ಧಾರವಾಡ | ವೈವಿದ್ಯತೆಯಲ್ಲಿ ಏಕತೆ’ಗೆ ಭಾರತವು ಉತ್ತಮ‌ ಉದಾಹರಣೆ: ಇಸ್ಮಾಯಿಲ್ ತಮಾಟಗರ್

Date:

ಭಾರತವು ‘ವೈವಿಧ್ಯತೆಯಲ್ಲಿ ಏಕತೆ’ಗೆ ನಮ್ಮ ದೇಶ ಉತ್ತಮ ಉದಾಹರಣೆಯಾಗಿದೆ ಎಂದು ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಇಸ್ಮಾಯಿಲ್ ತಮಾಟಗರ್ ಹೇಳಿದರು.

ನಗರದ ಅಂಜುಮನ್ ಕಾಲೇಜಿನಲ್ಲಿ ಜ. 26ರಂದು 76ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ, ಧ್ವಜಾರೋಹಣವನ್ನು ನೆರವೆರಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನವು ಹಲವು ಹಕ್ಕು ಮತ್ತು ಜವಾಬ್ದಾರಿಗಳನ್ನು ನೀಡಿದೆ. ಜನರು ತಮ್ಮ ಮೂಲಭೂತ ಹಕ್ಕುಗಳನ್ನು ಆನಂದಿಸುವ ಪ್ರಜಾಪ್ರಭುತ್ವ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ. ಸಮಾಜದಲ್ಲಿ ವಿಭಿನ್ನ ಜಾತಿ, ಧರ್ಮ ಅಥವಾ ಇತರ ಅನೇಕ ವಿಷಯಗಳು ನಮ್ಮನ್ನು ಪ್ರತ್ಯೇಕಿಸುತ್ತವೆ ಆದರೆ ವಿಶಾಲವಾದ ಚಿತ್ರಣದಲ್ಲಿ ನಾವೆಲ್ಲರೂ ಭಾರತೀಯರು.‌ ಎಲ್ಲರೂ ಒಂದಾಗಿ ಬದುಕೋಣ ಎಂದರು.

ಪ್ರಾಥಮಿಕ ಶಾಲಾ ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ನಾನಾ ಮಹಾನ್ ಪುರುಷರ, ಸಂತರ, ವೀರ ಮಹಿಳೆಯರ, ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಧರಿಸಿ ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ‌ ಭಾರತದ ಇತಿಹಾಸವನ್ನು ಮೆಲುಕು ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಅಂಜುಮನ್ ಸಂಸ್ಥೆಯ ಸದಸ್ಯರು, ಬೋಧಕ/ ಬೋಧಕೇತರ ಸಿಬ್ಬಂದಿಗಳು. ಪಾಲಕರು, ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಪ್ರಾಚಾರ್ಯ ಡಾ. ಐ ಎ ಮುಲ್ಲಾ, ಎನ್ ಬಿ ನಾಲತವಾಡ, ಪತ್ರಿಕೊದ್ಯಮ ವಿಭಾಗದ ಡಾ. ಎಸ್.ಎಸ್. ಅದೋನಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...