ಧಾರವಾಡ | ಸಚಿವ ಸಂತೋಷ್ ಲಾಡ್ ಪುತ್ರ ಕರಣ್‌ ಲಾಡ್‌ ಬರೆದ ಕೃತಿಯ ಕನ್ನಡಾನುವಾದ ಬಿಡುಗಡೆ

Date:

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರ ಪುತ್ರ ಕರಣ್‌ ಲಾಡ್‌ ರಚನೆಯ “ಪ್ರತ್ಯನುಕರಣೆಯ ನ್ಯೂನತೆಗಳು” (A Glitch in The Simulation) ಕನ್ನಡಾನುವಾದ ಕೃತಿಯ ಬಿಡುಗಡೆ ಸಮಾರಂಭ ಕಾರ್ಯಕ್ರಮ ರ್ನಾಟಕ ಮಹಾವಿದ್ಯಾಲಯದ ಸೃಜನಾ ರಂಗಮಂದಿರದಲ್ಲಿ, ಸಂತೋಷ್‌ ಲಾಡ್‌ ಫೌಂಡೇಶನ್‌ ಮತ್ತು ಧಾರವಾಡ ಶರ್ವಿಲ್‌ ಪ್ರಕಾಶನ ವತಿಯಿಂದ ಆಯೋಜಿಸಲಾಗಿತ್ತು.

ಕೃತಿಯನ್ನು ಪರಿಚಯಿಸಿದ ತತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಎಂ ಪಿ ರಮೇಶ್ ಮಾತನಾಡಿ, ಈ ಕೃತಿ ಏಳು ಅಧ್ಯಾಯಗಳನ್ನು ಒಳಗೊಂಡಿದ್ದು ಗೌತಮ ಬುದ್ಧನ ಬಗ್ಗೆ ಹೆಚ್ಚಿನ ವಿವರಗಳಿವೆ. ನಿರಾಕರಣ ವಾದವೂ ಇದರಲ್ಲಿದೆ. ನೈತಿಕತೆ, ತತ್ವಶಾಸ್ತ್ರದ ಐದೂ ಮುಖವನ್ನು, ಗಹನವಾದ ವಿಷಯಗಳನ್ನು ವಿವರಿಸಿ, ಚರ್ಚಿಸಿದ್ದಾರೆ. ಮಾನವೀಯ ಸಮಸ್ಯೆಗಳಿಗೆ ಪರಿಹಾರವನ್ನೂ, ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ನಿಲುವುಗಳು ಎಲ್ಲವನ್ನೂ ನೀಡಿದ್ದಾರೆ ಎಂದರು.

ಪುಸ್ತಕ ಬಿಡುಗಡೆ ಮಾಡಿದ ಡಾ. ಎಂ ಎಂ ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಮಾತನಾಡಿ, ಇದೊಂದು ಅಚ್ಚರಿಯ ಅಭಿವ್ಯಕ್ತಿಯ ಕೃತಿ. ಸಾಮಾನ್ಯವಾಗಿ ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗುತ್ತಾರೆ. ಆದರೆ ಕರಣ್‌ ತತ್ವಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಇದೊಂದು ಗಮನಾರ್ಹವಾದ ವಿಚಾರ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಲೂರು ನಿಷ್ಕಲ ಮಂಟಪದ ತೋಂಟದ ನಿಜಗುಣಪ್ರಭು ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಚಿತ್ತ ಸಮತೆ ಇರಬೇಕು. ಜನರಿಂದು ಭ್ರಮಾಲೋಕದಲ್ಲಿದ್ದಾರೆ. ತಾನು ಏನು ಎಂದು ಪ್ರಶ್ನಿಸಿಕೊಳ್ಳಬೇಕು. ಬಹಳಷ್ಟು ಜನರ ಅನುಕರಣೆಯಲ್ಲಿದ್ದಾರೆ. ಕಾಣುವ ಮನುಷ್ಯನನ್ನು ಪ್ರೀತಿ ಮಾಡದೆ ಕಾಣದ ದೇವರನ್ನು ಪ್ರೀತಿಸಲು ಸಾಧ್ಯವಿಲ್ಲ. ಇಂತಹ ಹಲವು ಅಂಶಗಳನ್ನು ಈ ಕೃತಿ ವಿವರಿಸಿದೆ ಎಂದರು.

ಇದನ್ನು ಓದಿದ್ದೀರಾ? ಧಾರವಾಡ | ಸರ್ಕಾರ ಕಿಟೆಲ್ ಅಧ್ಯಯನ ಪೀಠ ಸ್ಥಾಪಿಸಲಿ : ಎಸ್.ವಿ.ಸಂಕನೂರ

ಈ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಆರ್‌ಜೆ, ಐ.ಜಿ.ಸನದಿ, ವಿನಾಯಕ ನಾಯಕ, ಎಂ.ಬಿ. ಕರಡೋಣಿ, ಸಮೀರ ಜೋಶಿ. ಅನುವಾದಕರಾದ ಡಾ. ವಿನಾಯಕ ನಾಯಕ ಮತ್ತು ಡಾ. ಲೋಹಿತ ನಾಯ್ಕರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...