ಧಾರವಾಡ | ಉದ್ಯೋಗಾಕಾಂಕ್ಷಿಗಳ ಪ್ರತಿಭಟನಾ ಧರಣಿ; ಹಲವು ನಾಯಕರ ಬಂಧನ

Date:

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಇಂದು (ಡಿ.10) ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನಾ ಧರಣಿಗೆ ಮುಂದಾಗಿದ್ದ ಪ್ರತಿಭಟನೆಕಾರರನ್ನು ಪೊಲೀಸರು ಬಂಧಿಸಿದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಇದೊಂದು ಧಮನಕಾರಿ ನೀತಿಯಾಗಿದ್ದು, ಹೋರಾಟಗಳನ್ನು ಹತ್ತಿಕ್ಕುವ ಸರ್ಕಾರದ ನಡೆಗೆ ಧಿಕ್ಕಾರವಿರಲಿ ಎಂದು ಘೋಷಣೆ ಕೂಗಿದರು.

ಪ್ರತಿಭಟನೆ ನಡೆಯಬೇಕಿದ್ದ ನಗರದ ಪ್ರಮುಖ ಬೀದಿಗಳಲ್ಲಿ ಬ್ಯಾರಿಕೇಟ್ ಹಾಕಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಎನ್.ಟಿ.ಟಿ.ಎಫ್ ಹತ್ತಿರವಿರುವ ಕಚೇರಿಯಿಂದ ಸಂಘಟಕರು ಹೊರ ಬರುತ್ತಿದ್ದಂತೆ ಪೊಲೀಸರು ಬಂಧಿಸಿ, ಕೆಲವರನ್ನು ಧಾರವಾಡದಲ್ಲಿ, ಇನ್ನುಳಿದವರನ್ನು ಹುಬ್ಬಳ್ಳಿಯಲ್ಲಿ ಒಟ್ಟು 15 ಜನರನ್ನು ಗೃಹಬಂಧನದಲ್ಲಿ ಇರಿಸಿದ್ದರು. ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ, ಎಐಡಿವೈಓ ಯುವಜನ ಸಂಘಟನೆ, ಜನಾಂದೋಲನ ಮಹಾಮೈತ್ರಿ, ರೈತ ಸಂಘಟನೆ ಸೇರಿದಂತೆ ಹಲವು ಜನಪರ ಸಂಘಟನೆಗಳು, ಸಾಹಿತಿಗಳು ಈ ಧರಣಿಗೆ ಬೆಂಬಲ ಸೂಚಿಸಿದ್ದರು.

ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ರೈತ ಸಂಘಟನೆಯ ಸಿದ್ದಪ್ಪ ಮೋದಗಿ, ಶರಣು ಗೋನಾವರ, ಮಧುಲತಾ, ಭವಾನಿಶಂಕರ್ ಗೌಡ, ರೈತರು, ಇನ್ನಿತರರು ಬಂಧನಕ್ಕೆ ಒಳಗಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಧಾರವಾಡ | ಪಾದಚಾರಿಗೆ ಬೈಕ್ ಡಿಕ್ಕಿ; ಆಂಬ್ಯುಲೆನ್ಸ್‌ಗಾಗಿ ಗಾಯಾಳು ಪರದಾಟ

ಈ ಕುರಿತು ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ಯುವಜನರ ನ್ಯಾಯಯುತ ಹೋರಾಟ ಹಾಗೂ ಪ್ರಜಾತಾಂತ್ರಿಕ ಹಕ್ಕಿನ ಮೇಲೆ ದಾಳಿ ಮಾಡಿರುವ ಪೊಲೀಸರು ಮತ್ತು ಸರ್ಕಾರದ ಧಮನಕಾರಿ ನಡೆಯನ್ನು  ತೀವ್ರವಾಗಿ ಖಂಡಿಸುತ್ತೇವೆ. ಪೊಲೀಸರು ಕೇಳಿದ ಮಾಹಿತಿಯನ್ನು ಹಲವು ಬಾರಿ ನೀಡಿದ್ದಾಗಿಯೂ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಮತ್ತು ಇದೀಗ ಯುವಜನರ ನ್ಯಾಯಯುತ ಹೋರಾಟವನ್ನು ಬೆಂಬಲಿಸಲು ಬಂದ ನಾಯಕರುಗಳನ್ನು ಬಂಧಿಸಿದ್ದಾರೆ. ಧಾರವಾಡ ಸೇರಿದಂತೆ ರಾಜ್ಯದ ವಿದ್ಯಾರ್ಥಿ- ಯುವಜನರು, ಹಾಗೂ ಪ್ರಜ್ಞಾವಂತ ಜನ ಸಮೂಹವು ಒಂದಾಗಿ ಸರ್ಕಾರದ ಈ ನಿರಂಕುಶ ಧೋರಣೆಯ ವಿರುದ್ಧ ಧ್ವನಿಯೆತ್ತಬೇಕು ಮತ್ತು ಹೋರಾಡುವ ಪ್ರಜಾತಾಂತ್ರಿಕ ಹಕ್ಕಿನ ರಕ್ಷಣೆಗಾಗಿ ಹೋರಾಡಬೇಕು ಎಂದು ಕರೆನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...