾರಾಯಿ ಮಾರಾಟ ಮಾಡುವ ಮೊದಲು ಗ್ರಾಮದ ಮಹಿಳೆಯರ ಗಮನಕ್ಕೆ ತರಬೇಕು. ಕಳೆದ ಹತ್ತು ವರ್ಷಗಳಿಂದ ಮದ್ಯ ನಿಷೇಧ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.‌ ಈಗಲೂ ಹಳ್ಳಿಗಳಲ್ಲಿ ಎಗ್ಗಿಲ್ಲದೆ ಸಾರಾಯಿ ಮಾರಾಟವಾಗುತ್ತಿದೆ. ಇದನ್ನು ಕೂಡಲೆ ತಡೆಯಬೇಕು. ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮತ್ತು ಪ್ರತಿ ಹಳ್ಳಿಯಲ್ಲೂ ಹಲವು ಕಡೆಗೆ ಸಾರಾಯಿ‌ ಮಾರುತ್ತಾರೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಹಿಳೆಯರು, ರೈತರು, ಸಂಘಟಕರು, ಹೋರಾಟಗಾರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...