ಧಾರವಾಡ | ಕವಿವ ಸಂಘವು ವರ್ಷವಿಡೀ ರಾಜ್ಯೋತ್ಸವ ಆಚರಿಸುತ್ತಿರುವುದು ಅಭಿನಂದನೀಯ: ಕೆ.ಎಚ್. ನಾಯಕ

Date:

ಕರ್ನಾಟಕ ವಿದ್ಯಾವರ್ಧಕ ಸಂಘವು ಕನ್ನಡದ ಕೆಲಸವನ್ನು ಬರಿ ರಾಜ್ಯೋತ್ಸವ ತಿಂಗಳಿಗೆ ಮಾತ್ರ ಸೀಮಿತವಾಗಿ ಆಚರಿಸದೆ, ಇಡೀ ವರ್ಷ ಕನ್ನಡದ ಒಂದಿಲ್ಲೊಂದು ಕಾರ್ಯಕ್ರಮ ಆಯೋಜಿಸುತ್ತಿರುವುದು ಅಭಿನಂದನೀಯ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು ರಾಜ್ಯೋತ್ಸವದ ತಿಂಗಳ ಕಾರ್ಯಕ್ರಮದಲ್ಲಿ ‘ಗಿರಿಜಾ ಕಲ್ಯಾಣ’ (ದೊಡ್ಡಾಟ) ಕಾರ್ಯಕ್ರಮಕ್ಕೆ ಚಾಲನೆ ನೀಡಿದ ರಾಷ್ಟ್ರ ಪ್ರಶಸ್ತಿ ವಿಜೇತ, ನಿವೃತ್ತ ಶಿಕ್ಷಕ ಕೆ.ಎಚ್. ನಾಯಕ ಮಾತನಾಡಿದರು.

ಕವಿವ ಸಂಘದಲ್ಲಿ ಆಯೋಜಿಸಿದ್ದ ಧರೆಗೆ ದೊಡ್ಡವರು ಎಂಬ ಕಾರ್ಯಕ್ರಮ ಅತ್ಯಂತ ಮನೋಜ್ಞವಾದದ್ದು. ಸನ್ಮಾನಿತರಾದ ಧರೆಗೆ ದೊಡ್ಡವರಿಗೆಲ್ಲ ಕರ್ನಾಟಕ ವಿದ್ಯಾವರ್ಧಕ ಸಂಘ ಸಾಧನೆ ಮಾಡಲು ಪ್ರಧಾನ ವೇದಿಕೆಯಾಗಿದ್ದರಿಂದ, ಅವರೆಲ್ಲ ಸಾಧನೆ ಮಾಡಿ ಧರೆಗೆ ದೊಡ್ಡವರಾದದ್ದು ಹೆಮ್ಮೆಯ ಸಂಗತಿ. ಕವಿವ ಸಂಘದ ಕಾರ್ಯಕ್ರಮಗಳ ವಿಸ್ತ್ರತ ಕಾರ್ಯಕ್ರಮಗಳಿಗೆ ಜಾಗೆಯ ಅಭಾವವಿದ್ದು, ಸರ್ಕಾರ ತನ್ನ ಉದಾರತೆ ತೋರಿ ಕವಿವ ಸಂಘಕ್ಕೆ ೫ ಎಕರೆ ನಿವೇಶನ ನೀಡಬೇಕು. ಅಂತಹ ನಿವೇಶನದಲ್ಲಿ ಕರ್ನಾಟಕದ ಗತವೈಭವ ಸಾರುವ ಸನ್ನಿವೇಶ ಸೃಷ್ಟಿ ಮಾಡಬಹುದು. ಕಲಾಭವನದಲ್ಲಿ ಯಾವುದೇ ಕಾರ್ಯಕ್ರಮಗಳು ಇಂದು ನಡೆಯದೆ ಇದ್ದುದರಿಂದ, ಅದರ ಮೇಲ್ವಿಚಾರಣೆ ಹಾಗೂ ಉಸ್ತುವಾರಿಯನ್ನು ಕವಿವ ಸಂಘಕ್ಕೆ ನೀಡಿದರೆ, ಸಂಘ ಪ್ರಾಮಾಣಿಕವಾಗಿ ಅಲ್ಲಿ ಕಾರ್ಯಕ್ರಮ ಜರಗುವಂತೆ ಮಾಡಬಹುದೆಂಬ ವಿಶ್ವಾಸ ನನ್ನಲ್ಲಿದೆ ಎಂದರು.

ಇದನ್ನೂ ಓದಿ ಧಾರವಾಡ | ಹಲವು ವರ್ಷಗಳಿಂದ ಮುಚ್ಚಿದ್ದ ಗೋದಾಮಿನಲ್ಲಿ ಕೊನೆಗೂ ಸೋಯಾಬೀನ್ ಖರೀದಿ ಕೇಂದ್ರ ಉದ್ಘಾಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗ ಕಲಾವಿದರಾದ ರಾಜು ಗಡ್ಡಿ ಹಾಗೂ ಜೀವನ ಲಂಗೋಟಿ ಅವರನ್ನು ಸಂಘದ ಪರವಾಗಿ ಸನ್ಮಾನಿಸಿ, ಗೌರವಿಸಿದರು. ಇಬ್ಬರೂ ಕಲಾವಿದರು ಸನ್ಮಾನ ಸ್ವೀಕರಿಸಿ ಮಾತನಾಡಿ, ಕವಿವ ಸಂಘವು ನಮ್ಮ ರಂಗಕಲಾ ಸೇವೆ ಗುರುತಿಸಿ ಸನ್ಮಾನಿಸಿ ಗೌರವಿಸುತ್ತಿರುವುದು ನಮ್ಮ ಭಾಗ್ಯ ಎಂದರು. ಶಂಕರ ಕುಂಬಿ ಸ್ವಾಗತಿಸಿದರು. ಶಂಕರ ಹಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ ಮಹೇಶ ಧ. ಹೊರಕೇರಿ ನಿರೂಪಿಸಿ, ವಂದಿಸಿದರು. ಕೊನೆಯಲ್ಲಿ ಡಾ ಬಸವರಾಜ ಮಲಶೆಟ್ಟಿ ರಚನೆಯ, ಬಸವರಾಜ ಶಿಗ್ಗಾಂವ ನಿರ್ದೇಶನದ, ಸಹನಾ ನಾಗೇಂದ್ರ ಬನ್ನಿ ಗಿಡದ ತಂಡದಿಂದ ಗಿರಿಜಾ ಕಲ್ಯಾಣ ದೊಡ್ಡಾಟ ಪ್ರದರ್ಶನಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...