ಕನ್ನಡ ಹರಿದಾಸ ಪರಂಪರೆಯಲ್ಲಿ ಕನಕದಾಸರ ಹೆಸರು ಬಹುವಿಶಿಷ್ಟವಾಗಿದ್ದು, ಕನಕದಾಸರ ಸಾಹಿತ್ಯವು ಆಧ್ಯಾತ್ಮ, ವೈಚಾರಿಕ, ಸಾಮಾಜಿಕ ಕಳಕಳಿಯನ್ನು ಹೊಂದಿದೆ. ಕನಕದಾಸರು ಯಾವುದೇ ಜಾತಿ, ಮತ, ಧರ್ಮಕ್ಕೆ ಸೀಮಿತವಾದವರಲ್ಲ. ಅವರು ಜನ ಕಲ್ಯಾಣವನ್ನು ಬಯಸಿದ ಮಹಾತ್ಮರು ಎಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಹೇಳಿದರು.
ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಕಾರ್ಯಕ್ರಮ ಏರ್ಪಡಿಸಿದ್ದರು.
ಇದನ್ನೂ ಓದಿ ಧಾರವಾಡ | ಉಪಯೋಗಕ್ಕೆ ಬಾರದೇ ಮುಚ್ಚಿದ ಕಲಾಭವನ; ಕೂಡಲೇ ಬಾಗಿಲು ತೆರೆಯಲು ಒತ್ತಾಯ
ಈ ವೇಳೆ ಸುಜಯ್ ಸುರೇಶ್ ಹೊರಕೇರಿ, ಸೋಹನ್ ಸುರೇಶ ಹೊರಕೇರಿ, ಪ್ರೊ ಜಯಾನಂದ ಹಟ್ಟಿ, ಮಾರುತಿ ತಲಗೇರಿ, ರಾಜೇಶ್ವರಿ ಸಾಲಗಟ್ಟಿ, ರವಿಕುಮಾರ್ ಮಾಳಿಗೇರ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿಯ ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡಶೆಟ್ಟರ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಪ್ರೊ ಬಿರಾದಾರ, ಪ್ರೊ. ಪಾಟೀಲ ಇದ್ದರು.





