ಧಾರವಾಡ | ಮನೆಯಂತೆ ಶಾಲೆಯನ್ನೂ ಸ್ವಚ್ಛವಾಗಿಡಿ; ರೋಟರಿ ಗವರ್ನರ್‌ ಶರದ್‌ ಪೈ

Date:

ನಾವು ಚಿಕ್ಕವರಿದ್ದಾಗ ಶಾಲೆಗಳು ದೇವಸ್ಥಾನಗಳ ಪರಾಂಗಣ, ನೈಸರ್ಗಿಕ ವಾತಾವರಣ ಇರುವ ಗಿಡದ ಕೆಳಗೆ ಕುಳಿತು ಕಲಿಯಬೇಕಾದ ಪರಿಸ್ಥಿತಿ ಇತ್ತು. ಈಗ ಸರ್ಕಾರ ನಿಮಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದು ಅದರ ಸದುಪಯೋಗ ಮಾಡಿಕೊಳ್ಳಬೇಕು. ಮಾನವೀಯ ಗುಣ, ಸಮಯ ಪಾಲನೆ, ಶಿಸ್ತು ಹಾಗೂ ವಿದ್ಯಾರ್ಜನೆ ನೀಡಿದ ಗುರುಗಳಿಗೆ ಗೌರವ ನೀಡಿ ಯಶಸ್ವಿಯಾಗಿರಿ, ಮನೆಯಂತೆ ಶಾಲೆ ಸ್ವಚ್ಛವಾಗಿಡಿ ಎಂದು ರೋಟರಿ ಗವರ್ನರ್‌ ಶರದ್‌ ಪೈ ಹೇಳಿದರು.

ಅವರು ಧಾರವಾಡದ ಪೊಲೀಸ ಹೆಡ್ ಕ್ವಾಟ್ರಸ್‌ನಲ್ಲಿರುವ ಶಾಸಕರ ಸರ್ಕಾರಿ ಮಾದರಿ ಕೇಂದ್ರ ಪ್ರಾಥಮಿಕ ಶಾಲೆ ಪಿ.ಎಚ್. ಕ್ಯೂ ಶಾಲೆಗೆ, ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ಆರ್. ಐ ವತಿಯಿಂದ ನೀಡಿದ ಒಂದು ಲಕ್ಷ ಹದಿನಾರು ಸಾವಿರ ರೂ. ಗಳ ಹಣದಲ್ಲಿ ಶಾಲೆಗೆ ಬಣ್ಣ ಹಚ್ಚುವ ಕೆಲಸ ಮಾಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಟರಿ ಕ್ಲಬ್ ಧಾರವಾಡ ಹೆರಿಟೇಜ್ ಅಧ್ಯಕ್ಷ ಡಾ. ಭುವನೇಶ ಆರಾಧ್ಯ ಮಾತನಾಡಿ, ಶಾಲೆ ಅಂದವಾಗಿದ್ದರೆ ಮಕ್ಕಳು ಉತ್ಸಾಹದಿಂದ ಕಲಿಯಲು ಸಾಧ್ಯ. ಶಿಕ್ಷಣದಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಅದ್ದರಿಂದ ಅತ್ಯುತ್ತಮ ರಾಷ್ಟ್ರ ನಿರ್ಮಿಸಲು ಸಾಧ್ಯ, ಒಳ್ಳೆಯ ಶಿಕ್ಷಣದಿಂದ ಉದ್ಯೋಗ ಪಡೆಯಬಹುದು, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಸಮಾಜದ ಸೇವೆ ಮಾಡುವುದನ್ನು ರೂಢಿಸಿಕೊಳ್ಳಿ. ಪಾಲಕರನ್ನು ಗೌರವಿಸಿ. ಹಣ ಮುಖ್ಯವಲ್ಲ ಮಾನವೀಯ ಮೌಲ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತ್ಯಜಿತ್ ಮೂರೆ ಮಾತನಾಡಿ, ಮುಂಬರುವ ದಿನಗಳಲ್ಲಿ ನಿಮ್ಮ ಶಾಲೆಗೆ ವಾಲಿಬಾಲ್ ಮೈದಾನ ನಿರ್ಮಾಣ ಮಾಡಿ ಕೂಡುವ ಕೆಲಸಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಹೇಳಿದರು.

ಶಿಕ್ಷಕ ಪ್ರಕಾಶ ಠಾಕೂರ ತಮ್ಮ ಅನಿಸಿಕೆ ಹಂಚಿಕೂಂಡು ಸಂತಸ ವ್ಯಕ್ತಪಡಿಸಿದರು. ಕಾರ್ಯದರ್ಶಿ ಡಾ. ವಿಶ್ವನಾಥ ಪಾಟೀಲ, ವಾಣಿ ಇರಕಲ್, ಪುಂಡಲೀಕ ಜಗದಾಳೆ, ಶಿವಾಜಿ ಸೂಯ೯ವಂಶಿ, ಪ್ರಾಂಶುಪಾಲರಾದ ವಾಯ್.ಆರ್. ಕುರೇರ್ ವೇದಿಕೆಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...