ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲೂ ವ್ಯಾಪಕ ಪರಿಣಾಮ ಬೀರಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಫೆ.20ರ ಬೆಳಗ್ಗೆ ಕಲಘಟಗಿ ಪಟ್ಟಣ ಪಂಚಾಯತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕ್ಷೇತ್ರ ಪ್ರಚಾರದ ಎಲ್‍ಇಡಿ ವಾಹನಕ್ಕೆ ಚಾಲನೆ ನೀಡಿ, ಮಾತನಾಡಿ, ಕ್ಷೇತ್ರ ಪ್ರಚಾರ ವಾಹನವು ಧಾರವಾಡ ಜಿಲ್ಲೆಯಾದ್ಯಂತ ಒಟ್ಟು 20 ಹಳ್ಳಿಗಳಲ್ಲಿ ಸಂಚರಿಸಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿಯೂ ಯೋಜನೆಗಳ ಲಾಭಗಳ ಕುರಿತು ವಿವರಿಸಲಾಗುತ್ತದೆ. ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ತಲುಪಬೇಕು. ಕ್ಷೇತ್ರ ಪ್ರಚಾರ ವಾಹನದ ಮೂಲಕ ಮನೆಮನೆಗೆ ತೆರಳಿ ಎಲ್ಲ ಜನರಿಗೂ ಮನಮುಟ್ಟುವಂತೆ ಪ್ರಚಾರವನ್ನು ಮಾಡಬೇಕು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಗತಿ:
ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಗೆ 727.78 ಕೋಟಿ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆಗೆ 3,81,493 ಜನ ಫಲಾನುಭವಿಗಳಿದ್ದು, ರೂ. 1,740 ಕೋಟಿ ಹಣ ಜಮೆಯಾಗಿರುತ್ತದೆ. ಗೃಹಜ್ಯೋತಿ ಯೋಜನೆಗೆ ರೂ. 639 ಕೋಟಿ ಅನುದಾನ ನೀಡಲಾಗಿದ್ದು, 5,16,948 ಫಲಾನುಭವಿಗಳು ಲಾಭ ಪಡೆದಿದ್ದಾರೆ. ಅನ್ನಭಾಗ್ಯ ಯೋಜನೆಗೆ ರೂ.358.29 ಕೋಟಿ ವೆಚ್ಚವಾಗಿದ್ದು, 3,62,516 ಫಲಾನುಭವಿಗಳು ಪ್ರಯೋಜನ ಪಡೆದಿದ್ದಾರೆ. ಯುವನಿಧಿ ಯೋಜನೆ ಅಡಿಯಲ್ಲಿ 7,920 ಫಲಾನುಭವಿಗಳಿಗೆ ರೂ.19.95 ಕೋಟಿ ಹಣ ಡಿಬಿಟಿ ಮೂಲಕ ಹಣ ಜಮೆಯಾಗಿದೆ. ಒಟ್ಟು ರೂ. 3485.02 ಕೋಟಿ ಮೊತ್ತವನ್ನು ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯಲ್ಲಿ ವೆಚ್ಚ ಮಾಡಲಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿ ಹಾಡುಗಳಿಗೆ ತಾಳ ಹಾಕಿ, ಹಾಡು ಹಾಡಿದ ಸಚಿವ ಸಂತೋಷ ಲಾಡ್: ಕಾರ್ಯಕ್ರಮದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರಕ್ಕಾಗಿ ರೂಪುಗೊಂಡ ಕಲಾತಂಡಗಳೊಂದಿಗೆ ಸಚಿವರು ಸ್ವತಃ ಸಂಗೀತ ಹಾಡಿ, ತಾಳ ಬಾರಿಸಿ ಕಲಾವಿದರನ್ನು ಪೆÇ್ರೀತ್ಸಾಹಿಸಿದರು. ಅವರ ಈ ಸರಳ ಹಾಗೂ ಸ್ನೇಹಪೂರ್ಣ ನಡೆ ಜನಮನ ಗೆದ್ದಿತು. ಕಲೆಯ ಮೂಲಕ ಯೋಜನೆಗಳ ಸಂದೇಶವನ್ನು ಜನರಿಗೆ ತಲುಪಿಸುವ ಪ್ರಯತ್ನ ಗಮನಸೆಳೆಯಿತು. ಈ ಸಂದರ್ಭ ಸಚಿವರು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಕಲಾವಿದರ ಪ್ರತಿಭೆಯನ್ನು ಮೆಚ್ಚಿದರು. ಈ ಮೂಲಕ ಸಾರ್ವಜನಿಕರಲ್ಲಿ ಉತ್ಸಾಹ ಮೂಡಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಅರಿವು ಹಾಗೂ ಭಾಗವಹಿಸುವ ಮನೋಭಾವವನ್ನು ಹೆಚ್ಚಿಸಿದರು.

ಕ್ಷೇತ್ರ ಪ್ರಚಾರ ವಾಹನದೊಂದಿಗೆ ಕುಂದಗೋಳ ತಾಲೂಕಿನ ಹರ್ಲಾಪೂರ ಗ್ರಾಮದ ಸ್ವಾಮಿ ವಿವೇಕಾನಂದ ಜಾನಪದ ಕಲಾತಂಡದ ನಾಯಕ ದಾವಲಸಾಬ ದೊಡ್ಡಮನಿ ಅವರ ನೇತೃತ್ವದಲ್ಲಿ ಪ್ರಕಾಶ ಮಡಿವಾಳರ, ರಮೇಶ ಸಜ್ಜಗಾರ, ಗೂಳಪ್ಪ ದುರ್ಗಣ್ಣವರ, ನೌಶಾದ ಬೆಂತೂರ ಅವರು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಕುರಿತು ಜನಪದ ಹಾಡುಗಳು ಹಾಗೂ ಬೀದಿ ನಾಟಕಗಳ ಮುಖಾಂತರ ಜನರಲ್ಲಿ ಜಾಗೃತಿ ಕಾರ್ಯಕ್ರಮವನ್ನು ನೀಡಿದರು.

ಕಲಾಜಾಥಾ ಕ್ಷೇತ್ರ ಪ್ರಚಾರ ವಾಹನ ವೇಳಾ ಪಟ್ಟಿ:
ಈ ಕ್ಷೇತ್ರ ಪ್ರಚಾರ ವಾಹನವು ಫೆಬ್ರವರಿ 20 ರಂದು ನವಲಗುಂದ ತಾಲೂಕಿನ ಶಿರೂರ, ಆಯಟ್ಟಿ, ಗೊಮ್ಮಗೋಳ, ಬ್ಯಾಲ್ಯಾಳ ಗ್ರಾಮ ಫೆಬ್ರವರಿ 21 ರಂದು ಮೊರಬ, ತಲೆಮೊರಬ, ಹಣಸಿ, ಶಿರಕೋಳ  ಗ್ರಾಮ ಫೆಬ್ರವರಿ 22 ರಂದು ಜಾವೂರ, ಬಳ್ಳೂರ, ಹಾಳ ಕುಸಗಲ್, ತಿರ್ಲಾಪೂರ ಗ್ರಾಮ ಫೆಬ್ರವರಿ 23 ರಂದು ಹುಬ್ಬಳ್ಳಿ ತಾಲೂಕಿನ ಸುಳ್ಳ, ಬ್ಯಾಹಟ್ಟಿ, ಹೆಬಸೂರ, ಕಿರೇಸೂರ ಹಾಗೂ ಫೆಬ್ರವರಿ 24 ರಂದು ಶಿರಗುಪ್ಪಿ ಬಂಡಿವಾಡ, ಮಂಟೂರ, ನಾಗರಳ್ಳಿ ಗ್ರಾಮ ಸೇರಿ ಒಟ್ಟು 20 ಗ್ರಾಮಗಳಿಗೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಾಗೂ ಸರ್ಕಾರವು ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳ ಕುರಿತಂತೆ ಕಲಾಜಾಥಾ ಹಾಗೂ ಬೀದಿ ನಾಟಕ ಪ್ರದರ್ಶಿಸುವರು.

ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಶಾನಪ್ಪಗೌಡ ಪಾಟೀಲ ಮಾತನಾಡಿದರು. ವಾರ್ತಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ ಹಿರೇಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಾರ್ತಾ ಇಲಾಖೆಯ ಮನೋಜ ಮಸನಿ ವಂದಿಸಿದರು.

ಇದನ್ನೂ ಓದಿ ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಕಲಘಟಗಿ ತಹಶೀಲ್ದಾರ ಬಸವರಾಜ ಹೊಂಕಣನವರ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಪಿ.ವಾಯ್.ಸಾವಂತ, ಕಲಘಟಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಂದ್ರಶೇಖರ ಬಿ., ಸಿಪಿಐ ಶ್ರೀಶೈಲ ಕೌಜಲಗಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...