ಧಾರವಾಡ | ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ವಾಸ್ತವ: ಎಸ್ ಆರ್ ಗುಂಜಾಳ

Date:

ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ಭ್ರಮೆಯಲ್ಲ, ವಾಸ್ತವ ಸಂಗತಿಯಾಗಿದೆ. ರಾಜ್ಯಾದ್ಯಂತ ಆಂಗ್ಲ ಮಾಧ್ಯಮ ಶಾಲೆಗಳು ನಾಯಿಕೊಡೆಗಳಂತೆ ಬೆಳೆಯುತ್ತಿವೆ ಎಂದು ಸಾಹಿತಿ ಡಾ. ಎಸ್.ಆ‌ರ್. ಗುಂಜಾಳ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ವಿದ್ಯಾವರ್ಧಕ ಸಂಘ ಸಭಾಭವನದಲ್ಲಿ ಜರುಗಿದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಮಾಧ್ಯಮ ಶಾಲೆಗೆ ಪರವಾನಿಗೆ ಪಡೆದು ಮಕ್ಕಳಿಗೆ ಆಂಗ್ಲದಲ್ಲಿ ಬೋಧನೆ ಮಾಡುತ್ತಿರುವ ಶಾಲೆಗಳ ಪೈಕಿ 1,416 ಶಾಲೆಗಳ ಆಡಳಿತ ಮಂಡಳಿಗಳ ಮೇಲೆ ಸರ್ಕಾರವು ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಕನ್ನಡ ಮಾಧ್ಯಮ ಶಾಲೆಗೆ ಪರವಾನಿಗೆ ಪಡೆದು ಮಕ್ಕಳಿಗೆ ಆಂಗ್ಲದಲ್ಲಿ ಬೋಧನೆ ಮಾಡುತ್ತಿದ್ದು, ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ಅಪಾಯವಿರುವುದು ವಾಸ್ತವ ಸಂಗತಿಯಾಗಿದೆ.

ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ಹಣ ಸಂಪಾದಿಸಲು ಹೊರಟಿರುವುದು ನಾಗರಿಕ ಸಮಾಜದ ನಡುವಿನ ಹಗಲು ದರೋಡೆ. 4ನೇ ತರಗತಿವರೆಗೆ ಕನ್ನಡ ಅಥವಾ ಮಾತೃಭಾಷೆ ಮೂಲಕ ಕಲಿಯುವುದರಿಂದ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ತಳಹದಿ ಗಟ್ಟಿಯಾಗುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...